logo
ಕನ್ನಡ ಸುದ್ದಿ  /  Photo Gallery  /  Five Killed, Two Injured As 2-storey Building Collapses In Amravati

Amravati building collapse: ಶಿಥಿಲಗೊಂಡ ಎರಡು ಅಂತಸ್ತಿನ ಕಟ್ಟಡ ಕುಸಿತ: ಐವರು ಸಾವು.. ಫೊಟೋಸ್​​ ನೋಡಿ

Oct 30, 2022 07:55 PM IST

ಎರಡು ಅಂತಸ್ತಿನ ಕಟ್ಟಡ ಕುಸಿದು ಐವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ನಗರದ ಪ್ರಭಾತ್ ಚೌಕ್​​ ಬಳಿ ನಡೆದಿದೆ. ಶಿಥಿಲಗೊಂಡ ಕಟ್ಟಡ ಇದಾಗಿದ್ದು, ಘಟನೆಯಲ್ಲಿ ಇನ್ನೂ ಇಬ್ಬರು ಗಾಯಗೊಂಡಿದ್ದಾರೆ. ಘಟನೆಗೆ ಸಂತಾಪ ಸೂಚಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಿಎಂ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ.

  • ಎರಡು ಅಂತಸ್ತಿನ ಕಟ್ಟಡ ಕುಸಿದು ಐವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ನಗರದ ಪ್ರಭಾತ್ ಚೌಕ್​​ ಬಳಿ ನಡೆದಿದೆ. ಶಿಥಿಲಗೊಂಡ ಕಟ್ಟಡ ಇದಾಗಿದ್ದು, ಘಟನೆಯಲ್ಲಿ ಇನ್ನೂ ಇಬ್ಬರು ಗಾಯಗೊಂಡಿದ್ದಾರೆ. ಘಟನೆಗೆ ಸಂತಾಪ ಸೂಚಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಿಎಂ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ.
ಮಹಾರಾಷ್ಟ್ರದ ಅಮರಾವತಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
(1 / 5)
ಮಹಾರಾಷ್ಟ್ರದ ಅಮರಾವತಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಅಮರಾವತಿ ನಗರದ ಪ್ರಭಾತ್ ಚೌಕ್​​ ಬಳಿ ಇಂದು ಸಂಜೆ ಘಟನೆ ನಡೆದಿದ್ದು, ಶಿಥಿಲಗೊಂಡ ಕಟ್ಟಡ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(2 / 5)
ಅಮರಾವತಿ ನಗರದ ಪ್ರಭಾತ್ ಚೌಕ್​​ ಬಳಿ ಇಂದು ಸಂಜೆ ಘಟನೆ ನಡೆದಿದ್ದು, ಶಿಥಿಲಗೊಂಡ ಕಟ್ಟಡ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಮರಾವತಿ ಜಿಲ್ಲಾಧಿಕಾರಿ ಪವನೀತ್ ಕೌರ್ ತಿಳಿಸಿದ್ದಾರೆ.
(3 / 5)
ಘಟನೆಯ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಮರಾವತಿ ಜಿಲ್ಲಾಧಿಕಾರಿ ಪವನೀತ್ ಕೌರ್ ತಿಳಿಸಿದ್ದಾರೆ.
ಕಟ್ಟಡದ ಅವಶೇಷಗಳಡಿ ಸಿಲುಕಿದ ಮೃತದೇಹಗಳನ್ನು ರಕ್ಷಣಾ ತಂಡ ಹೊರತೆಗೆದಿದೆ. ರಕ್ಷಣಾ ಕಾರ್ಯ ಮುಂದುವರಿದಿದೆ.
(4 / 5)
ಕಟ್ಟಡದ ಅವಶೇಷಗಳಡಿ ಸಿಲುಕಿದ ಮೃತದೇಹಗಳನ್ನು ರಕ್ಷಣಾ ತಂಡ ಹೊರತೆಗೆದಿದೆ. ರಕ್ಷಣಾ ಕಾರ್ಯ ಮುಂದುವರಿದಿದೆ.
ಕಟ್ಟಡ ಹಳೆಯದಾಗಿದ್ದು, ಶಿಥಿಲಗೊಂಡಿದ್ದರಿಂದ ಈ ವರ್ಷ ಜುಲೈನಲ್ಲಿ ಅಮರಾವತಿ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಕಟ್ಟಡವನ್ನು ಕೆಡವಲು ನೋಟಿಸ್ ನೀಡಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
(5 / 5)
ಕಟ್ಟಡ ಹಳೆಯದಾಗಿದ್ದು, ಶಿಥಿಲಗೊಂಡಿದ್ದರಿಂದ ಈ ವರ್ಷ ಜುಲೈನಲ್ಲಿ ಅಮರಾವತಿ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಕಟ್ಟಡವನ್ನು ಕೆಡವಲು ನೋಟಿಸ್ ನೀಡಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು