logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ತುಮಕೂರು ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ, ಸುಡು ಬಿಸಿಲಲ್ಲಿ ಭಕ್ತರ ಸಂಭ್ರಮ- ಚಿತ್ರನೋಟ

ತುಮಕೂರು ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ, ಸುಡು ಬಿಸಿಲಲ್ಲಿ ಭಕ್ತರ ಸಂಭ್ರಮ- ಚಿತ್ರನೋಟ

Apr 24, 2024 07:31 AM IST

ತುಮಕೂರು ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಮಂಗಳವಾರ ಸುಡುಬಿಸಿಲಲ್ಲಿ ಭಕ್ತರ ಸಂಭ್ರಮ ಸಡಗರಗಳೊಂದಿಗೆ ಸಂಪನ್ನವಾಯಿತು. ಪಾನಕ, ಮಜ್ಜಿಗೆ, ಪ್ರಸಾದ ವಿತರಣೆ ನಡೆಯಿತು. ಈ ಉತ್ಸವ ಸಂಭ್ರಮದ ಚಿತ್ರನೋಟ ಇಲ್ಲಿದೆ. (ವರದಿ- ಈಶ್ವರ್, ತುಮಕೂರು)

ತುಮಕೂರು ಭಾಗದ ಇತಿಹಾಸ ಪ್ರಸಿದ್ದ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
(1 / 5)

ತುಮಕೂರು ಹೊರ ವಲಯದಲ್ಲಿರುವ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವದ ಅಂಗವಾಗಿ ಮಂಗಳವಾರ ಬೆಳಗ್ಗೆಯಿಂದಲೇ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯ ನೆರವೇರಿದವು, ಬ್ರಹ್ಮರಥೋತ್ಸವದ ಅಂಗವಾಗಿ ಶ್ರೀಆಂಜನೇಯ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
(2 / 5)

ದೇವಸ್ಥಾನದ ಆವರಣದಲ್ಲಿ ಮಧ್ಯಾಹ್ನ 1.20 ಕ್ಕೆ ರಥಕ್ಕೆ ದೇವರನ್ನು ಕೂರಿಸಿದ ಬಳಿಕ ಗರುಡ ರಥದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಹಾಕಿದ ಬಳಿಕ ರಥೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು, ರಥದ ಗಾಲಿ ಮುಂದಕ್ಕೆ ಹರಿಯುತ್ತಿದ್ದಂತೆ ನೆರೆದಿದ್ದ ಭಕ್ತರ ಹರ್ಷೋದ್ಘಾರ, ಜೈಕಾರ ಘೋಷಣೆ ಮುಗಿಲು ಮುಟ್ಟಿದವು.
(3 / 5)

ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತ ಸಮೂಹ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಮಾಡಿಕೊಂಡಿದ್ದ ಹರಕೆ ತೀರಿಸಲು ರಥಕ್ಕೆ ಹೂವು, ದವನ, ಬಾಳೆಹಣ್ಣು ಎಸೆಯುವ ಮೂಲಕ ತಮ್ಮ ಹರಕೆ ಸಲ್ಲಿಸಿದರು. ಈ ಬಾರಿ ರಥಕ್ಕೆ 100 ಅಡಿ ಉದ್ದದ ಕೊಬ್ಬರಿ ಹಾರ ಹಾಕಲಾಗಿತ್ತು.
(4 / 5)

ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವದ ಅಂಗವಾಗಿ ನಗರದಿಂದ ಶೆಟ್ಟಿಹಳ್ಳಿಗೆ ಹೋಗುವ ದಾರಿಯುದ್ಧಕ್ಕೂ ಹಾಗೂ ರಿಂಗ್ ರಸ್ತೆಯುದ್ದಕ್ಕೂ ಭಕ್ತಾದಿಗಳು ಪೆಂಡಾಲ್‌ಗಳನ್ನು ಹಾಕಿಕೊಂಡು ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಿದ್ದು ವಿಶೇಷವಾಗಿತ್ತು.
(5 / 5)

    ಹಂಚಿಕೊಳ್ಳಲು ಲೇಖನಗಳು