logo
ಕನ್ನಡ ಸುದ್ದಿ  /  Sports  /  Cricket News Ipl 2023 Shikhar Dhawan Fifty Leads Punjab Kings To Score Against Kolkata Knight Riders Nitish Rana Jra

KKR vs PBKS: ಶಿಖರ್ ಧವನ್ ಅರ್ಧಶತಕ; ಕೆಕೆಆರ್‌ಗೆ ಸ್ಪರ್ಧಾತ್ಮಕ ಗುರಿ ನೀಡಿದ ಪಂಜಾಬ್

Jayaraj HT Kannada

May 08, 2023 09:24 PM IST

ಶಿಖರ್‌ ಧವನ್

    • ಒಂದೆಡೆ ವಿಕೆಟ್‌ಗಳು ಉರುಳುತ್ತಿದ್ದರೂ ನಾಯಕನಾಟವಾಡಿದ ಧವನ್‌, ಅರ್ಧಶತಕ ಸಿಡಿಸಿದರು. 47 ಎಸೆತಗಳನ್ನು ಎದುರಿಸಿದ ಅವರು 57 ರನ್‌ ಗಳಿಸಿ ನಿತೀಶ್‌ ರಾಣಾಗೆ ವಿಕೆಟ್‌ ಒಪ್ಪಿಸಿದರು.
ಶಿಖರ್‌ ಧವನ್
ಶಿಖರ್‌ ಧವನ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಂಡದ ವಿರುದ್ಧ ಪಂಜಾಬ್ ಕಿಂಗ್ಸ್‌(Punjab Kings) ತಂಡವು ಸ್ಪರ್ಧಾತ್ಮಕ ಮೊತ್ತ ಕಲೆ ಹಾಕಿದೆ. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಧವನ್‌ ಬಳಗವು, ನಾಯಕನ ಅಮೋಘ ಅರ್ಧಶತಕದ ನೆರವಿನಿಂದ 7ವಿಕೆಟ್‌ ಕಳೆದುಕೊಂಡು 179 ರನ್‌ ಗಳಿಸಿದೆ. ಆ ಮೂಲಕ ನಿತೀಶ್‌ ರಾಣಾ ಬಳಗಕ್ಕೆ 180 ರನ್‌ಗಳ ಸವಾಲಿನ ಗುರಿ ನೀಡಿದೆ.

ಟ್ರೆಂಡಿಂಗ್​ ಸುದ್ದಿ

ದೇಶಕ್ಕಾಗಿ ಪದಕ ಗೆಲ್ಲುವುದೇ ನನ್ನ ಗುರಿ; ಅದಕ್ಕಾಗಿ ತೂಕ ಕಾಪಾಡಿಕೊಳ್ಳಬೇಕು ಎಂದ ವಿನೇಶ್ ಫೋಗಟ್

ಪ್ಯಾರಿಸ್ ಒಲಿಂಪಿಕ್ಸ್​ಗೆ ಅರ್ಹತೆ ಗಳಿಸಿದ ಭಾರತದ 7 ಷಟ್ಲರ್​​ಗಳು; ಅರ್ಹತೆ; ಕನ್ನಡತಿ ಅಶ್ವಿನಿ ಪೊನ್ನಪ್ಪ, ಪಿವಿ ಸಿಂಧುಗೆ ಅವಕಾಶ

1900 ರಿಂದ 2020ರ ತನಕ; 120 ವರ್ಷಗಳ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಗೆದ್ದಿರುವ ಪದಕಗಳೆಷ್ಟು? ವರ್ಷವಾರು ಒಂದು ನೋಟ

ಆರ್ಚರಿ ವಿಶ್ವಕಪ್ 2024: ಭಾರತಕ್ಕೆ ಹ್ಯಾಟ್ರಿಕ್ ಚಿನ್ನ, ಪುರುಷರ-ಮಹಿಳೆಯರ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಸ್ವರ್ಣ

ಬ್ಯಾಟಿಂಗ್‌ ಆರಂಭಿಸಿದ ಪಂಜಾಬ್‌ಗೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕರಾದ ಪ್ರಭ್‌ಸಿಮ್ರಾನ್‌ ಸಿಂಗ್ 12 ರನ್‌ಗಳಿಗೆ ಔಟಾದರು. ಮೂರನೇ ಕ್ರಮಾಂಕದಲ್ಲಿ ಬಂದ ಸ್ಫೋಟಕ ಬ್ಯಾಟರ್‌ ಭಾನುಕಾ ರಾಜಪಕ್ಸೆ ಡಕೌಟ್‌ ಆಗಿ ನಿರ್ಗಮಿಸಿದರು. ಈ ವೇಳೆ ನಾಯಕ ಶಿಖರ್‌ ಧವನ್‌ ಜೊತೆಗೂಡಿ ಬ್ಯಾಟ್‌ ಬೀಸಿದ ಲಿವಿಂಗ್‌ಸ್ಟನ್, 15 ರನ್‌ ಗಳಿಸಿ ಚಕ್ರವರ್ತಿ ಎಸೆತದಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು. ಅತ್ತ ವಿಕೆಟ್‌ಗಳು ಉರುಳುತ್ತಿದ್ದರೂ ನಾಯಕನಾಟವಾಡಿದ ಧವನ್‌, ಅರ್ಧಶತಕ ಸಿಡಿಸಿದರು. 47 ಎಸೆತಗಳನ್ನು ಎದುರಿಸಿದ ಅವರು 57 ರನ್‌ ಗಳಿಸಿ ನಿತೀಶ್‌ ರಾಣಾಗೆ ವಿಕೆಟ್‌ ಒಪ್ಪಿಸಿದರು.

ಜಿತೇಶ್‌ ಶರ್ಮಾ 21 ರನ್‌ಗಳಿಗೆ ಔಟಾದರೆ, ರಿಷಿ ಧವನ್‌ 19 ರನ್‌ ಗಳಿಸಿ ನಿರ್ಗಮಿಸಿದರು. ಐಪಿಎಲ್‌ನ ದುಬಾರಿ ಆಟಗಾರ ಸ್ಯಾಮ್‌ ಕರನ್‌ ಕೇವಲ 4 ರನ್‌ ಗಳಿಸಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಡೆತ್‌ ಓವರ್‌ಗಳಲ್ಲಿ ಒಂದಾದ ಶಾರುಖ್‌ ಖಾನ್‌ ಮತ್ತು ಹರ್‌ಪ್ರೀತ್‌ ಬ್ರಾರ್‌, ತಂಡದ ಮೊತ್ತ ಹೆಚ್ಚಿಸುವಲ್ಲಿ ನೆರವಾದರು. ಕೊನೆಯ ಓವರ್‌ನಲ್ಲಿ ಬೌಂಡರಿ ಸಿಕ್ಸರ್‌ಗಳನ್ನು ಸಿಡಿಸಿದ ಉಭಯ ಆಟಗಾರರು, 21 ರನ್‌ ಕದ್ದರು. ಹೀಗಾಗಿ ತಂಡದ ಮೊತ್ತ ಹೆಚ್ಚಿತು.

ಪಂದ್ಯದಲ್ಲಿ ಟಾಸ್‌ ಗೆದ್ದ ಪಂಜಾಬ್‌ ನಾಯಕ ಶಿಖರ್‌ ಧವನ್‌, ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ತಂಡದಲ್ಲಿ ಇಂದು ಒಂದು ಬದಲಾವಣೆ ಮಾಡಲಾಗಿದ್ದು, ಭಾನುಕಾ ರಾಜಪಕ್ಷೆ ತಂಡಕ್ಕೆ ಪುನರಾಗಮನ ಮಾಡುತ್ತಿದ್ದಾರೆ. ಮತ್ತೊಂದೆಡೆ ತವರಿನಲ್ಲಿ ಈ ಆವೃತ್ತಿಯಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಸೋತಿರುವ ಕೆಕೆಆರ್‌, ಇಂದಿನ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ತಂಡದಲ್ಲಿ ಇಂದು ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಪಂಜಾಬ್‌ ತಂಡವು ಪ್ರಸಕ್ತ ಆವೃತ್ತಿಯಲ್ಲಿ ಈವರೆಗೆ ಆಡಿರುವ 10 ಪಂದ್ಯಗಳಲ್ಲಿ ಐದು ಗೆಲುವುಗಳು ಮತ್ತು ಐದು ಸೋಲುಗಳನ್ನು ಕಂಡಿದೆ. ಹೀಗಾಗಿ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಕೆಕೆಆರ್ ತಂಡವು, ಪ್ರಸ್ತುತ ಆಡಿರುವ 10 ಪಂದ್ಯಗಳಲ್ಲಿ ಎಂಟು ಅಂಕಗಳೊಂದಿಗೆ ಹತ್ತು ತಂಡಗಳ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಇದರಲ್ಲಿ ನಾಲ್ಕು ಗೆಲುವುಗಳು ಮತ್ತು ಆರು ಸೋಲುಗಳು ಸೇರಿವೆ.

ಪಂಜಾಬ್‌ ಕಿಂಗ್ಸ್‌ ಆಡುವ ಬಳಗ

ಪ್ರಭ್‌ಸಿಮ್ರಾನ್ ಸಿಂಗ್, ಶಿಖರ್ ಧವನ್ (ನಾಯಕ), ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟನ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಸ್ಯಾಮ್ ಕರನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಿಷಿ ಧವನ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್.

ಕೆಕೆಆರ್‌ ಆಡುವ ಬಳಗ

ರಹಮಾನುಲ್ಲಾ ಗುರ್ಬಾಜ್ (ವಿಕೆಟ್‌ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ‌ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ವೈಭವ್ ಅರೋರಾ, ಹರ್ಷಿತ್ ರಾಣಾ, ಸುಯಶ್ ಶರ್ಮಾ, ವರುಣ್ ಚಕ್ರವರ್ತಿ.

    ಹಂಚಿಕೊಳ್ಳಲು ಲೇಖನಗಳು