logo
ಕನ್ನಡ ಸುದ್ದಿ  /  ಕ್ರೀಡೆ  /  Asian Games 2023: ಏಷ್ಯನ್ ಗೇಮ್ಸ್‌ಗೆ ಭಾರತ ಕ್ರಿಕೆಟ್ ತಂಡ ಪ್ರಕಟ; ರುತುರಾಜ್ ಗಾಯಕ್ವಾಡ್ ನಾಯಕ, ಕೊನೆಗೂ ರಿಂಕು ಸಿಂಗ್ ಆಯ್ಕೆ

Asian Games 2023: ಏಷ್ಯನ್ ಗೇಮ್ಸ್‌ಗೆ ಭಾರತ ಕ್ರಿಕೆಟ್ ತಂಡ ಪ್ರಕಟ; ರುತುರಾಜ್ ಗಾಯಕ್ವಾಡ್ ನಾಯಕ, ಕೊನೆಗೂ ರಿಂಕು ಸಿಂಗ್ ಆಯ್ಕೆ

Jayaraj HT Kannada

Jan 09, 2024 07:51 PM IST

google News

ರುತುರಾಜ್ ಗಾಯಕ್ವಾಡ್

    • Team India for Asian Games 2023: ಐಪಿಎಲ್‌ನಲ್ಲಿ ಅಬ್ಬರಿಸಿದ್ದ ರಿಂಕು ಸಿಂಗ್ ಮತ್ತು ಪ್ರಭ್‌ಸಿಮ್ರಾನ್ ಸಿಂಗ್ ಟೀಮ್‌ ಇಂಡಿಯಾಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.
ರುತುರಾಜ್ ಗಾಯಕ್ವಾಡ್
ರುತುರಾಜ್ ಗಾಯಕ್ವಾಡ್ (BCCI)

ಮುಂಬರುವ ಏಷ್ಯನ್ ಗೇಮ್ಸ್‌ಗೆ ಭಾರತದ ಪುರುಷರ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದೆ. ಸಂಪೂರ್ಣ ಯುವ ಆಟಗಾರರೇ ತುಂಬಿರುವ ತಂಡವನ್ನು ರುತುರಾಜ್ ಗಾಯಕ್ವಾಡ್ ಮುನ್ನಡೆಸಲಿದ್ದಾರೆ. ಇದೇ ವೇಳೆ ಐಪಿಎಲ್‌ನ ಫಿನಿಶಿಂಗ್‌ ಸ್ಟಾರ್‌ ರಿಂಕು ಸಿಂಗ್, ಪ್ರಭ್‌ಸಿಮ್ರಾನ್ ಸಿಂಗ್ ಟೀಮ್‌ ಇಂಡಿಯಾ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.

ಏಷ್ಯನ್ ಗೇಮ್ಸ್‌ ತಂಡಕ್ಕೆ ಆಯ್ಕೆಯಾಗುವ ಆಟಗಾರರಲ್ಲಿ ವಿಶ್ವಕಪ್ ಸ್ಥಾನಕ್ಕಾಗಿ ಸ್ಪರ್ಧೆಯಲ್ಲಿರುವ ಆಟಗಾರು ಇರುವುದಿಲ್ಲ ಎಂದು ಬಿಸಿಸಿಐ ಈ ಹಿಂದೆ ಘೋಷಿಸಿತ್ತು. ಅದರಂತೆಯೇ ಭಾರತದ ಕಾಯಂ ನಾಯಕ ರೋಹಿತ್ ಶರ್ಮಾ, ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ ಸೇರಿದಂತೆ ಹಿರಿಯ ಆಟಗಾರರನ್ನು ಈ ತಂಡಕ್ಕೆ ಆಯ್ಕೆ ಮಾಡಿಲ್ಲ.

ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಶಿಖರ್ ಧವನ್ ತಂಡವನ್ನು ಮುನ್ನಡೆಸಬಹುದು ಎಂಬ ನಿರೀಕ್ಷೆಗಳಿದ್ದವು. ಆದರೆ ಅಚ್ಚರಿ ಎಂಬಂತೆ ಗಾಯಕ್ವಾಡ್ ಅವರನ್ನು ತಂಡದ ನಾಯಕರನ್ನಾಗಿ ಘೋಷಿಸಲಾಗಿದೆ. ಸಂಪೂರ್ಣ ಯುವಕರ ತಂಡದಲ್ಲಿ ಯುವ ಬ್ಯಾಟ್ಸ್‌ಮನ್‌ಗಳಾದ ರಾಹುಲ್ ತ್ರಿಪಾಠಿ, ಯಶಸ್ವಿ ಜೈಸ್ವಾಲ್ ಮತ್ತು ತಿಲಕ್ ವರ್ಮಾ ಕೂಡ ಇದ್ದಾರೆ. ಇವರಲ್ಲಿ ಜೈಸ್ವಾಲ್ ಮತ್ತು ತಿಲಕ್ ಇಬ್ಬರೂ ಈಗಾಗಲೇ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದಾರೆ.

|#+|

ಆಲ್‌ರೌಂಡರ್‌ಗಳಾದ ಶಿವಂ ದುಬೆ, ವಾಷಿಂಗ್ಟನ್ ಸುಂದರ್ ಮತ್ತು ಶಹಬಾಜ್ ಅಹ್ಮದ್ ತಂಡಕ್ಕೆ ಮರಳಿದ್ದಾರೆ. ಜಿತೇಶ್ ಶರ್ಮಾ ತಂಡಕ್ಕೆ ಮೊದಲ ಆಯ್ಕೆಯ ವಿಕೆಟ್‌ ಕೀಪರ್ ಆಗುವ ಸಾಧ್ಯತೆಯಿದ್ದು, ಪಂಜಾಬ್‌ನ ಪ್ರಭ್‌ಸಿಮ್ರಾನ್ ಅವರಿಗೆ ಬೆನ್ನೆಲುಬಾಗಿ ಆಯ್ಕೆಯಾಗಿದ್ದಾರೆ.

ಅರ್ಷದೀಪ್ ಆಯ್ಕೆ

ಕುತೂಹಲಕಾರಿ ಅಂಶವೆಂದರೆ ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್ ಅವರನ್ನು ಪ್ರಮುಖ ಸೀಮರ್‌ಗಳಾಗಿ ಆಯ್ಕೆ ಮಾಡಲಾಗಿದೆ.

ಏಷ್ಯನ್‌ ಗೇಮ್ಸ್‌ನಲ್ಲಿ ಪುರುಷರ ಕ್ರಿಕೆಟ್ ಸ್ಪರ್ಧೆಯು ಟಿ20 ಮಾದರಿಯಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 28ರಿಂದ ಅಕ್ಟೋಬರ್ 8ರವರೆಗೆ ಪಂದ್ಯಾವಳಿ ನಡೆಯಲಿದೆ.

19ನೇ ಏಷ್ಯನ್ ಗೇಮ್ಸ್‌ಗೆ ಭಾರತ ತಂಡ ಹೀಗಿದೆ

ರುತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ, ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್‌ ಕೀಪರ್)

ಸ್ಟ್ಯಾಂಡ್‌ಬೈ ಆಟಗಾರರು

ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಸಾಯಿ ಸುದರ್ಶನ್

ಬ್ಯಾಡ್ಮಿಂಟನ್, ಟೆನಿಸ್, ಕಬಡ್ಡಿ, ಫುಟ್ಬಾಲ್, ಆರ್ಚರಿ, ಶೂಟಿಂಗ್, ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಅಥ್ಲೆಟಿಕ್ಸ್ ಸೇರಿದಂತೆ ಕ್ರೀಡಾ ಜಗತ್ತಿನ ಸಮಗ್ರ ವಿದ್ಯಮಾನಗಳನ್ನು ತಿಳಿಯಲು 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದ ಕ್ರೀಡಾ ವಿಭಾಗಕ್ಕೆ ಭೇಟಿ ನೀಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ