logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Independence Day 2024: ಮೂಡಬಿದಿರೆ ಆಳ್ವಾಸ್ ಸ್ವಾತಂತ್ರ್ಯೋತ್ಸವ ಸಡಗರ, 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ತ್ರಿವರ್ಣ ಪ್ರದರ್ಶನ

Independence Day 2024: ಮೂಡಬಿದಿರೆ ಆಳ್ವಾಸ್ ಸ್ವಾತಂತ್ರ್ಯೋತ್ಸವ ಸಡಗರ, 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ತ್ರಿವರ್ಣ ಪ್ರದರ್ಶನ

Aug 15, 2024 07:04 PM IST

 Moodbidri News ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯ ಆಳ್ವಾಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಸಡಗರ ವಿಭಿನ್ನವಾಗಿತ್ತು. ಹೀಗಿತ್ತು ಅಲ್ಲಿನ ಚಿತ್ರಣ.ಚಿತ್ರ- ಮಾಹಿತಿ: ಹರೀಶ ಮಾಂಬಾಡಿ, ಮಂಗಳೂರು

ಮೂಡುಬಿದಿರೆ ಆಳ್ವಾಸ್ ವಿದ್ಯಾಸಂಸ್ಥೆಯ 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವ ಸಂದರ್ಭ ಒಟ್ಟುಗೂಡಿ ತ್ರಿವರ್ಣ ಪ್ರದರ್ಶನ ನಡೆಸಿ ಗಮನ ಸೆಳೆದರು. 
(1 / 6)

’ವಂದೇ ಮಾತರಂ’ ಹಾಡಲಾಯಿತು. ’ಕೋಟಿ ಕಂಠೋ ಸೇ..’ ಗಾನಕ್ಕೆ ವೇದಿಕೆ ಹಾಗೂ ಸಭಾಂಗಣದಲ್ಲಿ ಶಿಸ್ತು ಬದ್ಧವಾಗಿ ನಿಂತ ವಿದ್ಯಾರ್ಥಿಗಳು ಧ್ವಜ ಹಾರಾಟ ಮಾಡಿದ್ದು ವಿಶೇಷವಾಗಿತ್ತು,
(2 / 6)

ಆಚರಣೆ ವೇಳೆ ಕೇಸರಿ, ಬಿಳಿ, ಹಸಿರು ಬಣ್ಣಗಳ ರಂಗು ಬ್ಲೋವರ್ ಮೂಲಕ ಗಾಳಿಯಲ್ಲಿ ತೇಲಿ ಬಂತು. ಕೇಸರಿ,ಬಿಳಿ, ಹಸಿರು ಬಣ್ಣದ ಪುರುಲಿಯಾ ಸಿಂಹಗಳು ವಿಶೇಷ ಮೆರುಗು ನೀಡಿದವು
(3 / 6)

ಮಾಜಿ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆಳ್ವ ಆವರಣದ ಕೆ.ವಿ.ಸುಬ್ಬಣ್ಣ ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡ 78ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಅವರು ಧ್ವಜಾರೋಹಣ ನೆರವೇರಿಸಿದರು.ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಪಿ.ಜಿ.ಆರ್ ಸಿಂಧ್ಯಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಉದ್ಯಮಿ ಶ್ರೀಪತಿ ಭಟ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹಾಗೂ ಡಾ ವಿನಯ ಆಳ್ವ ಇದ್ದರು
(4 / 6)

ಉಪನ್ಯಾಸಕ ರಾಜೇಶ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಕ್ಷೇತ್ರದ ಸಾಧಕರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರುಗಳು, ಬೋಧಕ ಹಾಗೂ ಭೋಧಕೇತರ ಸಿಬ್ಬಂದಿ ಸೇರಿದಂತೆ 15 ಸಾವಿರಕ್ಕೂ ಅಧಿಕ ಜನರು ಸಂಭ್ರಮದಲ್ಲಿ ಪಾಲ್ಗೊಂಡರು.
(5 / 6)

ಧ್ವಜಾರೋಹಣದ ತಕ್ಷಣ ರಾಷ್ಟ್ರ ಗೀತೆ ಹಾಡಿ, ದೇಶಪ್ರೇಮ ವ್ಯಕ್ತಪಡಿಸಲಾಯಿತು. ಈ ವೇಳೆ ಕಂಡು ಬಂದ ಮಕ್ಕಳ ಸಂಯೋಜನೆಯ ಆಳ್ವಾಸ್‌ ನೋಟ ಹೀಗಿತ್ತು. 
(6 / 6)

    ಹಂಚಿಕೊಳ್ಳಲು ಲೇಖನಗಳು