logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮಹಿಳಾ ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ; ಎಲ್ಲಿ, ಯಾವಾಗ, ಯಾವ ತಂಡಗಳ ನಡುವೆ ಫೈನಲ್​ ಟಿಕೆಟ್​ಗೆ ಹೋರಾಟ?

ಮಹಿಳಾ ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ; ಎಲ್ಲಿ, ಯಾವಾಗ, ಯಾವ ತಂಡಗಳ ನಡುವೆ ಫೈನಲ್​ ಟಿಕೆಟ್​ಗೆ ಹೋರಾಟ?

Oct 16, 2024 06:00 AM IST

Womens T20 World Cup 2024: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಲೀಗ್ ಹಂತ ಮುಕ್ತಾಯಗೊಂಡಿದೆ. ಇದೀಗ ಸೆಮಿಫೈನಲ್ ಫೈಟ್ ನಡೆಯಲಿದೆ. ಹಾಗಿದ್ದರೆ ಅಂತಿಮ ನಾಲ್ಕರಲ್ಲಿ ಸ್ಪರ್ಧಿಸುವ ತಂಡಗಳು ಯಾವುವು? ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

  • Womens T20 World Cup 2024: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಲೀಗ್ ಹಂತ ಮುಕ್ತಾಯಗೊಂಡಿದೆ. ಇದೀಗ ಸೆಮಿಫೈನಲ್ ಫೈಟ್ ನಡೆಯಲಿದೆ. ಹಾಗಿದ್ದರೆ ಅಂತಿಮ ನಾಲ್ಕರಲ್ಲಿ ಸ್ಪರ್ಧಿಸುವ ತಂಡಗಳು ಯಾವುವು? ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.
ಮಹಿಳಾ ಟಿ20 ವಿಶ್ವಕಪ್​ 2024ರ ಗುಂಪು ಹಂತ ಮುಕ್ತಾಯಗೊಂಡಿದೆ. ಎ ಮತ್ತು ಬಿ ಗುಂಪಿನಿಂದ ತಲಾ ಎರಡು ತಂಡಗಳು ಸೆಮಿಫೈನಲ್​ಗೆ ಲಗ್ಗೆ ಇಟ್ಟಿವೆ. ಎ ಗ್ರೂಪ್​ನಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಹಾಗೂ ಬಿ ಗುಂಪಿಯನಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಅಂತಿಮ ನಾಲ್ಕರ ಘಟ್ಟಕ್ಕೆ ಪ್ರವೇಶಿಸಿವೆ.
(1 / 5)

ಎ ಗುಂಪಿನಲ್ಲಿ ಆಸ್ಟ್ರೇಲಿಯಾ ಲೀಗ್ ಹಂತದಲ್ಲಿ ಆಡಿದ ನಾಲ್ಕೂ ಪಂದ್ಯಗಳಲ್ಲಿ ಗೆದ್ದು 8 ಅಂಕಗಳೊಂದಿಗೆ ಲೀಗ್ ಟೇಬಲ್​​ನಲ್ಲಿ ಅಗ್ರಸ್ಥಾನದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ಇದೇ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದಿರುವ ನ್ಯೂಜಿಲೆಂಡ್ 4 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸಿ 6 ಅಂಕಗಳೊಂದಿಗೆ ಸೆಮೀಸ್​ಗೆ ಲಗ್ಗೆ ಇಟ್ಟಿತು. ಆದರೆ ಭಾರತ, ಪಾಕಿಸ್ತಾನ, ಶ್ರೀಲಂಕಾ ತಂಡಗಳು ಲೀಗ್​ ಹಂತದಲ್ಲೇ ಹೊರಬಿದ್ದವು.
(2 / 5)

'ಬಿ' ಗುಂಪಿನಲ್ಲಿ ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು 4 ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು ತಲಾ 6 ಅಂಕ ಪಡೆದಿವೆ. ಆದರೆ ಉತ್ತಮ ನೆಟ್​ರನ್​ರೇಟ್ ಇದ್ದ ವಿಂಡೀಸ್, ಸೌತ್ ಆಫ್ರಿಕಾ ಮುಂದಿನ ಹಂತಕ್ಕೆ ಹೋದವು. ಆದರೆ ಇಂಗ್ಲೆಂಡ್ ಜೊತೆಗೆ ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್ 'ಬಿ' ಗುಂಪಿನಿಂದ ಹೊರಬಿದ್ದವು. ಹಾಗಾದರೆ ಸೆಮೀಸ್​ನಲ್ಲಿ ಯಾವ ತಂಡಗಳು ಸೆಣಸಾಟ ನಡೆಸಲಿವೆ? ಇಲ್ಲಿದೆ ವಿವರ.
(3 / 5)

ನಿಯಮಗಳ ಪ್ರಕಾರ, ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡವು ಮೊದಲ ಸೆಮಿಫೈನಲ್​ನಲ್ಲಿ ಬಿ ಗುಂಪಿನ 2ನೇ ಸ್ಥಾನ ಪಡೆದ ತಂಡದ ವಿರುದ್ಧ ಆಡಲಿದೆ. ಅದರಂತೆ ಮೊದಲ ಸೆಮಿಫೈನಲ್​​ನಲ್ಲಿ ಆಸ್ಟ್ರೇಲಿಯಾ ತಂಡವು ಸೌತ್ ಆಫ್ರಿಕಾ ತಂಡದ ವಿರುದ್ಧ ಕಾದಾಟ ನಡೆಸಲಿದೆ. ಈ ಪಂದ್ಯ ಅಕ್ಟೋಬರ್ 17ರಂದು ಸಂಜೆ 7.30ಕ್ಕೆ ದುಬೈ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
(4 / 5)

ಎರಡನೇ ಸೆಮಿಫೈನಲ್​ನಲ್ಲಿ ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿರುವ ವೆಸ್ಟ್ ಇಂಡೀಸ್, ಎ ಗುಂಪಿನಲ್ಲಿ 2ನೇ ಸ್ಥಾನ ಪಡೆದ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 18 ರಂದು ಸಂಜೆ 7.30ಕ್ಕೆ ಶಾರ್ಜಾದಲ್ಲಿ ನಡೆಯಲಿದೆ. ಮಹಿಳಾ ಟಿ 20 ವಿಶ್ವಕಪ್ ಫೈನಲ್ ಅಕ್ಟೋಬರ್ 20 ರಂದು ದುಬೈನಲ್ಲಿ ನಡೆಯಲಿದೆ.
(5 / 5)

    ಹಂಚಿಕೊಳ್ಳಲು ಲೇಖನಗಳು