logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Haryana Violence: ನುಹ್ ಹಿಂಸಾಚಾರ; ಉತ್ತರ ಪ್ರದೇಶ, ಹರಿಯಾಣ, ದೆಹಲಿಗೆ ಸುಪ್ರೀಂ ಕೋರ್ಟ್ ನೋಟಿಸ್

Haryana Violence: ನುಹ್ ಹಿಂಸಾಚಾರ; ಉತ್ತರ ಪ್ರದೇಶ, ಹರಿಯಾಣ, ದೆಹಲಿಗೆ ಸುಪ್ರೀಂ ಕೋರ್ಟ್ ನೋಟಿಸ್

Aug 02, 2023 04:46 PM IST

ಹರಿಯಾಣದಲ್ಲಿನ ಹಿಂಸಾಚಾರವನ್ನು ವಿರೋಧಿಸಿ ವಿಎಚ್‌ಪಿ ನಡೆಸುತ್ತಿರುವ ಪ್ರತಿಭಟನೆಗಳನ್ನು ನಿಲ್ಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್ ಉತ್ತರ ಪ್ರದೇಶ, ಹರಿಯಾಣ ಹಾಗೂ ದೆಹಲಿಗೆ ನೋಟಿಸ್ ನೀಡಿದೆ.

Haryana Violence: ನುಹ್ ಜಿಲ್ಲೆಯಲ್ಲಿ ವಿಎಚ್‌ಪಿ ಮೆರವಣಿಗೆ ವಿವಾದ ಸಂಬಂಧ ಹಲವು ಜಿಲ್ಲೆಗಳಲ್ಲಿಧಾರ್ಮಿಕ ಹಿಂಸಾಚಾರ ಭುಗಿಲೆದ್ದಿದೆ. ಗುರುಗ್ರಾಮ, ಫರಿದಾಬಾದ್ ಜಿಲ್ಲೆಗಳಲ್ಲಿ ಹಿಂಸಾಚಾರ ನಡೆಯುತ್ತಿದೆ. 
(1 / 6)
Haryana Violence: ನುಹ್ ಜಿಲ್ಲೆಯಲ್ಲಿ ವಿಎಚ್‌ಪಿ ಮೆರವಣಿಗೆ ವಿವಾದ ಸಂಬಂಧ ಹಲವು ಜಿಲ್ಲೆಗಳಲ್ಲಿಧಾರ್ಮಿಕ ಹಿಂಸಾಚಾರ ಭುಗಿಲೆದ್ದಿದೆ. ಗುರುಗ್ರಾಮ, ಫರಿದಾಬಾದ್ ಜಿಲ್ಲೆಗಳಲ್ಲಿ ಹಿಂಸಾಚಾರ ನಡೆಯುತ್ತಿದೆ. (HT_PRINT)
ಹರಿಯಾಣದ ನುಹ್ ಜಿಲ್ಲೆಯಲ್ಲಿನ ಹಿಂಸಾಚಾರವು ಹಲವು ಭಾಗಗಳಿಗೆ ಹರಡುತ್ತಿದೆ. ಗುರುಗ್ರಾಮದಲ್ಲಿ ಗುಂಪೊಂದು ಪ್ರಾಥನಾ ಸ್ಥಳಕ್ಕೆ ಬೆಂಕಿ ಹಚ್ಚಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ವರದಿಯಾಗಿದೆ.
(2 / 6)
ಹರಿಯಾಣದ ನುಹ್ ಜಿಲ್ಲೆಯಲ್ಲಿನ ಹಿಂಸಾಚಾರವು ಹಲವು ಭಾಗಗಳಿಗೆ ಹರಡುತ್ತಿದೆ. ಗುರುಗ್ರಾಮದಲ್ಲಿ ಗುಂಪೊಂದು ಪ್ರಾಥನಾ ಸ್ಥಳಕ್ಕೆ ಬೆಂಕಿ ಹಚ್ಚಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ವರದಿಯಾಗಿದೆ.(HT)
ಸತತ ಮೂರನೇ ದಿನವೂ ಹಿಂಸಾಚಾರ ಮುಂದುವರಿದಿದ್ದು, ಗುಂಪೊಂದು ಪೊಲೀಸರ ಮೇಲೆ ದಾಳಿ ನಡೆಸಿದೆ. ಇದುವರೆಗೆ 21 ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೂರಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
(3 / 6)
ಸತತ ಮೂರನೇ ದಿನವೂ ಹಿಂಸಾಚಾರ ಮುಂದುವರಿದಿದ್ದು, ಗುಂಪೊಂದು ಪೊಲೀಸರ ಮೇಲೆ ದಾಳಿ ನಡೆಸಿದೆ. ಇದುವರೆಗೆ 21 ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೂರಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.(PTI)
ಹರಿಯಾಣದಲ್ಲಿನ ಹಿಂಸಾಚಾರದಲ್ಲಿ ಇದುವರೆಗೆ 6 ಮಂದಿ ಸಾವನ್ನಪ್ಪಿದ್ದಾರೆ. ವಿವಿಧ ಸ್ಥಳಗಳಲ್ಲಿ ನಡೆದ ಘಟನೆಗಳಲ್ಲಿ ಕನಿಷ್ಠ 100 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
(4 / 6)
ಹರಿಯಾಣದಲ್ಲಿನ ಹಿಂಸಾಚಾರದಲ್ಲಿ ಇದುವರೆಗೆ 6 ಮಂದಿ ಸಾವನ್ನಪ್ಪಿದ್ದಾರೆ. ವಿವಿಧ ಸ್ಥಳಗಳಲ್ಲಿ ನಡೆದ ಘಟನೆಗಳಲ್ಲಿ ಕನಿಷ್ಠ 100 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.(PTI)
ಹಿಂಸಾಚಾರದಲ್ಲಿ ಮಾಲ್‌ಗಳು, ಅಂಗಡಿಗಳು ಹಾಗೂ ಕೈಗಾರಿಕೆಗಳು ಗುರಿಯಾಗುತ್ತಿವೆ. ಹೀಗಾಗಿ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಹರಿಯಾಣ ಸರ್ಕಾರ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದೆ. 
(5 / 6)
ಹಿಂಸಾಚಾರದಲ್ಲಿ ಮಾಲ್‌ಗಳು, ಅಂಗಡಿಗಳು ಹಾಗೂ ಕೈಗಾರಿಕೆಗಳು ಗುರಿಯಾಗುತ್ತಿವೆ. ಹೀಗಾಗಿ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಹರಿಯಾಣ ಸರ್ಕಾರ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದೆ. (PTI)
ಹರಿಯಾಣದ ನುಹ್‌ನಲ್ಲಿ ನಡೆದ ಹಿಂಸಾಚಾರ ಖಂಡಿಸಿ ವಿಶ್ವ ಹಿಂದೂ ಪರಿಷತ್ ನಡೆಸುತ್ತಿರುವ ಪ್ರತಿಭಟನಾ ರಾಲಿಗಳನ್ನು ತಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್, ಹರಿಯಾಣ, ಉತ್ತರ ಪ್ರದೇಶ ಹಾಗೂ ದೆಹಲಿಗೆ ನೋಟಿಸ್ ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್‌ ಭಟ್ಟಿ ಅವರಿದ್ದ ದ್ವಿಸದಸ್ಯ ಪೀಠ, ಪ್ರತಿಭಟನೆಯಲ್ಲಿ ದ್ವೇಷದ ಮಾತು, ಹಿಂಸಾಚಾರಕ್ಕೆ ಅವಕಾಶ ನೀಡಬಾರದು. ಅಗತ್ಯ ಬಿದ್ದರೆ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸುವಂತೆ ಸೂಚಿಸಿದೆ.
(6 / 6)

    ಹಂಚಿಕೊಳ್ಳಲು ಲೇಖನಗಳು