logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಗೌರಿಗಣೇಶ ಹಬ್ಬ ಹಿನ್ನೆಲೆ: ಮೈಸೂರಿನಲ್ಲಿ ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ -Photos

ಗೌರಿಗಣೇಶ ಹಬ್ಬ ಹಿನ್ನೆಲೆ: ಮೈಸೂರಿನಲ್ಲಿ ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ -Photos

Sep 07, 2024 04:41 PM IST

ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆಗೆ ಸಾಂಪ್ರದಾಯಿಕವಾಗಿ ವಿಶೇಷ ಪೂಜೆ ಸಲ್ಲಿಸಲಾಯ್ತು. ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ವಿಶೇಷ ಪೂಜೆ ನಡೆಯಿತು. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿ ಸಮ್ಮುಖದಲ್ಲಿ ಪೂಜಾ ಕೈಂಕರ್ಯ ನಡೆಯಿತು.

  • ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆಗೆ ಸಾಂಪ್ರದಾಯಿಕವಾಗಿ ವಿಶೇಷ ಪೂಜೆ ಸಲ್ಲಿಸಲಾಯ್ತು. ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ವಿಶೇಷ ಪೂಜೆ ನಡೆಯಿತು. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿ ಸಮ್ಮುಖದಲ್ಲಿ ಪೂಜಾ ಕೈಂಕರ್ಯ ನಡೆಯಿತು.
ಅರ್ಚಕ ಪ್ರಹ್ಲಾದ್ ರಾವ್ ಅವರ ನೇತೃತ್ವದಲ್ಲಿ ಆನೆಗಳಿಗೆ ಕಬ್ಬು, ಬೆಲ್ಲ ಹಾಗೂ ವಿವಿಧ ಬಗೆಯ ಹಣ್ಣುಗಳು, ತಿನಿಸುಗಳನ್ನು ನೀಡಿ ಪೂಜೆ ಸಲ್ಲಿಸಲಾಯ್ತು.
(1 / 5)

ಮೈಸೂರು‌ ಅರಮನೆ ಮಂಡಳಿ‌ ಉಪ‌ ನಿರ್ದೇಶಕ ಟಿಎಸ್ ಸುಬ್ರಹ್ಮಣ್ಯ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಮೈಸೂರು ವಲಯ ವನ್ಯಜೀವಿ ವಿಭಾಗದ ಮುಖ್ಯ ಅರಣ್ಯ ಸಂರಕ್ಷಾಧಿಕಾರಿ ಡಾ ಮಾಲತಿಪ್ರಿಯಾ, ಡಿಸಿಎಫ್‌ಗಳಾದ ಡಾ. ಐಬಿ ಪ್ರಭುಗೌಡ, ಡಾ ಕೆಎನ್ ಬಸವರಾಜು  ಉಪಸ್ಥಿತಿ ಇದ್ದರು.
(2 / 5)

ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿದ ಬಳಿಕ ಮಾತನಾಡಿದ ಸಿಎಫ್ ಡಾ ಮಾಲತಿಪ್ರಿಯಾ, ಗಣೇಶ ಹಬ್ಬದ ಅಂಗವಾಗಿ ವಾಡಿಕೆಯಂತೆ ಆನೆಗಳಿಗೆ ಸಾಂಪ್ರದಾಯಿಕವಾಗಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಮೊದಲ ಹಂತದಲ್ಲಿ 9 ಆನೆಗಳು ಬಂದಿದ್ದವು. ಎರಡನೇ ಹಂತದಲ್ಲಿ 5 ಆನೆಗಳು ಆಗಮಿಸಿವೆ. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದು ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಗಿದೆ ಎಂದರು.
(3 / 5)

ಪೂಜೆಯಲ್ಲಿ ಎಲ್ಲಾ ಆನೆಗಳು ಭಾಗಿಯಾಗಿವೆ. ಎಲ್ಲಾ ಆನೆಗಳ ಆರೋಗ್ಯ ಉತ್ತಮವಾಗಿದೆ. ಅರ್ಜುನ ಆನೆ ನಿಶಾನೆ ಆನೆಯಾಗಿ ದಸರಾದಲ್ಲಿ ಭಾಗಿಯಾಗುತ್ತಿತ್ತು. ಈಗ ಆತನಿಲ್ಲದ ಕಾರಣ ಹೊಸ ನಿಶಾನೆ ಆನೆಯನ್ನು ಗುರುತಿಸಬೇಕಾಗಿದೆ. ಯಾವ ಆನೆಯನ್ನು ನಿಶಾನೆ ಆನೆಯನ್ನಾಗಿ ನೇಮಿಸಬೇಕೆಂದು ಶೀಘ್ರದಲ್ಲೇ ನಿರ್ಧಾರ ಮಾಡುತ್ತೇವೆ. ಯಾವ್ಯಾವ ಆನೆಗಳಿಗೆ ಯಾವ ಜವಾಬ್ದಾರಿ ನೀಡಬೇಕೆಂದು ನಿರ್ಧಾರ ಮಾಡಬೇಕಿದೆ. 
(4 / 5)

ಕಳೆದ ವರ್ಷ ಮಹೇಂದ್ರ, ಧನಂಜಯ ಆನೆಗಳಿಗೆ ಮರದ ಅಂಬಾರಿ ಕಟ್ಟಿ ತಾಲೀಮು ನಡೆಸಿದ್ದೆವು. ಈ ಬಾರಿಯೂ ಮಹೇಂದ್ರ, ಧನಂಜಯ ಆನೆಗಳಿಗೆ ಮರದ ಅಂಬಾರಿ ಕಟ್ಟಿ ತಾಲಿಮು ನಡೆಸಲಾಗುವುದು ಎಂದು ಸಿಎಫ್ ಡಾ ಮಾಲತಿಪ್ರಿಯಾ ಹೇಳಿದರು.
(5 / 5)

    ಹಂಚಿಕೊಳ್ಳಲು ಲೇಖನಗಳು