logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Shashi Tharoor: ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸೋನಿಯಾ ಒಪ್ಪಿಗೆ ಪಡೆದ ತರೂರ್:‌ ಪ್ರತಿಸ್ಪರ್ಧಿ ಯಾರು?

Shashi Tharoor: ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸೋನಿಯಾ ಒಪ್ಪಿಗೆ ಪಡೆದ ತರೂರ್:‌ ಪ್ರತಿಸ್ಪರ್ಧಿ ಯಾರು?

Sep 19, 2022 10:22 PM IST

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಂಸದ ಶಶಿ ತರೂರ್‌ ಅವರಿಗೆ, ಪಕ್ಷದ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಚುನಾವಣೆ ಮೂಲಕ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು ಎಂಬ ಶಶಿ ತರೂರ್‌ ಬಣದ ವಾದಕ್ಕೆ ಅಂತಿಮವಾಗಿ ಜಯ ದೊರೆತಿದೆ. ರಾಜಸ್ಥಾನ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್‌ ನಾಯಕ ಅಶೋಕ್‌ ಗೆಹ್ಲೋಟ್‌ ಅವರು ಶಶಿ ತರೂರ್‌ ವಿರುದ್ದ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

  • ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಂಸದ ಶಶಿ ತರೂರ್‌ ಅವರಿಗೆ, ಪಕ್ಷದ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಚುನಾವಣೆ ಮೂಲಕ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು ಎಂಬ ಶಶಿ ತರೂರ್‌ ಬಣದ ವಾದಕ್ಕೆ ಅಂತಿಮವಾಗಿ ಜಯ ದೊರೆತಿದೆ. ರಾಜಸ್ಥಾನ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್‌ ನಾಯಕ ಅಶೋಕ್‌ ಗೆಹ್ಲೋಟ್‌ ಅವರು ಶಶಿ ತರೂರ್‌ ವಿರುದ್ದ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.
ಇಂದು(ಸೆ.19-ಸೋಮವಾರ) ಬೆಳಗ್ಗೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದ ಶಶಿ ತರೂರ್‌, ಪಕ್ಷದಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ಆಂತರಿಕ ಚುನಾವಣೆ ಮೂಲಕ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು ಎಂದು ಆಗ್ರಹಿಸಿದ್ದರು. ಜಿ-23 ಗುಂಪಿನ ನಾಯಕರಾದ ಶಶಿ ತರೂರ್‌, ಒಮ್ಮತದ ಅಭಯರ್ಥಿಯನ್ನು ಪಕ್ಷದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದರ ವಿರುದ್ಧ ಚಕಾರ ಎತ್ತಿದ್ದರು.
(1 / 5)
ಇಂದು(ಸೆ.19-ಸೋಮವಾರ) ಬೆಳಗ್ಗೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದ ಶಶಿ ತರೂರ್‌, ಪಕ್ಷದಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ಆಂತರಿಕ ಚುನಾವಣೆ ಮೂಲಕ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು ಎಂದು ಆಗ್ರಹಿಸಿದ್ದರು. ಜಿ-23 ಗುಂಪಿನ ನಾಯಕರಾದ ಶಶಿ ತರೂರ್‌, ಒಮ್ಮತದ ಅಭಯರ್ಥಿಯನ್ನು ಪಕ್ಷದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದರ ವಿರುದ್ಧ ಚಕಾರ ಎತ್ತಿದ್ದರು.(ANI)
ಶಶಿ ತರೂರ್‌ ಬಣದ ವಾದವನ್ನು ಪುರಸ್ಕರಿಸಿರುವ ಸೋನಿಯಾ ಗಾಂಧಿ, ಚುನಾವಣೆ ನಡೆಸಲು ಸಮ್ಮತಿ ಸೂಚಿಸಿದ್ದಾರೆ. ಅಲ್ಲದೇ ಶಶಿ ತರೂರ್‌ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲೂ ಸೋನಿಯಾ ಗಾಂಧಿ ಅನುಮತಿ ನೀಡಿದರು ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ. ಇದರಿಂದಾಗಿ ರಾಹುಲ್‌ ಗಾಂಧಿ ಅವರನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ನೇಮಿಸಲು ಬಯಸಿದ್ದ ಬಣಕ್ಕೆ ಹಿನ್ನಡೆಯಾಗಿದೆ.
(2 / 5)
ಶಶಿ ತರೂರ್‌ ಬಣದ ವಾದವನ್ನು ಪುರಸ್ಕರಿಸಿರುವ ಸೋನಿಯಾ ಗಾಂಧಿ, ಚುನಾವಣೆ ನಡೆಸಲು ಸಮ್ಮತಿ ಸೂಚಿಸಿದ್ದಾರೆ. ಅಲ್ಲದೇ ಶಶಿ ತರೂರ್‌ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲೂ ಸೋನಿಯಾ ಗಾಂಧಿ ಅನುಮತಿ ನೀಡಿದರು ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ. ಇದರಿಂದಾಗಿ ರಾಹುಲ್‌ ಗಾಂಧಿ ಅವರನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ನೇಮಿಸಲು ಬಯಸಿದ್ದ ಬಣಕ್ಕೆ ಹಿನ್ನಡೆಯಾಗಿದೆ.(HT_PRINT)
ಇನ್ನು ಶಶಿ ತರೂರ್‌ ವಿರುದಧ ರಾಜಸ್ಥಾನ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್‌ ನಾಯಕ ಅಶೋಕ್‌ ಗೆಹ್ಲೋಟ್‌, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದೂ ಪಕ್ಷದ ಮೂಲಗಳು ತಿಳಿಸಿವೆ. ಸೆ. 25ರಂದು ಗೆಹ್ಲೋಟ್‌ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.
(3 / 5)
ಇನ್ನು ಶಶಿ ತರೂರ್‌ ವಿರುದಧ ರಾಜಸ್ಥಾನ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್‌ ನಾಯಕ ಅಶೋಕ್‌ ಗೆಹ್ಲೋಟ್‌, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದೂ ಪಕ್ಷದ ಮೂಲಗಳು ತಿಳಿಸಿವೆ. ಸೆ. 25ರಂದು ಗೆಹ್ಲೋಟ್‌ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.(PTI)
ʼಭಾರತ್‌ ಜೋಡೋ ಯಾತ್ರೆಯಲ್ಲಿ ನಿರತವಾಗಿರುವ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಹೀಗಾಗಿ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಕುಟುಂಬದ ಹೊರಗಿನ ಇಬ್ಬರು ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
(4 / 5)
ʼಭಾರತ್‌ ಜೋಡೋ ಯಾತ್ರೆಯಲ್ಲಿ ನಿರತವಾಗಿರುವ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಹೀಗಾಗಿ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಕುಟುಂಬದ ಹೊರಗಿನ ಇಬ್ಬರು ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.(ANI)
ಇದೇ ಅಕ್ಟೋಬರ್‌ 17ರಂದು ಕಾಂಗ್ರೆಸ್‌ ಅಧ್ಯಕ್ಷ ಗಾದಿಗೆ ಚುನಾವಣೆ ನಡೆಯಲಿದ್ದು ಮರುದಿನ ಚುನಾವಣೆಯಲ್ಲಿ ಗೆದ್ದ ನೂತನ ಅಧ್ಯಕ್ಷರ ಹೆಸರನ್ನು ಘೋಷಣೆ ಮಾಡಲಾಗುವುದು. ಒಟ್ಟಿನಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವುದು ಖಚಿತವಾಗಿದ್ದು, ಶಶಿ ತರೂರ್‌ ಅಥವಾ ಅಶೋಕ್‌ ಗೆಹ್ಲೋಟ್‌ ಪೈಕಿ ಯಾರು ಪಕ್ಷದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬುದು ಇದೀಗ ತೀವ್ರ ಕುತೂಹಲ ಕೆರಳಿಸಿದೆ.
(5 / 5)
ಇದೇ ಅಕ್ಟೋಬರ್‌ 17ರಂದು ಕಾಂಗ್ರೆಸ್‌ ಅಧ್ಯಕ್ಷ ಗಾದಿಗೆ ಚುನಾವಣೆ ನಡೆಯಲಿದ್ದು ಮರುದಿನ ಚುನಾವಣೆಯಲ್ಲಿ ಗೆದ್ದ ನೂತನ ಅಧ್ಯಕ್ಷರ ಹೆಸರನ್ನು ಘೋಷಣೆ ಮಾಡಲಾಗುವುದು. ಒಟ್ಟಿನಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವುದು ಖಚಿತವಾಗಿದ್ದು, ಶಶಿ ತರೂರ್‌ ಅಥವಾ ಅಶೋಕ್‌ ಗೆಹ್ಲೋಟ್‌ ಪೈಕಿ ಯಾರು ಪಕ್ಷದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬುದು ಇದೀಗ ತೀವ್ರ ಕುತೂಹಲ ಕೆರಳಿಸಿದೆ.(HT_PRINT)

    ಹಂಚಿಕೊಳ್ಳಲು ಲೇಖನಗಳು