(5 / 5)ಮೈಸೂರು ದಸರಾದ ಮೊದಲ ದಿನವಾದ ಇಂದು (ಅ.15) ಎಷ್ಟು ಗಂಟೆಗೆ, ಯಾವ ವೇದಿಕೆಯಲ್ಲಿ ಏನು ಕಾರ್ಯಕ್ರಮ ನಡೆಯಲಿದೆ ಎಂಬುದರ ವಿವರ ಇದು. ಬೆಳಗ್ಗೆ 11.30ಕ್ಕೆ ಕರ್ನಾಟಕ ಕಲಾಮಂದಿರದಲ್ಲಿ ಚಲನಚಿತ್ರೋತ್ಸವ ಉದ್ಘಾಟನೆ - ಸಮಾಜ ಕಲ್ಯಾಣ ಸಚಿವ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಂದ ಚಾಲನೆ ಮಧ್ಯಾಹ್ನ 12.30ಕ್ಕೆ ಕುಪ್ಪಣ್ಣ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನೆ - - ಸಮಾಜ ಕಲ್ಯಾಣ ಸಚಿವ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಂದ ಚಾಲನೆ ಮಧ್ಯಾಹ್ನ 1 ಗಂಟೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಆಹಾರ ಮೇಳ ಉದ್ಘಾಟನೆ - ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಅವರಿಂದ ಚಾಲನೆಸಂಜೆ 4 ಗಂಟೆಗೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಶ್ರೀ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ದಸರಾ ಕುಸ್ತಿ ಪಂದ್ಯಾವಳಿ - ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಸಂಜೆ 4.30ಕ್ಕೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ. ಸಂಜೆ 5 ಗಂಟೆಗೆ ಮೈಸೂರು ವಿವಿಯ ಸೆನೆಟ್ ಭವನದಲ್ಲಿ ಯೋಗ ದಸರಾಕ್ಕೆ ಚಾಲನೆ ನೀಡಲಿದ್ದಾರೆ ಸಮಾಜ ಕಲ್ಯಾಣ ಸಚಿವ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಂಜೆ 5ಕ್ಕೆ ಕರ್ನಾಟಕ ಕಲಾಮಂದಿರದಲ್ಲಿ ಅಖಿಲ ಭಾರತ ಹಾಗೂ ರಾಜ್ಯ ಮಟ್ಟದ ಚಿತ್ರ ಶಿಲ್ಪ ಕಲಾ ಪ್ರದರ್ಶನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಚಾಲನೆ ಸಂಜೆ 5.30ಕ್ಕೆ ಕರ್ನಾಟಕ ಕಲಾಮಂದಿರ ರಂಗಾಯಣದಲ್ಲಿ ನವರಾತ್ರಿ ರಂಗೋತ್ಸವ (ಅಕ್ಟೋಬರ್ 23ರ ತನಕ) ಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರಿಂದ ಚಾಲನೆ ಸಂಜೆ 6.30ಕ್ಕೆ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಂದ ಚಾಲನೆ.