logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಗಂಗೂಲಿ, ಕೊಹ್ಲಿ ಅಥವಾ ರೋಹಿತ್… ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಅತ್ಯಂತ ಯಶಸ್ವಿ ನಾಯಕ ಯಾರು?

ಗಂಗೂಲಿ, ಕೊಹ್ಲಿ ಅಥವಾ ರೋಹಿತ್… ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಅತ್ಯಂತ ಯಶಸ್ವಿ ನಾಯಕ ಯಾರು?

Mar 11, 2024 08:00 AM IST

Most Test Win as Indian Captain: ಭಾರತೀಯ ಟೆಸ್ಟ್​ ಕ್ರಿಕೆಟ್​ ಇತಿಹಾಸದಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದಿರುವ ನಾಯಕ ಯಾರು ಎಂಬುದರ ಕುರಿತು ಈ ವರದಿಯಲ್ಲಿ ನೋಡೋಣ.

  • Most Test Win as Indian Captain: ಭಾರತೀಯ ಟೆಸ್ಟ್​ ಕ್ರಿಕೆಟ್​ ಇತಿಹಾಸದಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದಿರುವ ನಾಯಕ ಯಾರು ಎಂಬುದರ ಕುರಿತು ಈ ವರದಿಯಲ್ಲಿ ನೋಡೋಣ.
ಧರ್ಮಶಾಲಾ ಟೆಸ್ಟ್​ ಪಂದ್ಯದಲ್ಲಿ ಭಾರತ ತಂಡವು, ಇಂಗ್ಲೆಂಡ್ ತಂಡವನ್ನು ಇನ್ನಿಂಗ್ಸ್ ಮತ್ತು 64 ರನ್​​ಗಳಿಂದ ಸೋಲಿಸಿತು. ಇದರೊಂದಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸಿಕ್ಕ 10ನೇ ಟೆಸ್ಟ್ ಗೆಲುವಾಗಿದೆ, ಹಾಗಾದರೆ ಟೆಸ್ಟ್ ಕ್ರಿಕೆಟ್​​​ನಲ್ಲಿ ಭಾರತದ ನಾಯಕನಾಗಿ ಅತಿ ಹೆಚ್ಚು ಗೆಲುವು ಕಂಡ ಅತ್ಯಂತ ಯಶಸ್ವಿ ನಾಯಕ ಯಾರು? ಇಲ್ಲಿದೆ ವಿವರ 
(1 / 6)

ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಈವರೆಗೆ 16 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 10 ಪಂದ್ಯಗಳನ್ನು ಗೆದ್ದಿದೆ. ಆ ಮೂಲಕ ಅತಿ ಹೆಚ್ಚು ಟೆಸ್ಟ್ ಗೆದ್ದ ನಾಯಕರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.
(2 / 6)

ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. 47 ಪಂದ್ಯಗಳಿಗೆ ನಾಯಕತ್ವ ವಹಿಸಿ 14 ಗೆಲುವು ಮಾತ್ರ ಸಾಧಿಸಿದ್ದಾರೆ. 14 ಸೋಲು, 19 ಡ್ರಾ ಸಾಧಿಸಿದ್ದಾರೆ.
(3 / 6)

3ನೇ ಸ್ಥಾನದಲ್ಲಿರುವ ಸೌರವ್ ಗಂಗೂಲಿ ಅವರು 49 ಟೆಸ್ಟ್ ಪಂದ್ಯಗಳಿಗೆ ನಾಯಕತ್ವ ವಹಿಸಿದ್ದು, 21ರಲ್ಲಿ ಜಯ ಸಾಧಿಸಿದ್ದಾರೆ. ಗಂಗೂಲಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು.
(4 / 6)

ಭಾರತದ ಟೆಸ್ಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಎರಡನೇ ಸ್ಥಾನದಲ್ಲಿದ್ದಾರೆ. ಧೋನಿ 60 ಪಂದ್ಯಗಳನ್ನು ಮುನ್ನಡೆಸಿ 27 ಜಯಿಸಿದ್ದು, 18 ಸೋಲು, 15 ಪಂದ್ಯಗಳಲ್ಲಿ ಡ್ರಾ ಸಾಧಿಸಿದ್ದಾರೆ.
(5 / 6)

ವಿರಾಟ್ ಕೊಹ್ಲಿ ಭಾರತದ ಪರ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಭಾರತ 40 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ. ಅವರ ಸಾರಥ್ಯದಲ್ಲಿ ಟೀಂ ಇಂಡಿಯಾ ವಿದೇಶಿ ನೆಲದಲ್ಲಿ 16 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ.
(6 / 6)

    ಹಂಚಿಕೊಳ್ಳಲು ಲೇಖನಗಳು