logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Icc Champions Trophy: 8 ತಂಡಗಳ ನಡುವೆ 2 ಗುಂಪು, ಭಾರತದ ಪಂದ್ಯಗಳ ವೇಳಾಪಟ್ಟಿ, ಯಾವಾಗ, ಎಲ್ಲಿ? ಇಲ್ಲಿದೆ ವಿವರ

ICC Champions Trophy: 8 ತಂಡಗಳ ನಡುವೆ 2 ಗುಂಪು, ಭಾರತದ ಪಂದ್ಯಗಳ ವೇಳಾಪಟ್ಟಿ, ಯಾವಾಗ, ಎಲ್ಲಿ? ಇಲ್ಲಿದೆ ವಿವರ

Dec 23, 2024 12:19 PM IST

ICC Champions Trophy 2025: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಯಾವ ಗುಂಪಿನಲ್ಲಿದೆ? ಯಾವ ತಂಡಗಳೊಂದಿಗೆ ಸೆಣಸಾಟ ನಡೆಸಲಿದೆ? ಭಾರತದ ವೇಳಾಪಟ್ಟಿ, ಗುಂಪುಗಳ ವಿವರ ಇಲ್ಲಿದೆ.

  • ICC Champions Trophy 2025: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಯಾವ ಗುಂಪಿನಲ್ಲಿದೆ? ಯಾವ ತಂಡಗಳೊಂದಿಗೆ ಸೆಣಸಾಟ ನಡೆಸಲಿದೆ? ಭಾರತದ ವೇಳಾಪಟ್ಟಿ, ಗುಂಪುಗಳ ವಿವರ ಇಲ್ಲಿದೆ.
ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಭಾರತದ ಪಂದ್ಯಗಳು ದುಬೈನಲ್ಲಿ ನಡೆಯಲಿವೆ. ಭಾರತ ತಂಡ, ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ಹಿನ್ನೆಲೆ ಐಸಿಸಿ ಈ ತೀರ್ಮಾನ ಕೈಗೊಂಡಿದೆ.
(1 / 6)

ಭಾರತದ ಪಂದ್ಯಗಳು ದುಬೈನಲ್ಲಿ ನಡೆದರೆ ಉಳಿದ ಪಂದ್ಯಗಳು ಪಾಕಿಸ್ತಾನದ ಕರಾಚಿ, ಲಾಹೋರ್, ರಾವಲ್ಪಿಂಡಿ ಕ್ರಿಕೆಟ್ ಮೈದಾನಗಳಲ್ಲಿ ಸೆಣಸಾಟ ನಡೆಸಲಿವೆ. ಆದರೆ ಸೆಮಿಫೈನಲ್​ಗಳು, ಫೈನಲ್​ ಪಂದ್ಯಗಳು ನಡೆಯುವ ಸ್ಥಳಗಳು ಅಂತಿಮಗೊಂಡಿಲ್ಲ.
(2 / 6)

ಭಾರತದ ಮೂರು ಪಂದ್ಯಗಳು ಸಹ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ವಿರುದ್ಧದ ಪಂದ್ಯವೂ ಇಲ್ಲೇ ನಡೆಯಬಹುದು ಎಂದು ಮೂಲಗಳು ತಿಳಿಸಿವೆ.
(3 / 6)

ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿವೆ. 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ತಂಡಗಳು ಟೂರ್ನಿಯ ಒಂದೇ ಗುಂಪಿನಲ್ಲಿವೆ. ಬಿ ಗುಂಪಿನಲ್ಲಿ ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿವೆ.
(4 / 6)

ಚಾಂಪಿಯನ್ಸ್ ಟ್ರೋಫಿಯ ಕರಡು ವೇಳಾಪಟ್ಟಿಯ ಪ್ರಕಾರ, ಭಾರತವು ಫೆಬ್ರವರಿ 20 ರಂದು ಟೂರ್ನಿಯಲ್ಲಿ ಅಭಿಯಾನ ಆರಂಭಿಸಲಿದೆ. . ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲಿದೆ. ಭಾರತ-ಬಾಂಗ್ಲಾದೇಶ ನಡುವಿನ ಪಂದ್ಯ ದುಬೈ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
(5 / 6)

ಭಾರತ-ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಪಂದ್ಯವು ಫೆಬ್ರವರಿ 23, 2025ರಂದು ದುಬೈನಲ್ಲಿ ನಡೆಯಲಿದೆ. ಮಾರ್ಚ್ 2 ರಂದು ಇದೇ ಮೈದಾನದಲ್ಲಿ ನಡೆಯಲಿರುವ ಲೀಗ್​​ನ ಕೊನೆಯ ಪಂದ್ಯದಲ್ಲಿ ಭಾರತ, ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಒಂದು ವೇಳೆ ಭಾರತ ಸೆಮಿಫೈನಲ್​ಗೆ ಪ್ರವೇಶಿಸಿದರೆ ಆ ಪಂದ್ಯವನ್ನೂ ದುಬೈನಲ್ಲೇ ಆಡಲಿದೆ.
(6 / 6)

    ಹಂಚಿಕೊಳ್ಳಲು ಲೇಖನಗಳು