logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Birsa Munda Birth Anniversary: ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಪ್ರತಿಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ನಮನ

Birsa Munda birth anniversary: ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಪ್ರತಿಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ನಮನ

Nov 15, 2022 02:41 PM IST

ಮುಂಡಾ ಬುಡಕಟ್ಟಿಗೆ ಸೇರಿದ ಒಬ್ಬ ಅಪ್ರತಿಮ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನ ಇಂದು. ಅವರಿಗೆ ಗೌರವ ಸಲ್ಲಿಸಲು ಈ ದಿನವನ್ನು 'ಜಂಜಾಟಿಯ ಗೌರವ್ ದಿವಸ್' ಎಂದು ಆಚರಿಸಲಾಗುತ್ತದೆ. ಇವರು 1875 ರ ನವೆಂಬರ್ 15 ರಂದು ಜನಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಬಿರ್ಸಾ ಮುಂಡಾ ಅವರ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.

  • ಮುಂಡಾ ಬುಡಕಟ್ಟಿಗೆ ಸೇರಿದ ಒಬ್ಬ ಅಪ್ರತಿಮ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನ ಇಂದು. ಅವರಿಗೆ ಗೌರವ ಸಲ್ಲಿಸಲು ಈ ದಿನವನ್ನು 'ಜಂಜಾಟಿಯ ಗೌರವ್ ದಿವಸ್' ಎಂದು ಆಚರಿಸಲಾಗುತ್ತದೆ. ಇವರು 1875 ರ ನವೆಂಬರ್ 15 ರಂದು ಜನಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಬಿರ್ಸಾ ಮುಂಡಾ ಅವರ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.
 ರಾಷ್ಟ್ರಪತಿ ದ್ರೌಪದಿ ಮುರ್ಮು ಜಾರ್ಖಂಡ್‌ನ ರಾಂಚಿಗೆ ಆಗಮಿಸಿದ್ದು, ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮಸ್ಥಳವಾದ ಉಲಿಹತು ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
(1 / 7)
ರಾಷ್ಟ್ರಪತಿ ದ್ರೌಪದಿ ಮುರ್ಮು ಜಾರ್ಖಂಡ್‌ನ ರಾಂಚಿಗೆ ಆಗಮಿಸಿದ್ದು, ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮಸ್ಥಳವಾದ ಉಲಿಹತು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. (PTI)
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 9 ಗಂಟೆ ಸುಮಾರಿಗೆ ಆಗಮಿಸಿದರು. ಅವರನ್ನು ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಮತ್ತು ಮುಖ್ಯಮಂತ್ರಿ ಹೇಮಂತ್ ಸೊರೆನ್ ಸ್ವಾಗತಿಸಿದರು.
(2 / 7)
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 9 ಗಂಟೆ ಸುಮಾರಿಗೆ ಆಗಮಿಸಿದರು. ಅವರನ್ನು ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಮತ್ತು ಮುಖ್ಯಮಂತ್ರಿ ಹೇಮಂತ್ ಸೊರೆನ್ ಸ್ವಾಗತಿಸಿದರು.(HT_PRINT)
ಅಲ್ಲಿಂದ ದ್ರೌಪದಿ ಮುರ್ಮು ನೇರವಾಗಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಿರ್ಸಾ ಮುಂಡಾ ಅವರ ಗ್ರಾಮ ಉಲಿಹತುವಿಗೆ ತೆರಳೀದರು. ಅಲ್ಲಿ ಅವರು ಕೇಂದ್ರ ಸಚಿವರಾದ ಅರ್ಜುನ್ ಮುಂಡಾ ಮತ್ತು ಅನ್ನಪೂರ್ಣ ದೇವಿ ಅವರೊಂದಿಗೆ ಸೇರಿಕೊಂಡರು.
(3 / 7)
ಅಲ್ಲಿಂದ ದ್ರೌಪದಿ ಮುರ್ಮು ನೇರವಾಗಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಿರ್ಸಾ ಮುಂಡಾ ಅವರ ಗ್ರಾಮ ಉಲಿಹತುವಿಗೆ ತೆರಳೀದರು. ಅಲ್ಲಿ ಅವರು ಕೇಂದ್ರ ಸಚಿವರಾದ ಅರ್ಜುನ್ ಮುಂಡಾ ಮತ್ತು ಅನ್ನಪೂರ್ಣ ದೇವಿ ಅವರೊಂದಿಗೆ ಸೇರಿಕೊಂಡರು.(PTI)
ರಾಷ್ಟ್ರಪತಿಯಾದ ನಂತರ ಜಾರ್ಖಂಡ್‌ನ ಮಾಜಿ ರಾಜ್ಯಪಾಲರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದಾರೆ.
(4 / 7)
ರಾಷ್ಟ್ರಪತಿಯಾದ ನಂತರ ಜಾರ್ಖಂಡ್‌ನ ಮಾಜಿ ರಾಜ್ಯಪಾಲರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದಾರೆ.(PTI)
ದ್ರೌಪದಿ ಮುರ್ಮು ಅವರನ್ನು ರಾಜ್ಯದ ರಾಜಧಾನಿ ರಾಂಚಿಯಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಉಲಿಹತು ಗ್ರಾಮದಲ್ಲಿ ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು.
(5 / 7)
ದ್ರೌಪದಿ ಮುರ್ಮು ಅವರನ್ನು ರಾಜ್ಯದ ರಾಜಧಾನಿ ರಾಂಚಿಯಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಉಲಿಹತು ಗ್ರಾಮದಲ್ಲಿ ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು. (PTI)
 ಉಲಿಹತುವಿನಲ್ಲಿ ದ್ರೌಪದಿ ಮುರ್ಮು ಅವರು ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
(6 / 7)
ಉಲಿಹತುವಿನಲ್ಲಿ ದ್ರೌಪದಿ ಮುರ್ಮು ಅವರು ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.(PTI)
ಬಿರ್ಸಾ ಮುಂಡಾ ಅನುಯಾಯಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ನಿಂತು ರಾಷ್ಟ್ರಪತಿಗೆ ಸ್ವಾಗತ ಕೋರಿದರು.
(7 / 7)
ಬಿರ್ಸಾ ಮುಂಡಾ ಅನುಯಾಯಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ನಿಂತು ರಾಷ್ಟ್ರಪತಿಗೆ ಸ್ವಾಗತ ಕೋರಿದರು. (PTI)

    ಹಂಚಿಕೊಳ್ಳಲು ಲೇಖನಗಳು