logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Opposition Protest: 'ಪ್ರಜಾಪ್ರಭುತ್ವ ಕೊನೆಗೊಳಿಸಿದ ಮೋದಿ': ಕಪ್ಪು ಬಟ್ಟೆ ಧರಿಸಿ ವಿರೋಧ ಪಕ್ಷದ ನಾಯಕರ​ ಪ್ರತಿಭಟನೆ - Photos

Opposition Protest: 'ಪ್ರಜಾಪ್ರಭುತ್ವ ಕೊನೆಗೊಳಿಸಿದ ಮೋದಿ': ಕಪ್ಪು ಬಟ್ಟೆ ಧರಿಸಿ ವಿರೋಧ ಪಕ್ಷದ ನಾಯಕರ​ ಪ್ರತಿಭಟನೆ - PHOTOS

Mar 27, 2023 06:08 PM IST

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದರ ವಿರುದ್ಧ ಹಾಗೂ ಅದಾನಿ ವಿವಾದಲ್ಲಿ ಜೆಪಿಸಿ ತನಿಖೆಗೆ ಒತ್ತಾಯಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಇಂದು ವಿರೋಧ ಪಕ್ಷದ ನಾಯಕರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದರ ವಿರುದ್ಧ ಹಾಗೂ ಅದಾನಿ ವಿವಾದಲ್ಲಿ ಜೆಪಿಸಿ ತನಿಖೆಗೆ ಒತ್ತಾಯಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಇಂದು ವಿರೋಧ ಪಕ್ಷದ ನಾಯಕರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕೈ ಹಿರಿಯ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. 
(1 / 6)
ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕೈ ಹಿರಿಯ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. 
ಕಪ್ಪು ಬಟ್ಟೆ ಧರಿಸಿದ ವಿರೋಧ ಪಕ್ಷದ ನಾಯಕರು  ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿಯಿಂದ ವಿಜಯ್‌ ಚೌಕ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. 
(2 / 6)
ಕಪ್ಪು ಬಟ್ಟೆ ಧರಿಸಿದ ವಿರೋಧ ಪಕ್ಷದ ನಾಯಕರು  ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿಯಿಂದ ವಿಜಯ್‌ ಚೌಕ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. (PTI)
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದರ ವಿರುದ್ಧ ಹಾಗೂ ಅದಾನಿ ವಿವಾದಲ್ಲಿ ಜೆಪಿಸಿ ತನಿಖೆಗೆ ಒತ್ತಾಯಿಸಿ ಈ ಪ್ರತಿಭಟನೆ ನಡೆದಿದೆ.
(3 / 6)
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದರ ವಿರುದ್ಧ ಹಾಗೂ ಅದಾನಿ ವಿವಾದಲ್ಲಿ ಜೆಪಿಸಿ ತನಿಖೆಗೆ ಒತ್ತಾಯಿಸಿ ಈ ಪ್ರತಿಭಟನೆ ನಡೆದಿದೆ.(PTI)
'ಪ್ರಧಾನಿ ಮೋದಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿದ್ದಾರೆ, ಪ್ರಜಾಪ್ರಭುತ್ವವನ್ನು ಉಳಿಸಿ' ಎಂದು ಘೋಷಣೆ ಕೂಗುತ್ತಾ, ಅಧಿಕಾರ ದುರ್ಬಳಕೆ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. 
(4 / 6)
'ಪ್ರಧಾನಿ ಮೋದಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿದ್ದಾರೆ, ಪ್ರಜಾಪ್ರಭುತ್ವವನ್ನು ಉಳಿಸಿ' ಎಂದು ಘೋಷಣೆ ಕೂಗುತ್ತಾ, ಅಧಿಕಾರ ದುರ್ಬಳಕೆ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. (PTI)
ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿರೋಧ ಪಕ್ಷದ ಸಂಸದರು ಕಪ್ಪು ಬಟ್ಟೆ ಧರಿಸಿಯೇ ಸಂಸತ್ತಿಗೆ ಬಂದಿದ್ದರು. 
(5 / 6)
ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿರೋಧ ಪಕ್ಷದ ಸಂಸದರು ಕಪ್ಪು ಬಟ್ಟೆ ಧರಿಸಿಯೇ ಸಂಸತ್ತಿಗೆ ಬಂದಿದ್ದರು. (PTI)
2019ರಲ್ಲಿ ನೀಡಿದ ಮೋದಿ ಸರ್‌ನೇಮ್‌ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಿಸಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್‌ ಗಾಂಧಿ ಅವರನ್ನು ಸೂರತ್‌ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿ, 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದರ ಬೆನ್ನಲ್ಲೇ  ಲೋಕಸಭಾ ಸಂಸದ ಸ್ಥಾನದಿಂದ ಅವರನ್ನು ಅನರ್ಹಗೊಳಿಸಲಾಗಿದೆ. ಇನ್ನು, ಅದಾನಿ ವಿವಾದ ಸಂಬಂಧ ಜೆಪಿಸಿ ತನಿಖೆಗೆ ವಿರೋಧ ಪಕ್ಷಗಳು ಒತ್ತಾಯಿಸಿವೆ. ಸಂಸತ್ತಿನಲ್ಲಿ ಇದೇ ವಿಚಾರ ಎತ್ತಿ ಪ್ರತಿಪಕ್ಷಗಳು ಗದ್ದಲ ನಡೆಸುತ್ತಿದ್ದರೂ ಮೋದಿ ಸರ್ಕಾರ ಇದಕ್ಕೆ ಉತ್ತರ ನೀಡಿಲ್ಲ. 
(6 / 6)
2019ರಲ್ಲಿ ನೀಡಿದ ಮೋದಿ ಸರ್‌ನೇಮ್‌ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಿಸಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್‌ ಗಾಂಧಿ ಅವರನ್ನು ಸೂರತ್‌ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿ, 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದರ ಬೆನ್ನಲ್ಲೇ  ಲೋಕಸಭಾ ಸಂಸದ ಸ್ಥಾನದಿಂದ ಅವರನ್ನು ಅನರ್ಹಗೊಳಿಸಲಾಗಿದೆ. ಇನ್ನು, ಅದಾನಿ ವಿವಾದ ಸಂಬಂಧ ಜೆಪಿಸಿ ತನಿಖೆಗೆ ವಿರೋಧ ಪಕ್ಷಗಳು ಒತ್ತಾಯಿಸಿವೆ. ಸಂಸತ್ತಿನಲ್ಲಿ ಇದೇ ವಿಚಾರ ಎತ್ತಿ ಪ್ರತಿಪಕ್ಷಗಳು ಗದ್ದಲ ನಡೆಸುತ್ತಿದ್ದರೂ ಮೋದಿ ಸರ್ಕಾರ ಇದಕ್ಕೆ ಉತ್ತರ ನೀಡಿಲ್ಲ. (PTI)

    ಹಂಚಿಕೊಳ್ಳಲು ಲೇಖನಗಳು