logo
ಕನ್ನಡ ಸುದ್ದಿ  /  ಕ್ರೀಡೆ  /  India Title Favorites Wc 2023: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಭಾರತವೇ ಫೇವರಿಟ್: ಇಂಗ್ಲೆಂಡ್ ಮಾಜಿ ಕ್ರಿಕೆಟರ್

India Title favorites WC 2023: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಭಾರತವೇ ಫೇವರಿಟ್: ಇಂಗ್ಲೆಂಡ್ ಮಾಜಿ ಕ್ರಿಕೆಟರ್

HT Kannada Desk HT Kannada

Jan 25, 2023 01:33 PM IST

ಇಂದೋರ್ ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯ ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ (ಫೋಟೋ-PTI)

  • India Title favorites WC 2023: ಭಾರತ ಈ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್ ಗೆಲ್ಲುವ ಫೇವರಿಟ್ ಎಂದು ಇಂಗ್ಲೆಂಡ್ ಮಾಜಿ ಕ್ರಿಕೆಟಿಗರೊಬ್ಬರು ಹೇಳಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ ಕ್ಲೀನ್ ಸ್ವೀಪ್ ಮಾಡಿದ ನಂತರ   ಟ್ವಿಟರ್‌ನಲ್ಲಿ ಈ ರೀತಿ ಹೇಳಿದ್ದಾರೆ.

ಇಂದೋರ್ ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯ ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ (ಫೋಟೋ-PTI)
ಇಂದೋರ್ ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯ ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ (ಫೋಟೋ-PTI)

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಭಾರತ ಕ್ಲೀನ್ ಸ್ವೀಪ್ ಮಾಡಿದ್ದು, ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಲ್ಲಿ ಗೆದ್ದುಕೊಂಡಿರುವ ಭಾರತ, ಐಸಿಸಿ ಏಕದಿನ ರ‍್ಯಾಂಕಿಂಗ್‌ ನಲ್ಲಿ ಅಗ್ರಸ್ಥಾನಕ್ಕೆ ಏರಿದೆ.

ಟ್ರೆಂಡಿಂಗ್​ ಸುದ್ದಿ

ಕೇಳ್ರಪ್ಪೋ ಕೇಳಿ; ನೀವೂ ಬೆಂಗಳೂರು ಬುಲ್ಸ್ ತಂಡ ಸೇರಲು ಇಲ್ಲಿದೆ ಸುವರ್ಣಾವಕಾಶ, ನಿಯಮ ಮತ್ತು ಷರತ್ತುಗಳು ಅನ್ವಯ

ನಾನು ಹೇಳಿದ್ದು ತುಂಬಾ ಕಡಿಮೆ, ಆದರೂ ನಾನು ಮೌನಿಯಾಗಿದ್ದೇನೆ; ಸಾನಿಯಾ ಮಿರ್ಜಾ ಪೋಸ್ಟ್​ನ ಅರ್ಥವೇನು?

ದೇಶಕ್ಕಾಗಿ ಪದಕ ಗೆಲ್ಲುವುದೇ ನನ್ನ ಗುರಿ; ಅದಕ್ಕಾಗಿ ತೂಕ ಕಾಪಾಡಿಕೊಳ್ಳಬೇಕು ಎಂದ ವಿನೇಶ್ ಫೋಗಟ್

ಪ್ಯಾರಿಸ್ ಒಲಿಂಪಿಕ್ಸ್​ಗೆ ಅರ್ಹತೆ ಗಳಿಸಿದ ಭಾರತದ 7 ಷಟ್ಲರ್​​ಗಳು; ಅರ್ಹತೆ; ಕನ್ನಡತಿ ಅಶ್ವಿನಿ ಪೊನ್ನಪ್ಪ, ಪಿವಿ ಸಿಂಧುಗೆ ಅವಕಾಶ

ಮಂಗಳವಾರ ನಡೆದ ಕಿವೀಸ್ ವಿರುದ್ಧ ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 90 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮುಂಬರುವ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಹೇಗೆ ಪ್ರದರ್ಶನ ನೀಡಲಿದೆ ಎಂಬುದರ ಸುಳಿವು ನೀಡಿದೆ.

ನ್ಯೂಜಿಲೆಂಡ್ ವಿರುದ್ಧದ ಫಲಿತಾಂಶದ ಬಗ್ಗೆ ಎಲ್ಲೆಡೆ ಭಾರತಕ್ಕೆ ಪ್ರಶಂಸೆಯ ಸುರಿಮಳೆಯಾಗುತ್ತಿದೆ. ಈ ಬಗ್ಗೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ಪ್ರತಿಕ್ರಿಯಿಸಿದ್ದು, ಈ ವರ್ಷದ ಏಕದಿನ ವಿಶ್ವಕಪ್‌ನಲ್ಲಿ ಭಾರತ ತನ್ನ ಪ್ರದರ್ಶನದಿಂದ ಪ್ರಭಾವಿತವಾಗಿದೆ ಮತ್ತು ಅವರು ಪ್ರಶಸ್ತಿ ಫೇವರಿಟ್‌ ಆಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ವಾನ್ ಹೇಳಿದ್ದಾರೆ.

ಆಕ್ರಮಣಕಾರಿ ಏಕದಿನ ಕ್ರಿಕೆಟ್‌ನಲ್ಲಿ ಆಡುವ ಭಾರತದ ಬದ್ಧತೆಯು ಅವರನ್ನು ಅಂತಿಮವಾಗಿ ಈ ವಿಶ್ವಕಪ್ ಗೆಲ್ಲಲು ಹಾಟ್ ಫೇವರಿಟ್‌ಗಳನ್ನಾಗಿ ಮಾಡಿದೆ ಎಂದು ಇಂಗ್ಲೆಂಡ್‌ನ ಮಾಜಿ ನಾಯಕ ಮೈಕಲ್ ವಾನ್ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಈ ಸರಣಿಯಲ್ಲಿ ಭಾರತದ ಬ್ಯಾಟ್ಸ್ ಮನ್ ಗಳು ಆಕ್ರಮಣಕಾರಿಯಾಗಿ ಇನ್ನಿಂಗ್ಸ್ ಆರಂಭಿಸಿದ್ದರು.

ಈ ಮೂರು ಏಕದಿನ ಸರಣಿಯಲ್ಲಿ ಶುಭಮನ್ ಗಿಲ್ ಏಕಾಂಗಿಯಾಗಿ 360 ರನ್ ಗಳಿಸಿ ಪಾಕ್ ನಾಯಕ ಬಾಬರ್ ಅಜಮ್ ನಿರ್ಮಿಸಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದರು. ಮಂಗಳವಾರ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 385 ರನ್ ಗಳಿಸಿತ್ತು.

ಆರಂಭಿಕರಾದ ರೋಹಿತ್ ಶರ್ಮಾ (101) ಮತ್ತು ಶುಭಮನ್ ಗಿಲ್ (112) ಶತಕ ಸಿಡಿಸಿದರೆ, ಹಾರ್ದಿಕ್ ಪಾಂಡ್ಯ ಕೊನೆಯಲ್ಲಿ ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ಬೃಹತ್ ಮೊತ್ತ ಪೇರಿಸಲು ನೆರವಾದರು. ಬಳಿಕ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 295 ರನ್‌ಗಳಿಗೆ ಆಲೌಟ್ ಆಯಿತು.

ಡೇವನ್ ಕಾನ್ವೆ ಮಾತ್ರ ಶತಕ ಸಿಡಿಸಿ ಮಿಂಚಿದರು. ಈ ಪಂದ್ಯದಲ್ಲಿ ರೋಹಿತ್ ಮೂರು ವರ್ಷಗಳ ನಂತರ ಏಕದಿನದಲ್ಲಿ ಶತಕ ದಾಖಲಿಸಿದರು. ಅಂತಿಮವಾಗಿ 2020ರ ಜನವರಿ 7 ರಂದು ಶತಕ ಗಳಿಸಿದ್ದರು. ಇದೀಗ ಬರವನ್ನು ನೀಗಿಸಿಕೊಂಡಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು