logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುವ ಹಣ್ಣುಗಳಿವು

ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುವ ಹಣ್ಣುಗಳಿವು

Sep 27, 2024 10:42 AM IST

ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡಲು ಮತ್ತು ಹೃದಯರಕ್ತನಾಳದ ಆರೋಗ್ಯವನ್ನು ಉತ್ತೇಜಿಸಲು ಹೃದಯಕ್ಕೆ ಆರೋಗ್ಯಕರವಾದ ಆಹಾರವನ್ನು ಸೇವಿಸುವುದು ಅತ್ಯಗತ್ಯ. ಹೃದಯದ ಅಪಾಯವನ್ನು ಕಡಿಮೆ ಮಾಡಲು ಈ ಹಣ್ಣುಗಳನ್ನು ಸೇವಿಸಬಹದು.

ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡಲು ಮತ್ತು ಹೃದಯರಕ್ತನಾಳದ ಆರೋಗ್ಯವನ್ನು ಉತ್ತೇಜಿಸಲು ಹೃದಯಕ್ಕೆ ಆರೋಗ್ಯಕರವಾದ ಆಹಾರವನ್ನು ಸೇವಿಸುವುದು ಅತ್ಯಗತ್ಯ. ಹೃದಯದ ಅಪಾಯವನ್ನು ಕಡಿಮೆ ಮಾಡಲು ಈ ಹಣ್ಣುಗಳನ್ನು ಸೇವಿಸಬಹದು.
ಹೃದಯದ ಆರೋಗ್ಯಕ್ಕೆ ಈ ಹಣ್ಣುಗಳ ಸೇವನೆಯು ಆರೋಗ್ಯಕರವಾಗಿರಿಸುತ್ತದೆ. ಈ ಹಣ್ಣುಗಳಲ್ಲಿ ವಿಟಮಿನ್‍ಗಳು, ಖನಿಜಗಳು, ಉತ್ಕರ್ಷಣ ನಿರೋಧಕಗಳು ಮತ್ತು ನಾರಿನಾಂಶದಿಂದ ಸಮೃದ್ಧವಾಗಿವೆ.
(1 / 6)
ಹೃದಯದ ಆರೋಗ್ಯಕ್ಕೆ ಈ ಹಣ್ಣುಗಳ ಸೇವನೆಯು ಆರೋಗ್ಯಕರವಾಗಿರಿಸುತ್ತದೆ. ಈ ಹಣ್ಣುಗಳಲ್ಲಿ ವಿಟಮಿನ್‍ಗಳು, ಖನಿಜಗಳು, ಉತ್ಕರ್ಷಣ ನಿರೋಧಕಗಳು ಮತ್ತು ನಾರಿನಾಂಶದಿಂದ ಸಮೃದ್ಧವಾಗಿವೆ.
ಸೇಬು: ಸೇಬಿನಲ್ಲಿ ನಾರಿನಂಶ ಅಧಿಕವಾಗಿದ್ದು, ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು, ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ನಿವಾರಿಸಲು ಸಹಕಾರಿಯಾಗಿದೆ. ಸೇಬಿನಲ್ಲಿರುವ ಪೊಟ್ಯಾಶಿಯಮ್ ಆರೋಗ್ಯಕರ ರಕ್ತದೊತ್ತಡ ಮಟ್ಟವನ್ನು ಬೆಂಬಲಿಸುತ್ತದೆ.
(2 / 6)
ಸೇಬು: ಸೇಬಿನಲ್ಲಿ ನಾರಿನಂಶ ಅಧಿಕವಾಗಿದ್ದು, ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು, ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ನಿವಾರಿಸಲು ಸಹಕಾರಿಯಾಗಿದೆ. ಸೇಬಿನಲ್ಲಿರುವ ಪೊಟ್ಯಾಶಿಯಮ್ ಆರೋಗ್ಯಕರ ರಕ್ತದೊತ್ತಡ ಮಟ್ಟವನ್ನು ಬೆಂಬಲಿಸುತ್ತದೆ.(freepik)
ನೇರಳೆ ಹಣ್ಣುಗಳು: ಇವು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ಎದುರಿಸಲು ಸಹಾಯ ಮಾಡುತ್ತವೆ. ನೇರಳೆ ಹಣ್ಣುಗಳು ನಾರಿನಾಂಶದಿಂದ ಸಮೃದ್ಧವಾಗಿದೆ. ನೇರಳೆ ಹಣ್ಣುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಹೃದಯರಕ್ತನಾಳದ ಆರೋಗ್ಯವನ್ನು ಹೆಚ್ಚಿಸುತ್ತದೆ ಮತ್ತು ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡುತ್ತದೆ.
(3 / 6)
ನೇರಳೆ ಹಣ್ಣುಗಳು: ಇವು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ಎದುರಿಸಲು ಸಹಾಯ ಮಾಡುತ್ತವೆ. ನೇರಳೆ ಹಣ್ಣುಗಳು ನಾರಿನಾಂಶದಿಂದ ಸಮೃದ್ಧವಾಗಿದೆ. ನೇರಳೆ ಹಣ್ಣುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಹೃದಯರಕ್ತನಾಳದ ಆರೋಗ್ಯವನ್ನು ಹೆಚ್ಚಿಸುತ್ತದೆ ಮತ್ತು ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡುತ್ತದೆ.(freepik)
ಸಿಟ್ರಸ್ ಹಣ್ಣುಗಳು: ಕಿತ್ತಳೆ, ದ್ರಾಕ್ಷಿಹಣ್ಣು, ನಿಂಬೆಹಣ್ಣುಗಳಲ್ಲಿ ವಿಟಮಿನ್ ಸಿ ಅಂಶವಾಗಿದ್ದು, ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸಿಟ್ರಸ್ ಹಣ್ಣುಗಳಲ್ಲಿನ ಉತ್ಕರ್ಷಣ ನಿರೋಧಕಗಳು ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇವುಗಳ ಸೇವನೆಯು ಹೃದಯದ ಆರೋಗ್ಯಕ್ಕೆ ಮತ್ತು ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡುತ್ತದೆ.
(4 / 6)
ಸಿಟ್ರಸ್ ಹಣ್ಣುಗಳು: ಕಿತ್ತಳೆ, ದ್ರಾಕ್ಷಿಹಣ್ಣು, ನಿಂಬೆಹಣ್ಣುಗಳಲ್ಲಿ ವಿಟಮಿನ್ ಸಿ ಅಂಶವಾಗಿದ್ದು, ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸಿಟ್ರಸ್ ಹಣ್ಣುಗಳಲ್ಲಿನ ಉತ್ಕರ್ಷಣ ನಿರೋಧಕಗಳು ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇವುಗಳ ಸೇವನೆಯು ಹೃದಯದ ಆರೋಗ್ಯಕ್ಕೆ ಮತ್ತು ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡುತ್ತದೆ.(freepik)
ಬೆಣ್ಣೆ ಹಣ್ಣು (Avocados): ಆವಕಾಡೊ ಅಥವಾ ಬೆಣ್ಣೆ ಹಣ್ಣು ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಆರೋಗ್ಯಕರ ಕೊಲೆಸ್ಟ್ರಾಲ್ ಮಟ್ಟವನ್ನು ಬೆಂಬಲಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ ಮತ್ತು ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡುತ್ತದೆ.
(5 / 6)
ಬೆಣ್ಣೆ ಹಣ್ಣು (Avocados): ಆವಕಾಡೊ ಅಥವಾ ಬೆಣ್ಣೆ ಹಣ್ಣು ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಆರೋಗ್ಯಕರ ಕೊಲೆಸ್ಟ್ರಾಲ್ ಮಟ್ಟವನ್ನು ಬೆಂಬಲಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ ಮತ್ತು ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡುತ್ತದೆ.(freepik)
ದಾಳಿಂಬೆ: ದಾಳಿಂಬೆಯು ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಮತ್ತು ರಕ್ತದೊತ್ತಡವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ದಾಳಿಂಬೆಯಲ್ಲಿರುವ ಉತ್ಕರ್ಷಣ ನಿರೋಧಕ ಅಂಶಗಳಿಂದಾಗಿ ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ದಾಳಿಂಬೆಯ ನಿಯಮಿತ ಸೇವನೆಯು ಹೃದಯರಕ್ತನಾಳದ ಆರೋಗ್ಯವನ್ನು ಹೆಚ್ಚಿಸುತ್ತದೆ.
(6 / 6)
ದಾಳಿಂಬೆ: ದಾಳಿಂಬೆಯು ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಮತ್ತು ರಕ್ತದೊತ್ತಡವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ದಾಳಿಂಬೆಯಲ್ಲಿರುವ ಉತ್ಕರ್ಷಣ ನಿರೋಧಕ ಅಂಶಗಳಿಂದಾಗಿ ಹೃದಯ ಸ್ತಂಭನದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ದಾಳಿಂಬೆಯ ನಿಯಮಿತ ಸೇವನೆಯು ಹೃದಯರಕ್ತನಾಳದ ಆರೋಗ್ಯವನ್ನು ಹೆಚ್ಚಿಸುತ್ತದೆ.(freepik)

    ಹಂಚಿಕೊಳ್ಳಲು ಲೇಖನಗಳು