logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Assembly Byelections: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿಯಲ್ಲಿ ರಂಗೇರಿದ ಪ್ರಚಾರ ಕಣ: ದಿಗ್ಗಜರಿಂದ ಮತ ಬೇಟೆ

Assembly byelections: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿಯಲ್ಲಿ ರಂಗೇರಿದ ಪ್ರಚಾರ ಕಣ: ದಿಗ್ಗಜರಿಂದ ಮತ ಬೇಟೆ

Nov 08, 2024 07:16 PM IST

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣದಲ್ಲಿನ ಉಪ ಚುನಾವಣೆ ಪ್ರಚಾರದ ಕಣ ರಂಗೇರಿದೆ. ಶುಕ್ರವಾರ ವಿವಿಧ ಗಣ್ಯರ ಪ್ರಚಾರದ ಸಮಯ ಹೀಗಿತ್ತು.

  • ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣದಲ್ಲಿನ ಉಪ ಚುನಾವಣೆ ಪ್ರಚಾರದ ಕಣ ರಂಗೇರಿದೆ. ಶುಕ್ರವಾರ ವಿವಿಧ ಗಣ್ಯರ ಪ್ರಚಾರದ ಸಮಯ ಹೀಗಿತ್ತು.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಶ್ಯಾನುಭೋಗರಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಆರತಿ ಎತ್ತಿ ಸ್ವಾಗತಿಸಲಾಯಿತು.
(1 / 7)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿ ಜಿಲ್ಲೆ ಸಂಡೂರು ಕ್ಷೇತ್ರದ ಪ್ರಚಾರಕ್ಕಾಗಿ ದರೋಜಿಗೆ ಆಗಮಿಸಿದಾಗ ಆತ್ಮೀಯವಾಗಿ ಅಭಿನಂದಿಸಲಾಯಿತು.
(2 / 7)

ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಬೊಮ್ಮಘಟ್ಟದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಮಾಜಿ ಸಚಿವ ಜನಾರ್ದನರೆಡ್ಡಿ, ಬೈರತಿ ಬಸವರಾಜ, ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ನಾರಾಯಣಸ್ವಾಂಇ ಮತ್ತತಿರರು ಪ್ರಚಾರ ನಡೆಸಿದರು.
(3 / 7)

ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಕಳಿಯಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ್ಅವರ ಪರ ಮತ ಯಾಚನೆ ಮಾಡಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್.
(4 / 7)

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಶಿಗ್ಗಾಂವಿ ತಾಲೂಕಿನ ಕಾಮನಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ನಡೆಸಿದರು.
(5 / 7)

ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ‌‌ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪರ ಮೂಕಬಸರೀಕಟ್ಟಿ ಗ್ರಾಮದಲ್ಲಿ ಮತಯಾಚಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌,ಶಾಸಕ ವಿನಯ ಕುಲಕರ್ಣಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.  
(6 / 7)

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಸಿಂಗರಾಜಿಪುರ ಗ್ರಾಮದಲ್ಲಿ ಎನ್‌ಡಿಎ ಅಭ್ಯರ್ಥಿ ಪರ ಪ್ರಚಾರ ಸಭೆ ನಡೆಸಿ ಮತಯಾಚನೆ ಮಾಡಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಶಾಸಕರಾದ ಗೋಪಾಲಯ್ಯ, ಸುರೇಶ್ ಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 
(7 / 7)

    ಹಂಚಿಕೊಳ್ಳಲು ಲೇಖನಗಳು