logo
ಕನ್ನಡ ಸುದ್ದಿ  /  ಕ್ರೀಡೆ  /  Asia Cup 2022: ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ; ರೋಹಿತ್ ನಾಯಕ, ಬುಮ್ರಾ ಟೂರ್ನಿಯಿಂದ ಔಟ್

Asia Cup 2022: ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ; ರೋಹಿತ್ ನಾಯಕ, ಬುಮ್ರಾ ಟೂರ್ನಿಯಿಂದ ಔಟ್

HT Kannada Desk HT Kannada

Aug 24, 2022 12:20 PM IST

google News

ಏಷ್ಯಾ ಕಪ್ ಟೂರ್ನಿಗೆ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದೆ (ಫೋಟೋ-ಸಂಗ್ರಹ)

  • ಆಗಸ್ಟ್ 27 ರಿಂದ ಆರಂಭವಾಗಲಿರುವ ಏಷ್ಯಾ ಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ರೋಹಿತ್ ಶರ್ಮಾ ನಾಯಕರಾಗಿದ್ರೆ, ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಟೂರ್ನಿಯಿಂದ ಹೊರಗುಳಿದಿದ್ದಾರೆ. 

ಏಷ್ಯಾ ಕಪ್ ಟೂರ್ನಿಗೆ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದೆ (ಫೋಟೋ-ಸಂಗ್ರಹ)
ಏಷ್ಯಾ ಕಪ್ ಟೂರ್ನಿಗೆ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದೆ (ಫೋಟೋ-ಸಂಗ್ರಹ)

ಮುಂಬೈ: ಪ್ರತಿಷ್ಠಿತ ಏಷ್ಯಾಕಪ್‌ ಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನಾಯಕರಾಗಿದ್ದರೆ, ಕನ್ನಡಿಗ ಕೆ.ಎಲ್.ರಾಹುಲ್ ಉಪ ನಾಯಕರಾಗಿದ್ದಾರೆ. ಉಳಿದಂತೆ ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ ಉಪ ನಾಯಕರಾಗಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಆರ್ ಜಡೇಜಾ, ಆರ್ ಅಶ್ವಿನ್, ವೈ ಚಾಹಲ್ , ಆರ್ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಪ್ರತಿಷ್ಠಿತ ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಬಿಗ್‌ ಶಾಕ್‌ ಆಗಿದೆ. ಹಿರಿಯ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಏಷ್ಯಾಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಬುಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.

ಸೋಮವಾರ (ಆಗಸ್ಟ್ 8, 2022) ಏಷ್ಯಾಕಪ್‌ಗೆ ಭಾರತ ತಂಡವನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಗಾಯ ಉಲ್ಬಣಗೊಳಿಸುವ ಬದಲು, ಟಿ-20 ವಿಶ್ವಕಪ್‌ಗೆ ಸಿದ್ಧವಾಗಲು ಬುಮ್ರಾಗೆ ವಿಶ್ರಾಂತಿ ನೀಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ಅವರು ಏಷ್ಯಾಕಪ್‌ನಲ್ಲಿ ಆಡುತ್ತಿಲ್ಲ. ಬುಮ್ರಾ ನಮ್ಮ ಪ್ರಮುಖ ಬೌಲರ್. ಟಿ20 ವಿಶ್ವಕಪ್‌ನಲ್ಲಿ ಅವರು ಖಂಡಿತವಾಗಿಯೂ ತಂಡದಲ್ಲಿ ಇರಬೇಕು. ಅದಕ್ಕಾಗಿಯೇ ನಾವು ಏಷ್ಯಾಕಪ್‌ನಲ್ಲಿ ಆಡುವ ಅಪಾಯದ ನಿರ್ಧಾರವನ್ನು ಕೈಗೊಂಡಿಲ್ಲ. ಒಂದು ವೇಳೆ ಅವರು ಆಡಿದರೆ, ಗಾಯವು ಉಲ್ಬಣಗೊಳ್ಳಬಹುದು ಎಂದು ಬಿಸಿಸಿಐ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಆಯ್ಕೆ ಸಮಿತಿಯು ಈಗಾಗಲೇ ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ಸರಣಿಗಾಗಿ ಬುಮ್ರಾಗೆ ವಿಶ್ರಾಂತಿ ನೀಡಿದೆ. ಅಂತಿಮವಾಗಿ, ಈ ಸ್ಟಾರ್ ವೇಗಿ ಇಂಗ್ಲೆಂಡ್ ಏಕದಿನ ಸರಣಿಯಲ್ಲಿ ಆಡಿದ್ದರು. ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಭಾರತ ಪ್ರವಾಸ ಕೈಗೊಳ್ಳಲಿವೆ.

ಆ ವೇಳೆಗೆ ಬುಮ್ರಾ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ. ಅದಕ್ಕೂ ಮುನ್ನ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಬುಮ್ರಾ ಫಿಟ್ನೆಸ್ ಸಾಬೀತುಪಡಿಸಬೇಕಿದೆ. ಸದ್ಯ ಬುಮ್ರಾ ತನ್ನ ಕುಟುಂಬದೊಂದಿಗೆ ಅಮೆರಿಕದಲ್ಲಿ ಹಾಲಿಡೇ ಟ್ರಿಪ್ ಎಂಜಾಯ್ ಮಾಡುತ್ತಿದ್ದಾರೆ. ಏಷ್ಯಾ ಕಪ್ ಆಗಸ್ಟ್ 27 ರಂದು ಆರಂಭವಾಗಲಿದೆ. 28ರಂದು ಭಾರತ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಲಿದೆ. ಸೆಪ್ಟೆಂಬರ್ 11 ರಂದು ಫೈನಲ್ ಪಂದ್ಯ ನಡೆಯಲಿದೆ. ಜಾಗತಿಕ ಆಕರ್ಷಣೆಗೆ ಕಾರಣವಾಗುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಈ ಬಾರಿ ಒಮ್ಮೆ ಮಾತ್ರ ಅಲ್ಲ. ಎಲ್ಲವೂ ಅಂದುಕೊಂಡಂತೆ ಲೆಕ್ಕಾಚಾರದ ಪ್ರಕಾರವೇ ನಡೆದರೆ, ಒಟ್ಟು ಮೂರು ಬಾರಿ ಭಾರತ ಮತ್ತು ಪಾಕ್‌ ತಂಡಗಳು ಮುಖಾಮುಖಿಯಾಗಲಿವೆ.

ಏಷ್ಯಾ ಕಪ್ 2022ಗೆ ಭಾರತ ತಂಡ - ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಯಾಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಆರ್ ಪಂತ್ (ವಿ.ಕೀ), ದಿನೇಶ್ ಕಾರ್ತಿಕ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಆರ್ ಜಡೇಜಾ, ಆರ್ ಅಶ್ವಿನ್, ವೈ ಚಾಹಲ್ , ಆರ್ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಸ್ಟ್ಯಾಂಡ್‌ಬೈ: ಮೂವರು ಆಟಗಾರರು - ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಮತ್ತು ದೀಪಕ್ ಚಹಾರ್ ಅವರನ್ನು ಸ್ಟ್ಯಾಂಡ್‌ಬೈ ಎಂದು ಹೆಸರಿಸಲಾಗಿದೆ. ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಗಾಯದ ಕಾರಣ ಆಯ್ಕೆಗೆ ಲಭ್ಯರಿರಲಿಲ್ಲ. ಅವರು ಪ್ರಸ್ತುತ ಬೆಂಗಳೂರಿನ ಎನ್‌ಸಿಎಯಲ್ಲಿ ಫಿಟ್ನೆಸ್ ಗೆ ಒಳಗಾಗುತ್ತಿದ್ದಾರೆ ಎಂದು ಬಿಸಿಸಿಐ ಹೇಳಿದೆ.

ಬ್ಯಾಡ್ಮಿಂಟನ್, ಟೆನಿಸ್, ಕಬಡ್ಡಿ, ಫುಟ್ಬಾಲ್, ಆರ್ಚರಿ, ಶೂಟಿಂಗ್, ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಅಥ್ಲೆಟಿಕ್ಸ್ ಸೇರಿದಂತೆ ಕ್ರೀಡಾ ಜಗತ್ತಿನ ಸಮಗ್ರ ವಿದ್ಯಮಾನಗಳನ್ನು ತಿಳಿಯಲು 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದ ಕ್ರೀಡಾ ವಿಭಾಗಕ್ಕೆ ಭೇಟಿ ನೀಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ