logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Telangana Exit Polls: ಹೈದರಾಬಾದ್‌ ಗದ್ದುಗೆ ಯಾರಿಗೆ? ಮತಗಟ್ಟೆ ಸಮೀಕ್ಷೆಗಳು ನುಡಿದ ಫಲಿತಾಂಶದ ವಿವರ ಇಲ್ಲಿದೆ

Telangana Exit Polls: ಹೈದರಾಬಾದ್‌ ಗದ್ದುಗೆ ಯಾರಿಗೆ? ಮತಗಟ್ಟೆ ಸಮೀಕ್ಷೆಗಳು ನುಡಿದ ಫಲಿತಾಂಶದ ವಿವರ ಇಲ್ಲಿದೆ

Nov 30, 2023 06:51 PM IST

Telangana Elections: ತೆಲಂಗಾಣ ವಿಧಾನಸಭಾ ಕ್ಷೇತ್ರದ ಮತದಾನ ಇಂದು ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಇದೀಗ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರ ಬಿದ್ದಿದ್ದು, ಮತಗಟ್ಟೆ ಸಮೀಕ್ಷೆ ಫಲಿತಾಂಶದ ಪ್ರಕಾರ ರಾಜ್ಯದಲ್ಲಿ ಬಹುತೇಕ ಕಾಂಗ್ರೆಸ್‌ ಮುನ್ನಡೆ ಸಾಧಿಸುವ ಸಾಧ್ಯತೆಯಿದೆ. ವಿವಿಧ ಮಾಧ್ಯಮ ಸಂಸ್ಥೆಗಳು ನಡೆಸಿರುವ ಮತಗಟ್ಟೆ ಸಮೀಕ್ಷೆ ಫಲಿತಾಂಶದ ಸಚಿತ್ರ ವರದಿ ಇಲ್ಲಿದೆ.

  • Telangana Elections: ತೆಲಂಗಾಣ ವಿಧಾನಸಭಾ ಕ್ಷೇತ್ರದ ಮತದಾನ ಇಂದು ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಇದೀಗ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರ ಬಿದ್ದಿದ್ದು, ಮತಗಟ್ಟೆ ಸಮೀಕ್ಷೆ ಫಲಿತಾಂಶದ ಪ್ರಕಾರ ರಾಜ್ಯದಲ್ಲಿ ಬಹುತೇಕ ಕಾಂಗ್ರೆಸ್‌ ಮುನ್ನಡೆ ಸಾಧಿಸುವ ಸಾಧ್ಯತೆಯಿದೆ. ವಿವಿಧ ಮಾಧ್ಯಮ ಸಂಸ್ಥೆಗಳು ನಡೆಸಿರುವ ಮತಗಟ್ಟೆ ಸಮೀಕ್ಷೆ ಫಲಿತಾಂಶದ ಸಚಿತ್ರ ವರದಿ ಇಲ್ಲಿದೆ.
ತೆಲಂಗಾಣ ವಿಧಾನಸಭೆಯ 119 ಕ್ಷೇತ್ರಗಳಿಗೆ ಇಂದು (ನ.30) ಮತದಾನ ನಡೆದಿದ್ದು, ವಿವಿಧ ಮಾಧ್ಯಮ ಸಂಸ್ಥೆಗಳು ನಡೆಸಿರುವ ಮತಗಟ್ಟೆ ಸಮೀಕ್ಷೆ ಫಲಿತಾಂಶದ ಸಚಿತ್ರ ವರದಿ ಹೀಗಿದೆ.  
(1 / 6)

ಎಎನ್​​ಎಸ್​ ಸಂಸ್ಥೆ ನಡೆಸಿದ ಮತಗಟ್ಟೆ ಸಮೀಕ್ಷೆಯ ಪ್ರಕಾರ ತೆಲಂಗಾಣದಲ್ಲಿ ಆಡಳಿತಾರೂಢ ಪಕ್ಷ ಬಿಆರ್​ಎಸ್​ ಅನ್ನು ಹಿಂದಿಕ್ಕಿ ಕಾಂಗ್ರೆಸ್​ ಮ್ಯಾಜಿಕ್​ ಸಂಖ್ಯೆ ತಲುಪಲಿದೆ. 
(2 / 6)

ಚಾಣಕ್ಯ ಸಂಸ್ಥೆಯ ಮತಗಟ್ಟೆ ಸಮೀಕ್ಷೆ ಪ್ರಕಾರ ಕಾಂಗ್ರೆಸ್​ ಭರ್ಜರಿ ಬಹುಮತ ಪಡೆಯಲಿದೆ. ಬಿಆರ್​ಎಸ್​ ಕೇವಲ 22 ರಿಂದ 31 ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆಯಿದೆ. 
(3 / 6)

ಪೋಲ್ಸ್ಟ್ರೇಟ್​​ ನಡೆಸಿದ ಮತಗಟ್ಟೆ ಸಮೀಕ್ಷೆ ಪ್ರಕಾರ ತೆಲಂಗಾಣದಲ್ಲಿ ಬಿಆರ್​ಎಸ್​ ಹೀನಾಯ ಸೋಲು ಕಾಣಲಿದೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ಭಾರೀ ಪೈಪೋಟಿ ನಡೆಯಲಿದೆ. 
(4 / 6)

ಪೀಪಲ್​ ಪಲ್ಸ್​ ಎಕ್ಸಿಟ್​ ಪೋಲ್​ ಪ್ರಕಾರವೂ ತೆಲಂಗಾಣದಲ್ಲಿ ಕಾಂಗ್ರೆಸ್​ ಮೇಲುಗೈ ಸಾಧಿಸಲಿದೆ. 
(5 / 6)

ಸಿಎನ್​ಎಕ್ಸ್​ ಪ್ರಕಾರ ಬಿಆರ್​ಎಸ್​-52 ಹಾಗೂ ಕಾಂಗ್ರೆಸ್​-54 ಸ್ಥಾನಗಳನ್ನು ಪಡೆಯಲಿದ್ದು, ಇಬ್ಬರ ಮಧ್ಯೆ ಪೈಪೋಟಿ ಹೆಚ್ಚಾಗಲಿದೆ. 
(6 / 6)

    ಹಂಚಿಕೊಳ್ಳಲು ಲೇಖನಗಳು