logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Garlic Benefits: ಪ್ರತಿದಿನ ಬೆಳ್ಳುಳ್ಳಿ ತಿಂದ್ರೆ ಕ್ಯಾನ್ಸರ್‌ ಬರೋಲ್ಲ, ಇದ್ರಿಂದ ಇನ್ನೂ ಎಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ

Garlic Benefits: ಪ್ರತಿದಿನ ಬೆಳ್ಳುಳ್ಳಿ ತಿಂದ್ರೆ ಕ್ಯಾನ್ಸರ್‌ ಬರೋಲ್ಲ, ಇದ್ರಿಂದ ಇನ್ನೂ ಎಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ

May 07, 2024 04:13 PM IST

ಭಾರತೀಯ ಮಸಾಲೆ ಪದಾರ್ಥಗಳಲ್ಲಿ ಬೆಳ್ಳುಳ್ಳಿಗೆ ವಿಶೇಷ ಸ್ಥಾನವಿದೆ. ಪ್ರತಿದಿನ ಬೆಳ್ಳುಳ್ಳಿ ತಿನ್ನುವುದರಿಂದ ಕ್ಯಾನ್ಸರ್ ಬರುವ ಸಾಧ್ಯತೆ ಕಡಿಮೆಯಾಗುತ್ತದೆ. ಇದಲ್ಲದೆ, ಬೆಳ್ಳುಳ್ಳಿಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಬೆಳ್ಳುಳ್ಳಿಯಿಂದ ದೇಹಕ್ಕಾಗುವ ಪ್ರಯೋಜನಗಳನ್ನು ತಿಳಿಯಿರಿ. 

  • ಭಾರತೀಯ ಮಸಾಲೆ ಪದಾರ್ಥಗಳಲ್ಲಿ ಬೆಳ್ಳುಳ್ಳಿಗೆ ವಿಶೇಷ ಸ್ಥಾನವಿದೆ. ಪ್ರತಿದಿನ ಬೆಳ್ಳುಳ್ಳಿ ತಿನ್ನುವುದರಿಂದ ಕ್ಯಾನ್ಸರ್ ಬರುವ ಸಾಧ್ಯತೆ ಕಡಿಮೆಯಾಗುತ್ತದೆ. ಇದಲ್ಲದೆ, ಬೆಳ್ಳುಳ್ಳಿಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಬೆಳ್ಳುಳ್ಳಿಯಿಂದ ದೇಹಕ್ಕಾಗುವ ಪ್ರಯೋಜನಗಳನ್ನು ತಿಳಿಯಿರಿ. 
ಬೆಳ್ಳುಳ್ಳಿಯು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಬೆಳ್ಳುಳ್ಳಿಯನ್ನು ಹಸಿಯಾಗಿ ತಿನ್ನುವುದು ಉತ್ತಮ. ಆದರೆ ಇದರ ಘಾಟು ಹಲವರಿಗೆ ಹಿಡಿಯುವುದಿಲ್ಲ. ಕೆಲವರಿಗೆ ಇದು ದುರ್ವಾಸನೆ ಅನ್ನಿಸುತ್ತದೆ, ಹಾಗಾಗಿ ಹಸಿಯಾಗಿ ತಿನ್ನಲು ಆಗದವರು ಆಹಾರ ಪದಾರ್ಥಗಳ ಜೊತೆಗೆ ಸೇರಿಸಿ ತಿನ್ನುತ್ತಾರೆ. ಪ್ರತಿದಿನ ಬೆಳ್ಳುಳ್ಳಿ ಸೇವನೆಯಿಂದ ಆರೋಗ್ಯಕ್ಕೆ ನೂರಾರು ಪ್ರಯೋಜನಗಳಿವೆ. ಇದರಿಂದ ಏನ್ನೆಲ್ಲಾ ಪ್ರಯೋಜನಗಳಿವೆ ನೋಡಿ. 
(1 / 10)

ಬೆಳ್ಳುಳ್ಳಿ ತಿನ್ನುವುದರಿಂದ ದೇಹವು ಇತರ ಆಹಾರಗಳಿಂದ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯವಾಗುತ್ತದೆ. ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ.
(2 / 10)

ಗ್ಯಾಸ್ಟಿಕ್‌ ನಿವಾರಿಸಲು ಇದು ಉಪಯುಕ್ತ. ಸೊಂಟದ ಸುತ್ತಲಿನ ಬೊಜ್ಜು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಚಯಾಪಚಯವನ್ನು ಹೆಚ್ಚಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ. 
(3 / 10)

ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ರಕ್ತನಾಳಗಳಲ್ಲಿರುವ ಕೆಟ್ಟ ಬ್ಯಾಕ್ಟೀರಿಯಾಗಳನ್ನು ಹೊರಹಾಕುತ್ತದೆ.
(4 / 10)

ಬೆಳ್ಳುಳ್ಳಿ ತಿನ್ನುವುದರಿಂದ ಅದರಲ್ಲಿರುವ ಪೋಷಕಾಂಶಗಳು ದೇಹದಲ್ಲಿನ ಕ್ಯಾನ್ಸರ್ ಕೋಶಗಳ ವಿರುದ್ಧ ಹೋರಾಡುತ್ತವೆ. ಆ ಮೂಲಕ ಕ್ಯಾನ್ಸರ್‌ನ ಅಪಾಯವನ್ನು ಕಡಿಮೆ ಮಾಡುತ್ತದೆ.
(5 / 10)

ಇದು ದೇಹದಲ್ಲಿನ ಅಪಧಮನಿಗಳನ್ನು ಆರೋಗ್ಯವಾಗಿರಿಸುತ್ತದೆ ಮತ್ತು ಹೃದ್ರೋಗದಿಂದ ರಕ್ಷಿಸುತ್ತದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ. ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ.
(6 / 10)

ಬೆಳ್ಳುಳ್ಳಿ ತಿನ್ನುವುದರಿಂದ ದೇಹಕ್ಕೆ ರೋಗನಿರೋಧಕ ಶಕ್ತಿ ದೊರೆಯುತ್ತದೆ, ದೇಹಕ್ಕೆ ಚೈತನ್ಯ ಸಿಗುತ್ತದೆ, ದೇಹದಲ್ಲಿನ ವಿಷಾಂಶಗಳನ್ನು ಹೊರ ಹಾಕಿ ಆಯುಷ್ಯ ವೃದ್ಧಿಸುತ್ತದೆ.
(7 / 10)

ದೇಹದ ಆಯಾಸವನ್ನು ಹೋಗಲಾಡಿಸುತ್ತದೆ. ರಕ್ತದೊತ್ತಡ, ಕೊಲೆಸ್ಟ್ರಾಲ್, ಹೃದಯಾಘಾತ ತಡೆಯುತ್ತದೆ. ಬೆಳ್ಳುಳ್ಳಿ ರಕ್ತನಾಳಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.
(8 / 10)

ದೇಹದ ಕೊಬ್ಬನ್ನು ಕಡಿಮೆ ಮಾಡುವುದು ತೂಕ ನಷ್ಟಕ್ಕೆ ಕಾರಣವಾಗುತ್ತದೆ. ತಿಂಗಳೊಳಗೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಕೈ ಮತ್ತು ಕಾಲುಗಳಲ್ಲಿನ ನೋವನ್ನು ಕಡಿಮೆ ಮಾಡುತ್ತದೆ. ಗ್ಯಾಸ್ಟಿಕ್‌ ಸಂಪೂರ್ಣವಾಗಿ ಕಡಿಮೆ ಮಾಡಿ, ಹೊಟ್ಟೆಯುಬ್ಬರದಂತಹ ತೊಂದರೆಯನ್ನು ನಿವಾರಿಸುತ್ತದೆ. ಹಾಗಾಗಿ ಬೆಳ್ಳುಳ್ಳಿಯನ್ನು ಪ್ರತಿದಿನ ತಿನ್ನಬೇಕು.
(9 / 10)

ಆಹಾರ, ಆರೋಗ್ಯ, ಫ್ಯಾಷನ್‌, ರಿಲೇಷನ್‌ಶಿಪ್‌ , ಪೇರೆಂಟಿಂಗ್‌ ಸಂಬಂಧಿಸಿದ ಲೇಖನಗಳಿಗಾಗಿ ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ ಲೈಫ್‌ಸ್ಟೈಲ್‌ ಪುಟಕ್ಕೆ ಭೇಟಿ ನೀಡಿ 
(10 / 10)

    ಹಂಚಿಕೊಳ್ಳಲು ಲೇಖನಗಳು