logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  35 ವರ್ಷಗಳ ಬಳಿಕ ಜಮ್ಮುವಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕಲರವ; ಆಜಾದ್ ಮೈದಾನದಲ್ಲಿ ಲೆಜೆಂಡ್ಸ್‌ ಲೀಗ್

35 ವರ್ಷಗಳ ಬಳಿಕ ಜಮ್ಮುವಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕಲರವ; ಆಜಾದ್ ಮೈದಾನದಲ್ಲಿ ಲೆಜೆಂಡ್ಸ್‌ ಲೀಗ್

Nov 30, 2023 07:30 PM IST

Legends League Cricket 2023 in Jammu: ಹಿಂದೆ ಭಾರತದ ಮುಕುಟ ಜಮ್ಮುವಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿತ್ತು. ಆದರೆ ಭಯೋತ್ಪಾದನೆಯಿಂದಾಗಿ ಅದನ್ನು ನಿಲ್ಲಿಸಲಾಯಿತು. ಇದೀಗ ಬರೋಬ್ಬರಿ 35 ವರ್ಷಗಳ ಬಳಿಕ ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಕಲರವ ಮತ್ತೆ ಮರುಕಳಿಸಿದೆ. ಹೀಗಾಗಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

  • Legends League Cricket 2023 in Jammu: ಹಿಂದೆ ಭಾರತದ ಮುಕುಟ ಜಮ್ಮುವಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿತ್ತು. ಆದರೆ ಭಯೋತ್ಪಾದನೆಯಿಂದಾಗಿ ಅದನ್ನು ನಿಲ್ಲಿಸಲಾಯಿತು. ಇದೀಗ ಬರೋಬ್ಬರಿ 35 ವರ್ಷಗಳ ಬಳಿಕ ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಕಲರವ ಮತ್ತೆ ಮರುಕಳಿಸಿದೆ. ಹೀಗಾಗಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
35 ವರ್ಷಗಳ ನಂತರ ಜಮ್ಮುವಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿದೆ. ಈಗಾಗಲೇ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ ಎರಡು ಪಂದ್ಯಗಳು ಯಶಸ್ವಿಯಾಗಿ ಪೂರ್ಣಗೊಂಡಿದೆ. ಹಾಗಂತ ಪಂದ್ಯವನ್ನು ವೀಕ್ಷಿಸಲು ಬಂದ ಅಭಿಮಾನಿಗಳ ಸಂಖ್ಯೆ ಕಡಿಮೆಯೇನೂ ಇರಲಿಲ್ಲ. ಜಮ್ಮುವಿನಲ್ಲಿ ಕ್ರಿಕೆಟ್ ಬೆಳವಣಿಗೆಗೆ ಈ ಪಂದ್ಯಗಳು ಇದು ಪ್ರಮುಖ ಪಾತ್ರ ವಹಿಸುತ್ತದೆ. ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣದಲ್ಲಿ ಮುಂದೆ ಮತ್ತಷ್ಟು ಪಂದ್ಯಗಳು ನಡೆಯಲಿವೆ.
(1 / 6)
35 ವರ್ಷಗಳ ನಂತರ ಜಮ್ಮುವಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿದೆ. ಈಗಾಗಲೇ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ ಎರಡು ಪಂದ್ಯಗಳು ಯಶಸ್ವಿಯಾಗಿ ಪೂರ್ಣಗೊಂಡಿದೆ. ಹಾಗಂತ ಪಂದ್ಯವನ್ನು ವೀಕ್ಷಿಸಲು ಬಂದ ಅಭಿಮಾನಿಗಳ ಸಂಖ್ಯೆ ಕಡಿಮೆಯೇನೂ ಇರಲಿಲ್ಲ. ಜಮ್ಮುವಿನಲ್ಲಿ ಕ್ರಿಕೆಟ್ ಬೆಳವಣಿಗೆಗೆ ಈ ಪಂದ್ಯಗಳು ಇದು ಪ್ರಮುಖ ಪಾತ್ರ ವಹಿಸುತ್ತದೆ. ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣದಲ್ಲಿ ಮುಂದೆ ಮತ್ತಷ್ಟು ಪಂದ್ಯಗಳು ನಡೆಯಲಿವೆ.(X @llct20)
ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣವನ್ನು 1966ರಲ್ಲಿ ನಿರ್ಮಿಸಲಾಯಿತು. 1988ರ ಡಿಸೆಂಬರ್ 19ರಂದು ಆ ಮೈದಾನದಲ್ಲಿ ಕೊನೆಯ ಅಂತಾರಾಷ್ಟ್ರೀಯ ಪಂದ್ಯ ನಡೆದಿದೆ. ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್‌ ತಂಡಗಳು ಮುಖಾಮುಖಿಯಾಗಿದ್ದವು. ಆದರೆ ಆ ಬಳಿಕ ಭಯೋತ್ಪಾದನೆಯಿಂದಾಗಿ ಮೂರು ದಶಕಗಳಿಗಿಂತಲೂ ಹೆಚ್ಚು ಕಾಲ ಈ ಮೈದಾನದಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ.
(2 / 6)
ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣವನ್ನು 1966ರಲ್ಲಿ ನಿರ್ಮಿಸಲಾಯಿತು. 1988ರ ಡಿಸೆಂಬರ್ 19ರಂದು ಆ ಮೈದಾನದಲ್ಲಿ ಕೊನೆಯ ಅಂತಾರಾಷ್ಟ್ರೀಯ ಪಂದ್ಯ ನಡೆದಿದೆ. ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್‌ ತಂಡಗಳು ಮುಖಾಮುಖಿಯಾಗಿದ್ದವು. ಆದರೆ ಆ ಬಳಿಕ ಭಯೋತ್ಪಾದನೆಯಿಂದಾಗಿ ಮೂರು ದಶಕಗಳಿಗಿಂತಲೂ ಹೆಚ್ಚು ಕಾಲ ಈ ಮೈದಾನದಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ.(PTI)
ಲೆಜೆಂಡ್ಸ್ ಲೀಗ್ ಕ್ರಿಕೆಟ್‌ ಬಳಿಕ ಪ್ರಮುಖ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಆತಿಥ್ಯ ವಹಿಸುವಲ್ಲಿ ಮತ್ತು ಜಮ್ಮುವಿನ ಮೌಲಾನಾ ಆಜಾದ್ ಸ್ಟೇಡಿಯಂ ಒಂದು ಹೆಜ್ಜೆ ಮುಂದಿಟ್ಟಿದೆ. ಲೆಜೆಂಡ್ಸ್ ಲೀಗ್ ಟೂರ್ನಿಯಲ್ಲಿ ಒಟ್ಟು ನಾಲ್ಕು ಪಂದ್ಯಗಳನ್ನು ಈ ಮೈದಾನದಲ್ಲಿ ಆಯೋಜಿಸಲಾಗಿದೆ. ಇನ್ನೆರಡು ಪಂದ್ಯಗಳು ನಡೆಯಬೇಕಿದೆ.
(3 / 6)
ಲೆಜೆಂಡ್ಸ್ ಲೀಗ್ ಕ್ರಿಕೆಟ್‌ ಬಳಿಕ ಪ್ರಮುಖ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಆತಿಥ್ಯ ವಹಿಸುವಲ್ಲಿ ಮತ್ತು ಜಮ್ಮುವಿನ ಮೌಲಾನಾ ಆಜಾದ್ ಸ್ಟೇಡಿಯಂ ಒಂದು ಹೆಜ್ಜೆ ಮುಂದಿಟ್ಟಿದೆ. ಲೆಜೆಂಡ್ಸ್ ಲೀಗ್ ಟೂರ್ನಿಯಲ್ಲಿ ಒಟ್ಟು ನಾಲ್ಕು ಪಂದ್ಯಗಳನ್ನು ಈ ಮೈದಾನದಲ್ಲಿ ಆಯೋಜಿಸಲಾಗಿದೆ. ಇನ್ನೆರಡು ಪಂದ್ಯಗಳು ನಡೆಯಬೇಕಿದೆ.(PTI)
ನವೆಂಬರ್ 27ರ ಸೋಮವಾರ ನಡೆಯದ ಮೊದಲ ಪಂದ್ಯದಲ್ಲಿ ಮಣಿಪಾಲ್ ಟೈಗರ್ಸ್ ಮತ್ತು ಸರ್ದಾನ್ ಸೂಪರ್ ಸ್ಟಾರ್ಸ್ ಮುಖಾಮುಖಿಯಾದವು. ರಾಸ್ ಟೇಲರ್ ಬಳಗವು ಹರ್ಭಜನ್ ಸಿಂಗ್ ಅವರ ಮಣಿಪಾಲವನ್ನು ಐದು ವಿಕೆಟ್ ಗಳಿಂದ ಸೋಲಿಸಿತು. ನವೆಂಬರ್ 29ರ ಬುಧವಾರ ನಡೆಯಬೇಕಿದ್ದ ಭಿಲ್ವಾರ ಕಿಂಗ್ಸ್ ಮತ್ತು ಸರ್ದಾನ್ ಸೂಪರ್ ಸ್ಟಾರ್ಸ್ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿತು.
(4 / 6)
ನವೆಂಬರ್ 27ರ ಸೋಮವಾರ ನಡೆಯದ ಮೊದಲ ಪಂದ್ಯದಲ್ಲಿ ಮಣಿಪಾಲ್ ಟೈಗರ್ಸ್ ಮತ್ತು ಸರ್ದಾನ್ ಸೂಪರ್ ಸ್ಟಾರ್ಸ್ ಮುಖಾಮುಖಿಯಾದವು. ರಾಸ್ ಟೇಲರ್ ಬಳಗವು ಹರ್ಭಜನ್ ಸಿಂಗ್ ಅವರ ಮಣಿಪಾಲವನ್ನು ಐದು ವಿಕೆಟ್ ಗಳಿಂದ ಸೋಲಿಸಿತು. ನವೆಂಬರ್ 29ರ ಬುಧವಾರ ನಡೆಯಬೇಕಿದ್ದ ಭಿಲ್ವಾರ ಕಿಂಗ್ಸ್ ಮತ್ತು ಸರ್ದಾನ್ ಸೂಪರ್ ಸ್ಟಾರ್ಸ್ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿತು.(X @llct20)
ನವೆಂಬರ್ 30ರ ಗುರುವಾರ ಗುಜರಾತ್ ಜೈಂಟ್ಸ್ ಮತ್ತು ಇಂಡಿಯಾ ಕ್ಯಾಪಿಟಲ್ಸ್ ತಂಡಗಳ ನಡುವೆ ಪಂದ್ಯ ನಡೆಯಯುತ್ತಿದೆ. ಕೊನೆಯ ಪಂದ್ಯದಲ್ಲಿ ಭಿಲ್ವಾರ ಕಿಂಗ್ಸ್ ಮತ್ತು ಅರ್ಬನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಡಿಸೆಂಬರ್ 1ರ ಶುಕ್ರವಾರ ಪಂದ್ಯ ನಡೆಯಲಿದೆ.
(5 / 6)
ನವೆಂಬರ್ 30ರ ಗುರುವಾರ ಗುಜರಾತ್ ಜೈಂಟ್ಸ್ ಮತ್ತು ಇಂಡಿಯಾ ಕ್ಯಾಪಿಟಲ್ಸ್ ತಂಡಗಳ ನಡುವೆ ಪಂದ್ಯ ನಡೆಯಯುತ್ತಿದೆ. ಕೊನೆಯ ಪಂದ್ಯದಲ್ಲಿ ಭಿಲ್ವಾರ ಕಿಂಗ್ಸ್ ಮತ್ತು ಅರ್ಬನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಡಿಸೆಂಬರ್ 1ರ ಶುಕ್ರವಾರ ಪಂದ್ಯ ನಡೆಯಲಿದೆ.(X @llct20 & PTI)
100ಕ್ಕೂ ಹೆಚ್ಚು ಮಾಜಿ ಕ್ರಿಕೆಟಿಗರು ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಭಾಗವಹಿಸುತ್ತಿದ್ದಾರೆ. ದಿಗ್ಗಜ ಕ್ರಿಕೆಟಿಗರಾದ ಗಂಭೀರ್, ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ಶೇನ್ ವ್ಯಾಟ್ಸನ್, ರಾಬಿನ್ ಉತ್ತಪ್ಪ, ಕ್ರಿಸ್ ಗೇಲ್, ಹಾಶಿಮ್ ಆಮ್ಲಾ, ಮೊರ್ನೆ ಮೊರ್ಕೆಲ್ ಮುಂತಾದ ತಾರೆಯರು ಇದ್ದಾರೆ.
(6 / 6)
100ಕ್ಕೂ ಹೆಚ್ಚು ಮಾಜಿ ಕ್ರಿಕೆಟಿಗರು ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಭಾಗವಹಿಸುತ್ತಿದ್ದಾರೆ. ದಿಗ್ಗಜ ಕ್ರಿಕೆಟಿಗರಾದ ಗಂಭೀರ್, ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ಶೇನ್ ವ್ಯಾಟ್ಸನ್, ರಾಬಿನ್ ಉತ್ತಪ್ಪ, ಕ್ರಿಸ್ ಗೇಲ್, ಹಾಶಿಮ್ ಆಮ್ಲಾ, ಮೊರ್ನೆ ಮೊರ್ಕೆಲ್ ಮುಂತಾದ ತಾರೆಯರು ಇದ್ದಾರೆ.(PTI)

    ಹಂಚಿಕೊಳ್ಳಲು ಲೇಖನಗಳು