logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Odisha Train Accident: ಕೋಲ್ಕತ್ತಾದಲ್ಲಿ ಸಿಲುಕಿದ್ದ ಕರ್ನಾಟಕದ ವಾಲಿಬಾಲ್ ತಂಡವನ್ನು ವಿಮಾನದಲ್ಲಿ ಕರೆತಂದ ರಾಜ್ಯ ಸರ್ಕಾರ Photos

Odisha train accident: ಕೋಲ್ಕತ್ತಾದಲ್ಲಿ ಸಿಲುಕಿದ್ದ ಕರ್ನಾಟಕದ ವಾಲಿಬಾಲ್ ತಂಡವನ್ನು ವಿಮಾನದಲ್ಲಿ ಕರೆತಂದ ರಾಜ್ಯ ಸರ್ಕಾರ PHOTOS

Jun 04, 2023 02:52 PM IST

Karnataka Volleyball team: ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ (ಜೂನ್​ 2) ನಡೆದ ಭೀಕರ ರೈಲು ಅಪಘಾತದಿಂದಾಗಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಸಿಲುಕಿದ್ದ ಕರ್ನಾಟಕದ ವಾಲಿಬಾಲ್ ಆಟಗಾರರನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಮಾನದ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿತಂದಿದೆ.

  • Karnataka Volleyball team: ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ (ಜೂನ್​ 2) ನಡೆದ ಭೀಕರ ರೈಲು ಅಪಘಾತದಿಂದಾಗಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಸಿಲುಕಿದ್ದ ಕರ್ನಾಟಕದ ವಾಲಿಬಾಲ್ ಆಟಗಾರರನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಮಾನದ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿತಂದಿದೆ.
ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಕ್ರೀಡಾಕೂಟಕ್ಕಾಗಿ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಚಾಂದ್​ ನಗರಕ್ಕೆ ಕರ್ನಾಟಕದ ವಾಲಿಬಾಲ್ ಆಟಗಾರರು ಮತ್ತು ತರಬೇತುದಾರರು ಸೇರಿದಂತೆ 32 ಮಂದಿ ತೆರಳಿದ್ದರು.
(1 / 5)

ಆದರೆ ಒಡಿಶಾದಲ್ಲಿ ರೈಲು ಅಪಘಾತ ಸಂಭವಿಸಿದ್ದರಿಂದ ಇದೇ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಾಗಿತ್ತು. ಹೀಗಾಗಿ ಕ್ರೀಡಾಪಟುಗಳು ಕೋಲ್ಕತ್ತಾದಲ್ಲಿಯೇ ಉಳಿದುಕೊಂಡಿದ್ದರು.  
(2 / 5)

ಇವರಿಗಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಮಾನದ ವ್ಯವಸ್ಥೆ ಮಾಡಿತ್ತು. ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್​ ಲಾಡ್​ ಕೂಡ ಟ್ವೀಟ್​ ಮಾಡಿ ಕೋಲ್ಕತ್ತಾದಲ್ಲಿ ಸಿಲುಕಿರುವ ರಾಜ್ಯದ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಸೇರಿದಂತೆ ಒಟ್ಟು 32 ಜನರಿಗೆ ವಿಮಾನ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದರು. 
(3 / 5)

ಇಂದು (ಜೂನ್​ 4, ಭಾನುವಾರ) ಕೋಲ್ಕತ್ತಾದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕ್ರೀಡಾಪಟುಗಳು ಬಂದಿಳಿದಿದ್ದು, ಅವರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ಬರಮಾಡಿಕೊಂಡರು. 
(4 / 5)

ಇನ್ನು ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಂತೋಷ್​ ಲಾಡ್ ನೇತೃತ್ವದ ತಂಡ ಅಲ್ಲಿಗೆ ತೆರಳಿದ್ದು, ಕನ್ನಡಿಗರ ಮೊದಲ ತಂಡ ಬಾಲಸೋರ್‌ನಿಂದ ಕರ್ನಾಟಕಕ್ಕೆ ಆಗಮಿಸಿದೆ. (ಫೋಟೋ: ಕರ್ನಾಟಕದ ವಾಲಿಬಾಲ್​ ತಂಡ)
(5 / 5)

    ಹಂಚಿಕೊಳ್ಳಲು ಲೇಖನಗಳು