logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮಂಗಳೂರು ದಸರಾ: ಅದ್ಧೂರಿತನದೊಂದಿಗೆ ರಾತ್ರಿಯಿಡೀ ನಡೆದ ಶೋಭಾಯಾತ್ರೆ, ಅಂಗರಂಗ ವೈಭವದ ಫೋಟೋಸ್

ಮಂಗಳೂರು ದಸರಾ: ಅದ್ಧೂರಿತನದೊಂದಿಗೆ ರಾತ್ರಿಯಿಡೀ ನಡೆದ ಶೋಭಾಯಾತ್ರೆ, ಅಂಗರಂಗ ವೈಭವದ ಫೋಟೋಸ್

Oct 14, 2024 12:50 PM IST

Mangalore Dasara: ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ 'ಮಂಗಳೂರು ದಸರಾ' ಶೋಭಾಯಾತ್ರೆ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ರವಿವಾರ ಸಂಜೆ ಆರಂಭಗೊಂಡು, ಸೋಮವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು.

  • Mangalore Dasara: ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ 'ಮಂಗಳೂರು ದಸರಾ' ಶೋಭಾಯಾತ್ರೆ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ರವಿವಾರ ಸಂಜೆ ಆರಂಭಗೊಂಡು, ಸೋಮವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು.
ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಸನ್ನಿಧಿಯಲ್ಲಿ ನವದುರ್ಗೆಯರನ್ನು ಪ್ರತಿಷ್ಠಾಪಿಸಿ 9 ದಿನಗಳ ಕಾಲ ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳ ಜತೆ ನಡೆದ ನವರಾತ್ರಿ ಆಚರಣೆಗೆ ತೆರೆ ಬಿದ್ದಿದ್ದು, ಭಾನುವಾರ (ಅಕ್ಟೋಬರ್​ 13) ಶ್ರೀ ಶಾರದಾಮಾತೆಯ ವೈಭವದ ಶೋಭಾಯಾತ್ರೆ ನಡೆಯಿತು.
(1 / 9)
ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಸನ್ನಿಧಿಯಲ್ಲಿ ನವದುರ್ಗೆಯರನ್ನು ಪ್ರತಿಷ್ಠಾಪಿಸಿ 9 ದಿನಗಳ ಕಾಲ ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳ ಜತೆ ನಡೆದ ನವರಾತ್ರಿ ಆಚರಣೆಗೆ ತೆರೆ ಬಿದ್ದಿದ್ದು, ಭಾನುವಾರ (ಅಕ್ಟೋಬರ್​ 13) ಶ್ರೀ ಶಾರದಾಮಾತೆಯ ವೈಭವದ ಶೋಭಾಯಾತ್ರೆ ನಡೆಯಿತು.(All Images From Apul Alva Photography)
ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ 'ಮಂಗಳೂರು ದಸರಾ' ಶೋಭಾಯಾತ್ರೆ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ರವಿವಾರ ಸಂಜೆ ಆರಂಭಗೊಂಡು, ಸೋಮವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು.
(2 / 9)

ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಜರಗಿದ ಭವ್ಯ ಶೋಭಾಯಾತ್ರೆಯನ್ನು ಮಳೆಯ ನಡುವೆಯೂ ಸಹಸ್ರಾರು ಜನರು ಕಣ್ಣುಂಬಿಕೊಂಡರು.
(3 / 9)

(4 / 9)

ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ಮೆರವಣಿಗೆ ನಡೆಯಿತು. 
(5 / 9)

ಶ್ರೀ ಕ್ಷೇತ್ರ ಕುದ್ರೋಳಿಯಿಂದ ರವಿವಾರ ಸಂಜೆ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡ ಮಾರ್ಗ ವಾಗಿ ಲೇಡಿಹಿಲ್, ನಾರಾಯಣ ಗುರು ವೃತ್ತ, ಲಾಲ್‌ ಬಾಗ್, ಬಲ್ಲಾಳ್ ಬಾಗ್, ಪಿವಿಎಸ್ ವೃತ್ತ, ಕೆಎಸ್ ರಾವ್ ರಸ್ತೆ, ಹಂಪನಕಟ್ಟೆ ವಿವಿ ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್ ಮಂಗಳೂರು ದಸರಾ ಭವ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್, ಅಳಕೆ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು. ನಗರದ 9 ಕಿಮೀ ವ್ಯಾಪ್ತಿಯಲ್ಲಿ ಮೆರವಣಿಗೆ ಸಾಗಿಬಂತು.
(6 / 9)

ದಸರಾ ಶೋಭಾಯಾತ್ರೆ ಆರಂಭಕ್ಕೂ ಮುನ್ನ ಕುದ್ರೋಳಿಯ ಶ್ರೀ ಶಾರದೆಯ ಸನ್ನಿಧಿಯಲ್ಲಿ ಹಲವು ಮಂದಿ ಸೇವಾಕರ್ತರನ್ನು ಜನಾರ್ದನ ಪೂಜಾರಿ ಗೌರವಿಸಿದರು. ಬಳಿಕ ಶಾರದೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮಾಜಿ ಕೇಂದ್ರ ಸಚಿವ ಕ್ಷೇತ್ರದ ಅಭಿವೃದ್ಧಿ ರೂವಾರಿ ಬಿ.ಜನಾರ್ದನ ಪೂಜಾರಿ ಮಾತನಾಡಿದರು. 
(7 / 9)

ಅಲಂಕೃತ ಕೊಡೆಗಳು, ಜಾನಪದ ಕಲಾ ತಂಡಗಳು, ಭಜನ ತಂಡ, ವಾದ್ಯ-ಬ್ಯಾಂಡ್ ತಂಡಗಳು ಹಾಗೂ ವಿವಿಧ ಕಲಾ ಪ್ರಕಾರಗಳುಶೋಭಾಯಾತ್ರೆಗೆ ಹೊಸರಂಗು ನೀಡಿದವು.  ವಿವಿಧಸಂಘ ಸಂಸ್ಥೆಗಳು ಪ್ರವರ್ತಿಸಿದ ಹಲವು ಧಾರ್ಮಿಕ-ಸಾಂಸ್ಕೃತಿಕ ಸ್ತಬ್ಧಚಿತ್ರಗಳು ಶೋಭಾಯಾತ್ರೆಯ ಚೆಲುವು ಹೆಚ್ಚಿಸಿದವು. 
(8 / 9)

ವಿಶೇಷವಾಗಿ ವಿವಿಧ ಹುಲಿ ವೇಷ ತಂಡಗಳ ಪ್ರದರ್ಶನ ಶೋಭಾಯಾತ್ರೆಗೆ ಮೆರುಗು ನೀಡಿದವು. ನೃತ್ಯ ರೂಪಕ, ದೇಶದ ಪರಂಪರೆ ಬಿಂಬಿಸುವ ಟ್ಯಾಬ್ಲೊಗ ಮತ್ತು ನಾನಾ ಕಲಾ ಪ್ರಕಾರಗಳು ಹೊಸ ರಂಗು ನೀಡಿದವು. ದಸರಾ ಮೆರವಣಿಗೆ ಸಾಗಿ ಬಂದ ರಸ್ತೆಯ ಇಕ್ಕೆಲಗಳಲ್ಲಿಯೂ ಜನಜಾತ್ರೆಯೇ ನೆರೆದಿತ್ತು. ವೈ ಮೆರವಣಿಗೆ ದಾರಿಯಲ್ಲಿ ಸಂಗೀತ ರಸಮಂಜರಿ ಮತ್ತಿತರ ಕಾರ್ಯಕ್ರಮಗಳು ಮನಸೂರೆಗೊಳಿಸಿದವು.
(9 / 9)

    ಹಂಚಿಕೊಳ್ಳಲು ಲೇಖನಗಳು