ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Icc T20i Rankings: ಅಫ್ಘನ್‌ ಸರಣಿಯಲ್ಲಿ ಅಬ್ಬರ; ವೃತ್ತಿಜೀವನದ ಅತ್ಯುನ್ನತ ಶ್ರೇಯಾಂಕ ಪಡೆದ ಜೈಸ್ವಾಲ್, ಅಕ್ಷರ್

ICC T20I Rankings: ಅಫ್ಘನ್‌ ಸರಣಿಯಲ್ಲಿ ಅಬ್ಬರ; ವೃತ್ತಿಜೀವನದ ಅತ್ಯುನ್ನತ ಶ್ರೇಯಾಂಕ ಪಡೆದ ಜೈಸ್ವಾಲ್, ಅಕ್ಷರ್

Jan 17, 2024 06:12 PM IST

ICC T20I Rankings: ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಭಾರತೀಯ ಆಟಗಾರರು ಐಸಿಸಿ ಶ್ರೇಯಾಂಕದಲ್ಲಿ ಭಾರಿ ಬಡ್ತಿ ಪಡೆದಿದ್ದಾರೆ. ಇಬ್ಬರು ಆಟಗಾರರು ತಮ್ಮ ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕ ತಲುಪಿದ್ದಾರೆ.

  • ICC T20I Rankings: ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಭಾರತೀಯ ಆಟಗಾರರು ಐಸಿಸಿ ಶ್ರೇಯಾಂಕದಲ್ಲಿ ಭಾರಿ ಬಡ್ತಿ ಪಡೆದಿದ್ದಾರೆ. ಇಬ್ಬರು ಆಟಗಾರರು ತಮ್ಮ ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕ ತಲುಪಿದ್ದಾರೆ.
ಅಫ್ಘಾನಿಸ್ತಾನ ವಿರುದ್ಧದ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ ಆರಂಭಿಕ ಆಟಗಾರ ಯಶಸ್ವಿ ಜಸ್ವಾಲ್, ಐಸಿಸಿ ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ಭಾರಿ ಜಿಗಿತ ಕಂಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಇತ್ತೀಚೆಗೆ ಬಿಡುಗಡೆ ಮಾಡಿದ ಟಿ20 ಬ್ಯಾಟರ್‌ಗಳ ಪಟ್ಟಿಯಲ್ಲಿ ಯಶಸ್ವಿ ಏಳು ಸ್ಥಾನ ಮೇಲೇರಿ ಅಗ್ರ ಹತ್ತರೊಳಗೆ ಪ್ರವೇಶಿಸಿದ್ದಾರೆ.
(1 / 8)
ಅಫ್ಘಾನಿಸ್ತಾನ ವಿರುದ್ಧದ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ ಆರಂಭಿಕ ಆಟಗಾರ ಯಶಸ್ವಿ ಜಸ್ವಾಲ್, ಐಸಿಸಿ ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ಭಾರಿ ಜಿಗಿತ ಕಂಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಇತ್ತೀಚೆಗೆ ಬಿಡುಗಡೆ ಮಾಡಿದ ಟಿ20 ಬ್ಯಾಟರ್‌ಗಳ ಪಟ್ಟಿಯಲ್ಲಿ ಯಶಸ್ವಿ ಏಳು ಸ್ಥಾನ ಮೇಲೇರಿ ಅಗ್ರ ಹತ್ತರೊಳಗೆ ಪ್ರವೇಶಿಸಿದ್ದಾರೆ.(AP)
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಜೈಸ್ವಾಲ್ ವಿಶ್ವ ರ‍್ಯಾಂಕಿಂಗ್‌ನಲ್ಲಿ ಪ್ರಸ್ತುತ 6ನೇ ಸ್ಥಾನದಲ್ಲಿದ್ದಾರೆ. ಇದು ವಿಶ್ವ ಶ್ರೇಯಾಂಕದಲ್ಲಿ ಜೈಸ್ವಾಲ್ ಅವರ ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕವಾಗಿದೆ.
(2 / 8)
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಜೈಸ್ವಾಲ್ ವಿಶ್ವ ರ‍್ಯಾಂಕಿಂಗ್‌ನಲ್ಲಿ ಪ್ರಸ್ತುತ 6ನೇ ಸ್ಥಾನದಲ್ಲಿದ್ದಾರೆ. ಇದು ವಿಶ್ವ ಶ್ರೇಯಾಂಕದಲ್ಲಿ ಜೈಸ್ವಾಲ್ ಅವರ ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕವಾಗಿದೆ.(PTI)
ತೊಡೆಸಂದು ಗಾಯದಿಂದಾಗಿ ಮೊಹಾಲಿಯಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಸರಣಿಯ ಮೊದಲ ಟಿ20 ಪಂದ್ಯದಿಂದ ಯಶಸ್ವಿ ಹೊರಗುಳಿದಿದ್ದರು. ಇಂದೋರ್‌ನಲ್ಲಿ ನಡೆದ ಎರಡನೇ ಟಿ20ಯಲ್ಲಿ ಅವರು ಕೇವಲ 27 ಎಸೆತಗಳಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ ತಮ್ಮ ಅರ್ಧಶತಕ ಪೂರ್ಣಗೊಳಿಸಿದರು. ಅಂತಿಮವಾಗಿ ಜೈಸ್ವಾಲ್ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 68 ರನ್ ಗಳಿಸಿದರು.
(3 / 8)
ತೊಡೆಸಂದು ಗಾಯದಿಂದಾಗಿ ಮೊಹಾಲಿಯಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಸರಣಿಯ ಮೊದಲ ಟಿ20 ಪಂದ್ಯದಿಂದ ಯಶಸ್ವಿ ಹೊರಗುಳಿದಿದ್ದರು. ಇಂದೋರ್‌ನಲ್ಲಿ ನಡೆದ ಎರಡನೇ ಟಿ20ಯಲ್ಲಿ ಅವರು ಕೇವಲ 27 ಎಸೆತಗಳಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ ತಮ್ಮ ಅರ್ಧಶತಕ ಪೂರ್ಣಗೊಳಿಸಿದರು. ಅಂತಿಮವಾಗಿ ಜೈಸ್ವಾಲ್ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 68 ರನ್ ಗಳಿಸಿದರು.(PTI)
ಟಿ20 ವೃತ್ತಿಜೀವನದಲ್ಲಿ ಜೈಸ್ವಾಲ್ ಇದುವರೆಗೆ 16 ಪಂದ್ಯಗಳ 15 ಇನ್ನಿಂಗ್ಸ್‌ಗಳಲ್ಲಿ ಆಡಿದ್ದಾರೆ. 35.57ರ ಸರಾಸರಿಯಲ್ಲಿ ಬ್ಯಾಟ್‌ ಬೀಸಿ 498 ರನ್ ಕಲೆಹಾಕಿದ್ದಾರೆ. ಇದರಲ್ಲಿ 1 ಶತಕ ಮತ್ತು 4 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಜಸ್ವಾಲ್ ಇದುವರೆಗೆ 55 ಬೌಂಡರಿ ಹಾಗೂ 28 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
(4 / 8)
ಟಿ20 ವೃತ್ತಿಜೀವನದಲ್ಲಿ ಜೈಸ್ವಾಲ್ ಇದುವರೆಗೆ 16 ಪಂದ್ಯಗಳ 15 ಇನ್ನಿಂಗ್ಸ್‌ಗಳಲ್ಲಿ ಆಡಿದ್ದಾರೆ. 35.57ರ ಸರಾಸರಿಯಲ್ಲಿ ಬ್ಯಾಟ್‌ ಬೀಸಿ 498 ರನ್ ಕಲೆಹಾಕಿದ್ದಾರೆ. ಇದರಲ್ಲಿ 1 ಶತಕ ಮತ್ತು 4 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಜಸ್ವಾಲ್ ಇದುವರೆಗೆ 55 ಬೌಂಡರಿ ಹಾಗೂ 28 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.(AP)
ಐಸಿಸಿ ಬ್ಯಾಂಕಿಂಗ್ ಶ್ರೇಯಾಂಕದ ಪ್ರಕಾರ, ಯಶಸ್ವಿ ಪ್ರಸ್ತುತ ಭಾರತದ ಎರಡನೇ ಟಿ20 ಬ್ಯಾಟರ್‌. ಬ್ಯಾಂಕಿಂಗ್ ಪಟ್ಟಿಯಲ್ಲಿ ಜೈಸ್ವಾಲ್ ಅವರಿಗಿಂತ ಸೂರ್ಯಕುಮಾರ್ ಯಾದವ್ ಮಾತ್ರ ಮುಂದಿದ್ದಾರೆ. ಸೂರ್ಯ ಮತ್ತು ಯಶಸ್ವಿ ಹೊರತುಪಡಿಸಿ ಭಾರತದ ರುತುರಾಜ್ ಗಾಯಕ್ವಾಡ್‌ ಅಗ್ರ ಹತ್ತು ಟಿ20 ಬ್ಯಾಟರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
(5 / 8)
ಐಸಿಸಿ ಬ್ಯಾಂಕಿಂಗ್ ಶ್ರೇಯಾಂಕದ ಪ್ರಕಾರ, ಯಶಸ್ವಿ ಪ್ರಸ್ತುತ ಭಾರತದ ಎರಡನೇ ಟಿ20 ಬ್ಯಾಟರ್‌. ಬ್ಯಾಂಕಿಂಗ್ ಪಟ್ಟಿಯಲ್ಲಿ ಜೈಸ್ವಾಲ್ ಅವರಿಗಿಂತ ಸೂರ್ಯಕುಮಾರ್ ಯಾದವ್ ಮಾತ್ರ ಮುಂದಿದ್ದಾರೆ. ಸೂರ್ಯ ಮತ್ತು ಯಶಸ್ವಿ ಹೊರತುಪಡಿಸಿ ಭಾರತದ ರುತುರಾಜ್ ಗಾಯಕ್ವಾಡ್‌ ಅಗ್ರ ಹತ್ತು ಟಿ20 ಬ್ಯಾಟರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.(PTI)
ಸೂರ್ಯಕುಮಾರ್ ಯಾದವ್ ತಮ್ಮ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದಾರೆ. ವಿಶ್ವ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ (869 ರೇಟಿಂಗ್ ಪಾಯಿಂಟ್‌ಗಳು). ಇಂಗ್ಲೆಂಡ್‌ನ ಫಿಲ್ ಸಾಲ್ಟ್ (802 ರೇಟಿಂಗ್ ಪಾಯಿಂಟ್) ಮತ್ತು ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ (775 ರೇಟಿಂಗ್ ಪಾಯಿಂಟ್) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್‌ ಆಯ್ಕೆಯಾಗಿಲ್ಲ. ರುತುರಾಜ್ ಗಾಯಕ್ವಾಡ್ 9ನೇ ಸ್ಥಾನದಲ್ಲಿದ್ದಾರೆ.
(6 / 8)
ಸೂರ್ಯಕುಮಾರ್ ಯಾದವ್ ತಮ್ಮ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದಾರೆ. ವಿಶ್ವ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ (869 ರೇಟಿಂಗ್ ಪಾಯಿಂಟ್‌ಗಳು). ಇಂಗ್ಲೆಂಡ್‌ನ ಫಿಲ್ ಸಾಲ್ಟ್ (802 ರೇಟಿಂಗ್ ಪಾಯಿಂಟ್) ಮತ್ತು ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ (775 ರೇಟಿಂಗ್ ಪಾಯಿಂಟ್) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್‌ ಆಯ್ಕೆಯಾಗಿಲ್ಲ. ರುತುರಾಜ್ ಗಾಯಕ್ವಾಡ್ 9ನೇ ಸ್ಥಾನದಲ್ಲಿದ್ದಾರೆ.(REUTERS)
ಪಾಕಿಸ್ತಾನದ ಬಾಬರ್ ಅಜಮ್ ಟಿ20 ಬ್ಯಾಟರ್‌ಗಳ ಪಟ್ಟಿಯಲ್ಲಿ ಒಂದು ಹೆಜ್ಜೆ ಸುಧಾರಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಾಮ್ ಐದನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ರಿಲೆ ರೊಸೊವ್ ಮತ್ತು ಇಂಗ್ಲೆಂಡ್‌ನ ಜೋಸ್ ಬಟ್ಲರ್ ಕ್ರಮವಾಗಿ ಏಳು ಮತ್ತು ಎಂಟನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ರಿಜಾ ಹೆಂಡ್ರಿಕ್ಸ್ 10ನೇ ಸ್ಥಾನದಲ್ಲಿದ್ದಾರೆ.
(7 / 8)
ಪಾಕಿಸ್ತಾನದ ಬಾಬರ್ ಅಜಮ್ ಟಿ20 ಬ್ಯಾಟರ್‌ಗಳ ಪಟ್ಟಿಯಲ್ಲಿ ಒಂದು ಹೆಜ್ಜೆ ಸುಧಾರಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಾಮ್ ಐದನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ರಿಲೆ ರೊಸೊವ್ ಮತ್ತು ಇಂಗ್ಲೆಂಡ್‌ನ ಜೋಸ್ ಬಟ್ಲರ್ ಕ್ರಮವಾಗಿ ಏಳು ಮತ್ತು ಎಂಟನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ರಿಜಾ ಹೆಂಡ್ರಿಕ್ಸ್ 10ನೇ ಸ್ಥಾನದಲ್ಲಿದ್ದಾರೆ.(AFP)
ಅಂತಾರಾಷ್ಟ್ರೀಯ ಟಿ20 ಬೌಲರ್‌ಗಳ ಪಟ್ಟಿಯಲ್ಲಿ ಅಕ್ಷರ್ ಪಟೇಲ್ 12 ಸ್ಥಾನ ಮೇಲೇರಿ 5ನೇ ಸ್ಥಾನ ಪಡೆದಿದ್ದಾರೆ. ಇದು ಅವರ ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕವಾಗಿದೆ (ರೇಟಿಂಗ್ ಪಾಯಿಂಟ್ 667). ಬೌಲರ್‌ಗಳ ಪಟ್ಟಿಯಲ್ಲಿ ಭಾರತದ ರವಿ ಬಿಷ್ಣೋಯ್ ನಾಲ್ಕು ಸ್ಥಾನ ಕುಸಿದು ಆರನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಆದಿಲ್ ರಶೀದ್ ಅಗ್ರಸ್ಥಾನದಲ್ಲಿದ್ದಾರೆ. ಟಿ20 ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಭಾರತದ ಹಾರ್ದಿಕ್ ಪಾಂಡ್ಯ 5ನೇ ಸ್ಥಾನಕ್ಕೆ ಕುಸಿದಿದ್ದಾರೆ. ಅಕ್ಷರ್ ಪಟೇಲ್ 2 ಸ್ಥಾನ ಸುಧಾರಿಸಿ 16ನೇ ಸ್ಥಾನಕ್ಕೆ ತಲುಪಿದ್ದಾರೆ. ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಪ್ರಸ್ತುತ ವಿಶ್ವದ ಅತ್ಯುತ್ತಮ ಟಿ20 ಆಲ್ ರೌಂಡರ್ ಆಗಿದ್ದಾರೆ.
(8 / 8)
ಅಂತಾರಾಷ್ಟ್ರೀಯ ಟಿ20 ಬೌಲರ್‌ಗಳ ಪಟ್ಟಿಯಲ್ಲಿ ಅಕ್ಷರ್ ಪಟೇಲ್ 12 ಸ್ಥಾನ ಮೇಲೇರಿ 5ನೇ ಸ್ಥಾನ ಪಡೆದಿದ್ದಾರೆ. ಇದು ಅವರ ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕವಾಗಿದೆ (ರೇಟಿಂಗ್ ಪಾಯಿಂಟ್ 667). ಬೌಲರ್‌ಗಳ ಪಟ್ಟಿಯಲ್ಲಿ ಭಾರತದ ರವಿ ಬಿಷ್ಣೋಯ್ ನಾಲ್ಕು ಸ್ಥಾನ ಕುಸಿದು ಆರನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಆದಿಲ್ ರಶೀದ್ ಅಗ್ರಸ್ಥಾನದಲ್ಲಿದ್ದಾರೆ. ಟಿ20 ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಭಾರತದ ಹಾರ್ದಿಕ್ ಪಾಂಡ್ಯ 5ನೇ ಸ್ಥಾನಕ್ಕೆ ಕುಸಿದಿದ್ದಾರೆ. ಅಕ್ಷರ್ ಪಟೇಲ್ 2 ಸ್ಥಾನ ಸುಧಾರಿಸಿ 16ನೇ ಸ್ಥಾನಕ್ಕೆ ತಲುಪಿದ್ದಾರೆ. ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಪ್ರಸ್ತುತ ವಿಶ್ವದ ಅತ್ಯುತ್ತಮ ಟಿ20 ಆಲ್ ರೌಂಡರ್ ಆಗಿದ್ದಾರೆ.(PTI)

    ಹಂಚಿಕೊಳ್ಳಲು ಲೇಖನಗಳು