logo
ಕನ್ನಡ ಸುದ್ದಿ  /  ಕ್ರೀಡೆ  /  The Ashes: ಶುಕ್ರವಾರದಿಂದ ಇಂಗ್ಲೆಂಡ್ ಆಸ್ಟ್ರೇಲಿಯಾ ಆ್ಯಶಸ್ ಟೆಸ್ಟ್ ಸರಣಿ ಆರಂಭ; ಲೈವ್ ಸ್ಟ್ರೀಮಿಂಗ್ ವಿವರ ಹೀಗಿದೆ

The Ashes: ಶುಕ್ರವಾರದಿಂದ ಇಂಗ್ಲೆಂಡ್ ಆಸ್ಟ್ರೇಲಿಯಾ ಆ್ಯಶಸ್ ಟೆಸ್ಟ್ ಸರಣಿ ಆರಂಭ; ಲೈವ್ ಸ್ಟ್ರೀಮಿಂಗ್ ವಿವರ ಹೀಗಿದೆ

HT Sports Desk HT Kannada

Jan 09, 2024 08:13 PM IST

google News

ಬೆನ್‌ ಸ್ಟೋಕ್ಸ್‌ ಮತ್ತು ಪ್ಯಾಟ್‌ ಕಮಿನ್ಸ್

    • England vs Australia: ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯವು ಜೂನ್ 16ರಿಂದ 20ರವರೆಗೆ ನಡೆಯಲಿದೆ. ಪಂದ್ಯವು ಬರ್ಮಿಂಗ್‌ಹ್ಯಾಮ್‌ ನಗರದ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ. 
ಬೆನ್‌ ಸ್ಟೋಕ್ಸ್‌ ಮತ್ತು ಪ್ಯಾಟ್‌ ಕಮಿನ್ಸ್
ಬೆನ್‌ ಸ್ಟೋಕ್ಸ್‌ ಮತ್ತು ಪ್ಯಾಟ್‌ ಕಮಿನ್ಸ್

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (World Test Championship) ಮೂರನೇ ಆವೃತ್ತಿಯ ಪಂದ್ಯಗಳಿಗೆ ಶುಕ್ರವಾರ ಚಾಲನೆ ಸಿಗುತ್ತಿದೆ. ಕ್ರಿಕೆಟ್‌ನ ಸಾಂಪ್ರದಾಯಿಕ ಎದುರಾಳಿಗಳಾದ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ (England vs Australia 1st Test) ನಡುವಿನ ಆ್ಯಶಸ್ ಟೆಸ್ಟ್‌ ಸರಣಿಯು (The Ashes) ಇಂದು ಆರಂಭವಾಗುತ್ತಿದೆ. 2021-22ರಲ್ಲಿ ಕೊನೆಯ ಬಾರಿಗೆ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಇಂಗ್ಲೆಂಡ್‌, 4-0 ಅಂತರದಿಂದ ಸೋತಿತ್ತು. ಆದರೆ ಅಂದಿನಿಂದ ಆಂಗ್ಲರ ತಂಡದಲ್ಲಿ ನಾಯಕತ್ವ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದಷ್ಟು ಬದಲಾವಣೆಗಳಾಗಿವೆ. ಹೀಗಾಗಿ ಹೊಸತನದೊಂದಿಗೆ ತಂಡವು ಕಾಂಗರೂಗಳ ವಿರುದ್ಧ ಕಣಕ್ಕಿಳಿಯಲಿದೆ.

ಆತ್ತ ಆ್ಯಶಸ್ ಟ್ರೋಫಿಯನ್ನು ಉಳಿಸಿಕೊಂಡಿರುವ ಆಸ್ಟ್ರೇಲಿಯಾ, ಈ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಚಾಂಪಿಯನ್ ಆಗಿ ಆ್ಯಶಸ್ ಪ್ರವೇಶಿಸುತ್ತಿದೆ. ಕಳೆದ ಭಾನುವಾರ ದಿ ಓವಲ್‌ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತವನ್ನು ಸೋಲಿಸಿದ ಕಾಂಗರೂಗಳು, ಮತ್ತೊಮ್ಮೆ ಆ್ಯಶಸ್ ಟ್ರೋಫಿ ಗೆಲ್ಲುವ ಉತ್ಸಾಹದಲ್ಲಿದೆ. ಎಲ್ಲಾ ಮೂರು ಪ್ರಮುಖ ಐಸಿಸಿ ಟ್ರೋಫಿಗಳನ್ನು ಎತ್ತಿಹಿಡಿದ ಮೊದಲ ಪುರುಷರ ಕ್ರಿಕೆಟ್‌ ತಂಡ ಎಂಬ ಹೆಗ್ಗಳಿಕೆ ಈಗ ಆಸೀಸ್‌ ಜೊತೆಗಿದೆ.

ಆ್ಯಶಸ್ ಸರಣಿಯು 4 ವರ್ಷಗಳ ಬಳಿಕ ಬ್ರಿಟೀಷರ ನಾಡಿನಲ್ಲಿ ನಡೆಯುತ್ತಿದೆ. 2019ರಲ್ಲಿ ಕೊನೆಯ ಬಾರಿ ತವರಿನಲ್ಲಿ ನಡೆದಾಗ, ಸರಣಿಯು 2-2ರಿಂದ ಸಮಬಲಗೊಂಡಿತ್ತು. ಸದ್ಯ ಟೆಸ್ಟ್‌ಚಾಂಪಿಯನ್‌ ಆಸೀಸ್‌ಗೆ ತವರಿನಲ್ಲಿ ಪ್ರಬಲ ಪೈಪೋಟಿ ನೀಡಲು ಇಂಗ್ಲೀಷರು ಸಜ್ಜಾಗಿದ್ದಾರೆ.

ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸೀಸ್‌ ತಂಡವು, ಇಂಗ್ಲೆಂಡ್‌ನಲ್ಲಿ ತಮ್ಮ ಗೆಲುವಿನ ವೇಗವನ್ನು ಮುಂದುವರಿಸಲು ಪ್ರಯತ್ನಿಸಲಿದೆ. ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಮೊದಲನೆಯ ಪಂದ್ಯ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿದೆ. ಐಸಿಸಿ ಟೆಸ್ಟ್‌ ಶ್ರೇಯಾಕದಲ್ಲಿ ಸ್ಥಾನ ಪಡೆದಿರುವ ಅಗ್ರ 3 ಬ್ಯಾಟರ್‌ಗಳನ್ನು ತಂಡದಲ್ಲಿ ಹೊಂದಿರುವ ಆಸ್ಟ್ರೇಲಿಯಾ ಮತ್ತಷ್ಟು ವಿಶ್ವಾಸದಲ್ಲಿದೆ.

ಲೈವ್‌ ಸ್ಟ್ರೀಮಿಂಗ್‌ ವಿವರ

ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯವು ಜೂನ್ 16ರಿಂದ 20ರವರೆಗೆ ನಡೆಯಲಿದೆ. ಪಂದ್ಯವು ಬರ್ಮಿಂಗ್‌ಹ್ಯಾಮ್‌ ನಗರದ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪದೆಕಾರ ಈ ಪಂದ್ಯವು ಮಧ್ಯಾಹ್ನ 03:30ಕ್ಕೆ ಆರಂಭವಾಗುತ್ತದೆ. ಟಾಸ್ ಪ್ರಕ್ರಿಯೆಯು ಮಧ್ಯಾಹ್ನ 03:00 ಗಂಟೆಗೆ ನಡೆಯಲಿದೆ.

ಭಾರತದಲ್ಲಿ ಇಂಗ್ಲೆಂಡ್ vs ಆಸ್ಟ್ರೇಲಿಯಾ ನಡುವಿನ ಆ್ಯಶಸ್ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದೆ. ಇದೇ ವೇಳೆ ಸೋನಿ ಲೈವ್ ಅಪ್ಲಿಕೇಶನ್ ಹಾಗೂ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ಇಂಗ್ಲೆಂಡ್ ತಂಡ

ಬೆನ್ ಡಕೆಟ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್‌ ಕೀಪರ್), ಮೊಯಿನ್ ಅಲಿ, ಸ್ಟುವರ್ಟ್ ಬ್ರಾಡ್, ಆಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್, ಡೇನಿಯಲ್ ಲಾರೆನ್ಸ್, ಜೋಶ್ ಟಂಗ್, ಮ್ಯಾಥ್ಯೂ ಪಾಟ್ಸ್ , ಮಾರ್ಕ್ ವುಡ್, ಕ್ರಿಸ್ ವೋಕ್ಸ್.

ಆಸ್ಟ್ರೇಲಿಯಾ ತಂಡ‌

ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಮಾರ್ನಸ್ ಲ್ಯಾಬುಶೆನ್, ಅಲೆಕ್ಸ್ ಕ್ಯಾರಿ (ವಿಕೆಟ್‌ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್, ಸ್ಕಾಟ್ ಬೋಲ್ಯಾಂಡ್, ಟಾಡ್ ಮರ್ಫಿ , ಜೋಶ್ ಇಂಗ್ಲಿಸ್, ಮ್ಯಾಟ್ ರೆನ್ಶಾ, ಮಾರ್ಕಸ್ ಹ್ಯಾರಿಸ್.

ಬ್ಯಾಡ್ಮಿಂಟನ್, ಟೆನಿಸ್, ಕಬಡ್ಡಿ, ಫುಟ್ಬಾಲ್, ಆರ್ಚರಿ, ಶೂಟಿಂಗ್, ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಅಥ್ಲೆಟಿಕ್ಸ್ ಸೇರಿದಂತೆ ಕ್ರೀಡಾ ಜಗತ್ತಿನ ಸಮಗ್ರ ವಿದ್ಯಮಾನಗಳನ್ನು ತಿಳಿಯಲು 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದ ಕ್ರೀಡಾ ವಿಭಾಗಕ್ಕೆ ಭೇಟಿ ನೀಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ