logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Coffee Drinking: ಖಾಲಿ ಹೊಟ್ಟೆಯಲ್ಲಿ ಯಾಕೆ ಕಾಫಿ ಕುಡಿಬಾರ್ದು?

Coffee Drinking: ಖಾಲಿ ಹೊಟ್ಟೆಯಲ್ಲಿ ಯಾಕೆ ಕಾಫಿ ಕುಡಿಬಾರ್ದು?

Oct 01, 2022 05:18 PM IST

ಇಂದು ವಿಶ್ವ ಕಾಫಿ ದಿನ. ಕಾಫಿ ಬಗ್ಗೆ ಕೆಲವು ಮಾಹಿತಿಯನ್ನು ನಾವು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಬೆಳಗ್ಗೆ ಎದ್ದ ಕೂಡಲೇ ಕಾಫಿ ಕುಡಿಯುವುದು ಅನೇಕರಿಗೆ ಅಭ್ಯಾಸವಾಗಿರುತ್ತದೆ. ಆದರೆ ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿದರೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತವೆ ಎನ್ನುತ್ತಾರೆ ತಜ್ಞರು. ಅದು ಹೇಗೆ ಎಂಬುದನ್ನು ನೋಡೋಣ ಬನ್ನಿ..

ಬೆಳಗ್ಗೆ ಬೇಗ ಎದ್ದು ಕಾಫಿಯೊಂದಿಗೆ ದಿನವನ್ನು ಆರಂಭಿಸುವ ಅಭ್ಯಾಸ ನಿಮಗಿದೆಯೇ? ಹಾಗಿದ್ರೆ ನಿಮಗಾಗಿ ಇಲ್ಲಿದೆ ಒಂದಿಷ್ಟು ಮಾಹಿತಿ.
(1 / 6)

ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದರಿಂದ ಜೀರ್ಣಕ್ರಿಯೆಗೆ ಅಡ್ಡಿ ಉಂಟಾಗುತ್ತದೆ. ಇದರಿಂದ ಹೊಟ್ಟೆ ಉಬ್ಬರದಂತಹ ಸಮಸ್ಯೆ ಉಂಟಾಗುತ್ತದೆ.
(2 / 6)

ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದರಿಂದ ಅಂಡೋತ್ಪತ್ತಿ ಹಾರ್ಮೋನುಗಳ ಸಮತೋಲನದಲ್ಲಿ ಸಮಸ್ಯೆ ಉಂಟಾಗುತ್ತದೆ. ಕಾರ್ಟಿಸೋಲ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಪರಿಣಾಮವಾಗಿ ಇದು ಒತ್ತಡದ ಹಾರ್ಮೋನುಗಳನ್ನು ಉತ್ತೇಜಿಸುತ್ತದೆ.
(3 / 6)
ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದರಿಂದ ಅಂಡೋತ್ಪತ್ತಿ ಹಾರ್ಮೋನುಗಳ ಸಮತೋಲನದಲ್ಲಿ ಸಮಸ್ಯೆ ಉಂಟಾಗುತ್ತದೆ. ಕಾರ್ಟಿಸೋಲ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಪರಿಣಾಮವಾಗಿ ಇದು ಒತ್ತಡದ ಹಾರ್ಮೋನುಗಳನ್ನು ಉತ್ತೇಜಿಸುತ್ತದೆ.(Unsplash)
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವ ಅಭ್ಯಾಸವಿದ್ದರೆ ಆ್ಯಸಿಡಿಟಿ ಬರಬಹುದು. ಇದು ಟಾಕ್ಸಿನ್‌ಗಳ ಪ್ರಭಾವದಿಂದ ದೇಹದಲ್ಲಿ ವಾಕರಿಕೆಯನ್ನು ಉಂಟುಮಾಡುತ್ತದೆ.
(4 / 6)

ಆದರೆ ಕಪ್ಪು ಕಾಫಿಯಲ್ಲಿ ಕ್ಲೋರೊಜೆನಿಕ್ ಆಮ್ಲವಿದೆ. ಇದು ಉತ್ಕರ್ಷಣ ನಿರೋಧಕವಾಗಿದೆ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
(5 / 6)

ಕಾಫಿ ನಮಗೆ ಒಳ್ಳೆಯದು ಅಥವಾ ಕೆಟ್ಟದ್ದೇ ಎಂಬ ಬಗ್ಗೆ ಮಿಶ್ರ ಅಭಿಪ್ರಾಯಗಳಿವೆ. ಅಧ್ಯಯನಗಳು ಕೂಡಾ ಈ ಬಗ್ಗೆ ಮಿಶ್ರ ಫಲಿತಾಂಶಗಳನ್ನು ನೀಡಿವೆ.
(6 / 6)

    ಹಂಚಿಕೊಳ್ಳಲು ಲೇಖನಗಳು