logo
ಕನ್ನಡ ಸುದ್ದಿ  /  ಕ್ರೀಡೆ  /  India Vs Australia Odi: ಮೊದಲ ಏಕದಿನ ಪಂದ್ಯಕ್ಕೆ ರೋಹಿತ್ ಅಲಭ್ಯ; ಇಲ್ಲಿದೆ ಸರಣಿಯ ವೇಳಾಪಟ್ಟಿ, ಆಡುವ ಬಳಗ, ಲೈವ್ ಸ್ಟ್ರೀಮಿಂಗ್ ವಿವರ

India vs Australia ODI: ಮೊದಲ ಏಕದಿನ ಪಂದ್ಯಕ್ಕೆ ರೋಹಿತ್ ಅಲಭ್ಯ; ಇಲ್ಲಿದೆ ಸರಣಿಯ ವೇಳಾಪಟ್ಟಿ, ಆಡುವ ಬಳಗ, ಲೈವ್ ಸ್ಟ್ರೀಮಿಂಗ್ ವಿವರ

HT Kannada Desk HT Kannada

Mar 15, 2023 02:38 PM IST

ಮೊದಲ ಪಂದ್ಯಕ್ಕೆ ರೋಹಿತ್‌ ಶರ್ಮಾ ಅಲಭ್ಯ

    • ಭಾರತದ ನಾಯಕ ರೋಹಿತ್, ಕೌಟುಂಬಿಕ ಕಾರಣಗಳಿಂದಾಗಿ ಮೊದಲ ಏಕದಿನ ಪಂದ್ಯ ಆಡುತ್ತಿಲ್ಲ. ಶುಕ್ರವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಸರಣಿಯ ಆರಂಭಿಕ ಪಂದ್ಯದಲ್ಲಿ ರೋಹಿತ್ ಬದಲಿಗೆ ಉಪನಾಯಕ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಮೊದಲ ಪಂದ್ಯಕ್ಕೆ ರೋಹಿತ್‌ ಶರ್ಮಾ ಅಲಭ್ಯ
ಮೊದಲ ಪಂದ್ಯಕ್ಕೆ ರೋಹಿತ್‌ ಶರ್ಮಾ ಅಲಭ್ಯ

ಬಾರ್ಡರ್-ಗವಾಸ್ಕರ್ ಟ್ರೋಫಿಯು ಸತತ ನಾಲ್ಕನೇ ಬಾರಿ ಭಾರತಕ್ಕೆ ಒಲಿದಿದೆ. ಇದೀಗ ಟೀಮ್‌ ಇಂಡಿಯಾ ಚಿತ್ತ ಏಕದಿನ ಸರಣಿಯತ್ತ ಸಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಸರಣಿಯನ್ನು ಯಶಸ್ವಿಯಾಗಿ ಗೆದ್ದ ಬಳಿಕ ಇದೀಗ ಮತ್ತೆ ವೈಟ್ ಬಾಲ್ ಸರಣಿ ಗೆಲ್ಲಲು ಭಾರತ ತಂತ್ರ ರೂಪಿಸುತ್ತಿದೆ. ಎರಡು ಬಾರಿಯ ವಿಶ್ವ ಚಾಂಪಿಯನ್ ಭಾರತವು, ಮುಂಬರುವ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.

ಟ್ರೆಂಡಿಂಗ್​ ಸುದ್ದಿ

ಮಲೇಷ್ಯಾ ಫುಟ್ಬಾಲ್ ಆಟಗಾರ ಫೈಸಲ್ ಹಲೀಮ್ ಮೇಲೆ ಆ್ಯಸಿಡ್ ದಾಳಿ; ಮೈಮೇಲೆ ಸುಟ್ಟ ಗಾಯ, ಆರೋಪಿ ಅರೆಸ್ಟ್

ಮೊದಲು ರಾಯ್​ಬರೇಲಿ ಗೆಲ್ಲಿ; ತನ್ನ ನೆಚ್ಚಿನ ಚೆಸ್ ದಿಗ್ಗಜ ಆಟಗಾರನಿಂದಲೇ ಟೀಕೆಗೊಳಗಾದ ರಾಹುಲ್ ಗಾಂಧಿ

Hamida Banu: ಭಾರತದ ಮೊದಲ ಮಹಿಳಾ ವೃತ್ತಿಪರ ಕುಸ್ತಿಪಟು ಹಮೀದಾ ಬಾನು ಅವರಿಗೆ ಇಂದು ಗೂಗಲ್ ಡೂಡಲ್ ಗೌರವ, 5 ಆಸಕ್ತಿದಾಯಕ ಅಂಶಗಳು

ಕೇಳ್ರಪ್ಪೋ ಕೇಳಿ; ನೀವೂ ಬೆಂಗಳೂರು ಬುಲ್ಸ್ ತಂಡ ಸೇರಲು ಇಲ್ಲಿದೆ ಸುವರ್ಣಾವಕಾಶ, ನಿಯಮ ಮತ್ತು ಷರತ್ತುಗಳು ಅನ್ವಯ

ಉಭಯ ತಂಡಗಳ ಸುದ್ದಿ

ಐದು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ, ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್‌ಗಾಗಿ ಭಾರತೀಯ ಪಿಚ್‌ಗಳಲ್ಲಿ ಈ ಸರಣಿಯ ಮೂಲಕ ಅಭ್ಯಾಸ ಪಂದ್ಯಗಳನ್ನಾಡಲು ಆಶಿಸುತ್ತಿದೆ. ಆಸ್ಟ್ರೇಲಿಯಾದ ಅನುಭವಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಏಕದಿನ ಸರಣಿಗೆ ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಮೊಣಕೈ ಗಾಯದಿಂದಾಗಿ ವಾರ್ನರ್ ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಎರಡು ಟೆಸ್ಟ್‌ಗಳಿಂದ ಹೊರಗುಳಿದಿದ್ದರು.

ಆಸ್ಟ್ರೇಲಿಯಾದ ವೈಟ್-ಬಾಲ್ ಸ್ಪೆಷಲಿಸ್ಟ್‌ಗಳಾದ ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಮಾರ್ಷ್, ಸೀನ್ ಅಬಾಟ್, ಮಾರ್ಕಸ್ ಸ್ಟೊಯ್ನಿಸ್, ಆಡಮ್ ಝಂಪಾ, ಜೋಶ್ ಇಂಗ್ಲಿಸ್ ಮತ್ತು ಆಶ್ಟನ್ ಅಗರ್ ಅವರು ಭಾರತ ವಿರುದ್ಧದ ಏಕದಿನ ಸರಣಿಗೆ ತಂಡ ಸೇರಿಕೊಳ್ಳಲಿದ್ದಾರೆ. ಅವರೆಲ್ಲಾ ಕಳೆದ ವಾರ ಅಹಮದಾಬಾದ್‌ನಲ್ಲಿ ತರಬೇತಿ ಅವಧಿಗೆ ಹಾಜರಾಗಿದ್ದರು. ಭಾರತದ ನಾಯಕ ರೋಹಿತ್, ಕೌಟುಂಬಿಕ ಕಾರಣಗಳಿಂದಾಗಿ ಮೊದಲ ಏಕದಿನ ಪಂದ್ಯ ಆಡುತ್ತಿಲ್ಲ. ಶುಕ್ರವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಸರಣಿಯ ಆರಂಭಿಕ ಪಂದ್ಯದಲ್ಲಿ ರೋಹಿತ್ ಬದಲಿಗೆ ಉಪನಾಯಕ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ವೇಳಾಪಟ್ಟಿ

ದಿನಾಂಕಪಂದ್ಯಸ್ಥಳಸಮಯ
ಮಾರ್ಚ್‌ 17, ಶುಕ್ರವಾರಮೊದಲ ಏಕದಿನಮುಂಬೈಮಧ್ಯಾಹ್ನ‌, 1.30
ಮಾರ್ಚ್‌  19, ಭಾನುವಾರಎರಡನೇ ಏಕದಿನವಿಶಾಖಪಟ್ಟಣಮಧ್ಯಾಹ್ನ‌, 1.30
ಮಾರ್ಚ್‌ 22, ಬುಧವಾರಮೂರನೇ ಏಕದಿನಚೆನ್ನೈಮಧ್ಯಾಹ್ನ‌, 1.30

ಕಮ್ಮಿನ್ಸ್‌ಗೆ ಬದಲಿ ಯಾರ ಇಲ್ಲ

ಕೌಟುಂಬಿಕ ಕಾರಣಗಳಿಂದಾಗಿ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮಧ್ಯದಲ್ಲೇ ತವರಿಗೆ ಹಿಂದಿರುಗಿದ ಕಾರಣ ಆಸೀಸ್‌ ತಂಡವು ಸ್ಟಾರ್ ವೇಗಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವವನ್ನು ಮತ್ತೆ ಮಿಸ್ ಮಾಡಿಕೊಳ್ಳಲಿದೆ. ಹೀಗಾಗಿ ಸೀಮಿತ ಓವರ್‌ಗಳ ಸರಣಿಯಲ್ಲೂ ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸಲಿದ್ದಾರೆ.

ಕಮ್ಮಿನ್ಸ್ ಬದಲಿಗೆ ಬೇರೆ ಯಾರನ್ನೂ ಕ್ರಿಕೆಟ್‌ ಆಸ್ಟ್ರೇಲಿಯಾ ಹೆಸರಿಸಿಲ್ಲ. ಹೀಗಾಗಿ ಕಾಂಗರೂಗಳು ಆತಿಥೇಯ ಭಾರತ ವಿರುದ್ಧದ ಏಕದಿನ ಸರಣಿಗೆ 15 ಸದಸ್ಯರ ತಂಡದಿಂದ ತಮ್ಮ ಆಡುವ ಬಳಗವನ್ನು ಅಂತಿಮಗೊಳಿಸಬೇಕಾಗುತ್ತದೆ.

ಅಯ್ಯರ್ ಬದಲಿಗೆ ಯಾರು?

ಲಭ್ಯ ವರದಿಗಳ ಪ್ರಕಾರ, ಭಾರತದ ಬ್ಯಾಟರ್ ಶ್ರೇಯಸ್ ಅಯ್ಯರ್ ಆಸ್ಟ್ರೇಲಿಯಾ ವಿರುದ್ಧದ ಸಂಪೂರ್ಣ ಏಕದಿನ ಸರಣಿಯನ್ನು ಕಳೆದುಕೊಳ್ಳಲಿದ್ದಾರೆ. ಸೋಮವಾರ ಮತ್ತೆ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಯ್ಯರ್ 4ನೇ ಟೆಸ್ಟ್‌ನ ಅಂತಿಮ ದಿನದಾಟದಿಂದ ಹೊರಗುಳಿದಿದ್ದರು. ಅಯ್ಯರ್ ಅನುಪಸ್ಥಿತಿಯಲ್ಲಿ, ಮಧ್ಯಪ್ರದೇಶದ ಬ್ಯಾಟರ್ ರಜತ್ ಪಾಟಿದಾರ್ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ.

ಏಕದಿನ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕತ್.

ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ) ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮರೂನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಶೆನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಜ್ಯೆ ರಿಚರ್ಡ್ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ.

ಲೈವ್‌ ಸ್ಟ್ರೀಮಿಂಗ್‌ ವಿವರ

ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಏಕದಿನ ಸರಣಿಯ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾತ್ತದೆ. ಡಿಸ್ನಿ ಪ್ಲಸ್‌ Hotstarನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

    ಹಂಚಿಕೊಳ್ಳಲು ಲೇಖನಗಳು