logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Bengaluru Rains: ಬೆಂಗಳೂರಿನಲ್ಲಿ ಭಾರಿ ಮಳೆ ತಂದ ಅವಾಂತರ; ರಸ್ತೆಗಳಿಗೆ ನುಗ್ಗಿದ ನೀರು, ಸಿಎಂ ಸಿದ್ದರಾಮಯ್ಯ ತುರ್ತು ಸಭೆ; ಫೋಟೋಸ್

Bengaluru Rains: ಬೆಂಗಳೂರಿನಲ್ಲಿ ಭಾರಿ ಮಳೆ ತಂದ ಅವಾಂತರ; ರಸ್ತೆಗಳಿಗೆ ನುಗ್ಗಿದ ನೀರು, ಸಿಎಂ ಸಿದ್ದರಾಮಯ್ಯ ತುರ್ತು ಸಭೆ; ಫೋಟೋಸ್

May 21, 2023 07:52 PM IST

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ಸುರಿದ ಧಾರಾಕಾರ ಮಳೆ ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದೆ. ಕೆಆರ್‌ ವೃತ್ತದ ಅಂಡರ್ ಪಾಸ್‌ ಬಳಿ ಮಳೆ ನೀರಿನಿಂದ ಮಹಿಳೆ ಮೃತಪಟ್ಟಿದ್ದಾಳೆ. ಪೊಲೀಸ್ ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ತುರ್ತು ಸಭೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿಂದು ಮಧ್ಯಾಹ್ನದ ಬಳಿಕ ಬಿರುಗಾಳಿ, ಗುಡುಗು, ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಮಳೆಯಿಂದ ಹಲವೆಡೆ ಭಾರಿ ಅವಾಂತರವೇ ಸೃಷ್ಟಿಯಾಗಿದೆ.
(1 / 6)

ನಗರದಲ್ಲಿ ಭಾರಿ ಮಳೆಯಿಂದಾಗಿ ಕೆಆರ್‌ ಸರ್ಕಲ್‌ನ ಅಂಡರ್‌ಪಾಸ್‌ ಹೆಚ್ಚಿನ ಮಳೆ ನೀರು ನುಗ್ದಿದ ಪರಿಣಾಮ ಇನ್ಫೋಸಿಸ್ ಉದ್ಯೋಗಿಯೊಬ್ಬರು ಮೃತಪಟ್ಟಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀರು ಹಾಗೂ ಇತರೆ ರಕ್ಷಣಾ ಸಿಬ್ಬಂದಿ ನೀರಿನಲ್ಲಿ ಸಿಲುಕಿದ್ದ ಇತರರನ್ನು ರಕ್ಷಿಸಿದ್ದಾರೆ. 
(2 / 6)

ರಾಜ್ಯ ರಾಜ್ಯಧಾನಿ ಬೆಂಗಳೂರಿನ ಹಲವು ಕಡೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ.
(3 / 6)

ಮಳೆ ಅನಾಹುತದ ಮಾಹಿತಿ ದೊರೆಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರು ಮತ್ತು ಬಿಬಿಎಂಪಿ ಆಯುಕ್ತರ ಜತೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
(4 / 6)

ಮಳೆಯಿಂದ ಉರುಳಿ ಬಿದ್ದಿರುವ ಮರಗಳನ್ನು ತಕ್ಷಣ ತೆರವುಗೊಳಿಸಬೇಕು, ಮಳೆ ಅನಾಹುತದಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು.  ನಿರ್ಲಕ್ಷ್ಯ ತೋರಿ ಸಾರ್ವಜನಿಕರಿಗೆ ತೊಂದರೆ ಆದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
(5 / 6)

 ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಇಂದು ಸಂಜೆ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ಮಾಡಿ ಮಳೆಯಿಂದ ಮೃತಪಟ್ಟ  23 ವರ್ಷದ ಭಾನುರೇಖಾ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.ಗಾಯಾಳುಗಳನ್ನು ಆಸ್ಪತ್ರೆಗೆ ತಕ್ಷಣ ದಾಖಲಿಸಿಕೊಳ್ಳದೆ ವಿಳಂಬ ಮಾಡಿದ್ದರ ಕುರಿತು ಮುಖ್ಯಮಂತ್ರಿಯವರು  ತನಿಖೆಗೆ ಆದೇಶಿದ್ದಾರೆ.
(6 / 6)

    ಹಂಚಿಕೊಳ್ಳಲು ಲೇಖನಗಳು