logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ರೋಯಿಂಗ್‌ನಲ್ಲಿ 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡ ಭಾರತದ ಬಲರಾಜ್ ಪನ್ವಾರ್

ರೋಯಿಂಗ್‌ನಲ್ಲಿ 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡ ಭಾರತದ ಬಲರಾಜ್ ಪನ್ವಾರ್

Apr 23, 2024 07:10 AM IST

Balraj Panwar: ದಕ್ಷಿಣ ಕೊರಿಯಾದಲ್ಲಿ ನಡೆದ 2024 ರ ಏಷ್ಯಾ ಮತ್ತು ಓಷಿಯಾನಿಯಾ ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ಸ್ ಅರ್ಹತಾ ಪಂದ್ಯದಲ್ಲಿ, ರೋಯಿಂಗ್ ಪುರುಷರ ಸಿಂಗಲ್ಸ್ ಸ್ಕಲ್ಸ್ ಸ್ಪರ್ಧೆಯಲ್ಲಿ ಭಾರತದ ಬಲರಾಜ್ ಪನ್ವಾರ್ ಮೂರನೇ ಸ್ಥಾನ ಪಡೆದರು. ಇದರೊಂದಿಗೆ 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡರು.

  • Balraj Panwar: ದಕ್ಷಿಣ ಕೊರಿಯಾದಲ್ಲಿ ನಡೆದ 2024 ರ ಏಷ್ಯಾ ಮತ್ತು ಓಷಿಯಾನಿಯಾ ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ಸ್ ಅರ್ಹತಾ ಪಂದ್ಯದಲ್ಲಿ, ರೋಯಿಂಗ್ ಪುರುಷರ ಸಿಂಗಲ್ಸ್ ಸ್ಕಲ್ಸ್ ಸ್ಪರ್ಧೆಯಲ್ಲಿ ಭಾರತದ ಬಲರಾಜ್ ಪನ್ವಾರ್ ಮೂರನೇ ಸ್ಥಾನ ಪಡೆದರು. ಇದರೊಂದಿಗೆ 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡರು.
ದಕ್ಷಿಣ ಕೊರಿಯಾದ ಚುಂಗ್ಜುನಲ್ಲಿ ನಡೆದ 2024ರ ಏಷ್ಯನ್-ಓಷಿಯಾನಿಯನ್ ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ಸ್ ಅರ್ಹತಾ ಸುತ್ತುಗಳ ಪುರುಷರ ಸಿಂಗಲ್ಸ್ ಸ್ಕಲ್ಸ್ ಸ್ಪರ್ಧೆಯಲ್ಲಿ ಬಲರಾಜ್ ಪನ್ವಾರ್ ಮೂರನೇ ಸ್ಥಾನ ಪಡೆದರು. ಇದರೊಂದಿಗೆ ಈ ಬಾರಿಯ ಜಾಗತಿಕ ಕ್ರೀಡಾಕೂಟ ಒಲಿಂಪಿಕ್ಸ್ ಅರ್ಹತೆ ಪಡೆದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
(1 / 6)

ಪುರುಷರ ಸಿಂಗಲ್ಸ್ ಸ್ಕಲ್ಸ್ (ಎಂ 1 ಎಕ್ಸ್) ಸ್ಪರ್ಧೆಯಲ್ಲಿ 7:01.27 ನಿಮಿಷಗಳ ಸಮಯದೊಂದಿಗೆ ಕಂಚಿನ ಪದಕ ಗೆದ್ದಿದ್ದಾರೆ.
(2 / 6)

25 ವರ್ಷದ ಪನ್ವಾರ್, ಕಳೆದ ವರ್ಷ ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಸ್ವಲ್ಪವೇ ಅಂತರದಿಂದ ಕಂಚಿನ ಪದಕವನ್ನು ಕಳೆದುಕೊಂಡಿದ್ದರು. ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು.
(3 / 6)

ಈ ಬಾರಿ ಅವರು 2000 ಮೀಟರ್ ವಿಭಾಗದಲ್ಲಿ 7: 01.27 ಸೆಕೆಂಡುಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆದರು.
(4 / 6)

ಕಜಕಿಸ್ತಾನದ ವ್ಲಾಡಿಸ್ಲಾವ್ ಯಾಕೊವ್ಲೆವ್ 6:59.46 ಸೆಕೆಂಡುಗಳಲ್ಲಿ ಗುರಿ ತಲುಪಿ ಚಿನ್ನ ಗೆದ್ದರೆ, ಇಂಡೋನೇಷ್ಯಾದ ಮೆಮೊ 6:59.74 ಸೆಕೆಂಡುಗಳಲ್ಲಿ ಗುರಿ ತಲುಪಿ ಎರಡನೇ ಸ್ಥಾನ ಪಡೆದರು. ಪ್ಯಾರಿಸ್ 2024ರ ಒಲಿಂಪಿಕ್ಸ್ ಕೋಟಾದಲ್ಲಿ ಅಗ್ರ ಐದರಲ್ಲಿ ಸ್ಥಾನ ಪಡೆದ ಬಲರಾಜ್ ಪನ್ವಾರ್ 7:01.27 ಸೆಕೆಂಡುಗಳಲ್ಲಿ ಗುರಿ ತಲುಪಿದರು. ಈ ನಡುವೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ ಅರವಿಂದ್ ಸಿಂಗ್ ಮತ್ತು ಉಜ್ವಲ್ ಕುಮಾರ್ ಪುರುಷರ ಡಬಲ್ ಸ್ಕಲ್ಸ್ (ಎಲ್ಎಂ 2 ಎಕ್ಸ್) ನಲ್ಲಿ ಕಂಚಿನ ಪದಕಕ್ಕೆ ತೃಪ್ತಿಪಟ್ಟರು. ಈ ವಿಭಾಗದಲ್ಲಿ ಅಗ್ರ ಎರಡು ಸ್ಥಾನ ಪಡೆದವರು ಮಾತ್ರ ಪ್ಯಾರಿಸ್ 2024ಕ್ಕೆ ಅರ್ಹತೆ ಪಡೆದರು. 
(5 / 6)

ಜುಲೈ 26ರಿಂದ ಪ್ಯಾರಿಸ್ ಒಲಿಂಪಿಕ್ಸ್‌ ಆರಂಭವಾಗಲಿದೆ. ಇದರಲ್ಲಿ ಸಿಂಗಲ್ಸ್ ವಿಭಾಗದಲ್ಲಿ ಭಾರತ ಸೆಣಸಲಿದೆ.
(6 / 6)

    ಹಂಚಿಕೊಳ್ಳಲು ಲೇಖನಗಳು