logo
ಕನ್ನಡ ಸುದ್ದಿ  /  Sports  /  Cricket News In Kannada Wtc Final 2023 Date Time And Live Streaming Details World Test Championship Ind Vs Aus Jra

WTC final 2023: ಡಬ್ಲ್ಯೂಟಿಸಿ ಫೈನಲ್ ಪಂದ್ಯದ ಸಮಯ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

Jayaraj HT Kannada

Jun 01, 2023 05:05 PM IST

ಭಾರತ ಹಾಗೂ ಆಸ್ಟ್ರೇಲಿಯಾ ಆಟಗಾರರು

    • World Test Championship: ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನ ಪಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯ ನಡೆಯಲಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ಆಟಗಾರರು
ಭಾರತ ಹಾಗೂ ಆಸ್ಟ್ರೇಲಿಯಾ ಆಟಗಾರರು

ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (World Test Championship final) ಫೈನಲ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ 7ರಿಂದ ಇಂಗ್ಲೆಂಡ್‌ ರಾಜಧಾನಿ ಲಂಡನ್‌ನ ದಿ ಓವಲ್‌(The Oval) ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ (India vs Australia) ತಂಡಗಳ ನಡುವೆ ಫೈನಲ್‌ ಪಂದ್ಯ (WTC final) ನಡೆಯಲಿದೆ. ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನ ಪಡೆದ ತಂಡಗಳ ನಡುವೆ ಈ ಪಂದ್ಯ ನಡೆಯುತ್ತಿದೆ. ಸದ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿರುವ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿದ್ದು, ರೋಚಕ ಕದನಕ್ಕೆ ಸಿದ್ಧವಾಗಿವೆ.

ಟ್ರೆಂಡಿಂಗ್​ ಸುದ್ದಿ

ಪ್ಯಾರಿಸ್ ಒಲಿಂಪಿಕ್ಸ್​ಗೆ ಅರ್ಹತೆ ಗಳಿಸಿದ ಭಾರತದ 7 ಷಟ್ಲರ್​​ಗಳು; ಅರ್ಹತೆ; ಕನ್ನಡತಿ ಅಶ್ವಿನಿ ಪೊನ್ನಪ್ಪ, ಪಿವಿ ಸಿಂಧುಗೆ ಅವಕಾಶ

1900 ರಿಂದ 2020ರ ತನಕ; 120 ವರ್ಷಗಳ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಗೆದ್ದಿರುವ ಪದಕಗಳೆಷ್ಟು? ವರ್ಷವಾರು ಒಂದು ನೋಟ

ಆರ್ಚರಿ ವಿಶ್ವಕಪ್ 2024: ಭಾರತಕ್ಕೆ ಹ್ಯಾಟ್ರಿಕ್ ಚಿನ್ನ, ಪುರುಷರ-ಮಹಿಳೆಯರ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಸ್ವರ್ಣ

ಕ್ಯಾಂಡಿಡೇಟ್ಸ್ ಗೆದ್ದು ಭಾರತಕ್ಕೆ ಮರಳಿದ ಗುಕೇಶ್‌ಗೆ ಸಂಭ್ರಮದ ಸ್ವಾಗತ-ಸನ್ಮಾನ; ಅಮ್ಮನ ಅಪ್ಪುಗೆ, ಮಮತೆಯ ಮುತ್ತಿನ ಧಾರೆ

2019-21ರ ಅವಧಿಯಲ್ಲಿಯೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪ್ರವೇಶಿಸಿದ್ದ ಭಾರತ, ಇದು ಸತತ ಎರಡನೇ ಡಬ್ಲ್ಯೂಟಿಸಿ ಫೈನಲ್‌ಗೆ ಅರ್ಹತೆ ಪಡೆದಿದೆ. ಕಳೆದ ಅವಧಿಯ ಫೈನಲ್‌ ಪಂದ್ಯದಲ್ಲಿ ಟೀಮ್‌ ಇಂಡಿಯಾವು ನ್ಯೂಜಿಲೆಂಡ್ ತಂಡದ ವಿರುದ್ಧ ಸೋತಿತ್ತು.‌ ಪ್ರಸ್ತುತ ಆವೃತ್ತಿಯಲ್ಲಿ, ಭಾರತವು ಉತ್ತಮ ನೆಟ್‌ ರನ್‌ ರೇಟ್‌ನೊಂದಿಗೆ ಮತ್ತೊಮ್ಮೆ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯಕ್ಕೆ ಸಜ್ಜಾಗಿದೆ. ಅಲ್ಲದೆ ಹಲವು ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ವಿಶ್ವಾಸದಲ್ಲಿದೆ.

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಇಲ್ಲಿದೆ...

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯ ಯಾವಾಗ ನಡೆಯಲಿದೆ?

ಡಬ್ಲ್ಯೂಟಿಸಿ ಫೈನಲ್ ಪಂದ್ಯವು ಜೂನ್ 7ರಿಂದ 11ರವರೆಗೆ ನಡೆಯಲಿದೆ.

ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯ ಎಲ್ಲಿ ನಡೆಯಲಿದೆ?

ಈ ಪಂದ್ಯವು ಇಂಗ್ಲೆಂಡ್‌ನ ರಾಜಧಾನಿ ಲಂಡನ್‌ನ ದಿ ಓವಲ್‌ ಮೈದಾನದಲ್ಲಿ ನಡೆಯಲಿದೆ.

ಡಬ್ಲ್ಯೂಟಿಸಿ ಫೈನಲ್ ಪಂದ್ಯವು ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?

ಭಾರತೀಯ ಕಾಲಮಾನದ ಪ್ರಕಾರ ಫೈನಲ್ ಪಂದ್ಯವು ಮಧ್ಯಾಹ್ನ 03:00 ಗಂಟೆಗೆ ಆರಂಭವಾಗುತ್ತದೆ. ಟಾಸ್ ಪ್ರಕ್ರಿಯೆಯು ಮಧ್ಯಾಹ್ನ 02:30ಕ್ಕೆ ನಡೆಯಲಿದೆ.

ಟಿವಿಯಲ್ಲಿ ಡಬ್ಲ್ಯೂಟಿಸಿ ಫೈನಲ್ ಪಂದ್ಯವನ್ನು ಯಾವ ವಾಹಿನಿಯಲ್ಲಿ ಲೈವ್ ವೀಕ್ಷಿಸಬಹುದು?

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

ಮೊಬೈಲ್‌ ಮೂಲಕ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದೇ?

ಡಿಸ್ನಿ+ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ತಂಡಗಳು

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಇಶಾನ್ ಕಿಶನ್ (ವಿಕೆಟ್‌ ಕೀಪರ್)

ಸ್ಟ್ಯಾಂಡ್‌ಬೈ ಆಟಗಾರರು: ಯಶಸ್ವಿ ಜೈಸ್ವಾಲ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್

ಆಸ್ಟ್ರೇಲಿಯಾ‌ ತಂಡ

ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್‌ ಕೀಪರ್), ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್‌ ಕೀಪರ್), ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೆನ್‌, ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್

ಸ್ಟ್ಯಾಂಡ್‌ಬೈ ಆಟಗಾರರು: ಮಿಚ್ ಮಾರ್ಷ್, ಮ್ಯಾಥ್ಯೂ ರೆನ್‌ಶಾ

    ಹಂಚಿಕೊಳ್ಳಲು ಲೇಖನಗಳು