logo
ಕನ್ನಡ ಸುದ್ದಿ  /  ಕ್ರೀಡೆ  /  India Vs Sri Lanka 1st Odi: ಇಂದು ಭಾರತ-ಶ್ರೀಲಂಕಾ ಮೊದಲ ಏಕದಿನ; ರೋಹಿತ್, ವಿರಾಟ್ ಪುನರಾಗಮನ

India vs Sri Lanka 1st ODI: ಇಂದು ಭಾರತ-ಶ್ರೀಲಂಕಾ ಮೊದಲ ಏಕದಿನ; ರೋಹಿತ್, ವಿರಾಟ್ ಪುನರಾಗಮನ

HT Kannada Desk HT Kannada

Jan 10, 2023 06:11 AM IST

ಅಭ್ಯಾಸ ಅವಧಿಯಲ್ಲಿ ಕೆ ಎಲ್‌ ರಾಹುಲ್

    • ಟಿ20 ಸರಣಿಯಿಂದ ಹೊರಗುಳಿದಿರುವ ರೋಹಿತ್ ಶರ್ಮಾ, ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಕೂಡಾ ತಂಡಕ್ಕೆ ಮರಳಿದ್ದಾರೆ. 
ಅಭ್ಯಾಸ ಅವಧಿಯಲ್ಲಿ ಕೆ ಎಲ್‌ ರಾಹುಲ್
ಅಭ್ಯಾಸ ಅವಧಿಯಲ್ಲಿ ಕೆ ಎಲ್‌ ರಾಹುಲ್

ಟಿ20 ಸರಣಿಯನ್ನು ಯಶಸ್ವಿಯಾಗಿ ಗೆದ್ದಿರುವ ಭಾರತ, ಇದೀಗ ಲಂಕಾ ವಿರುದ್ಧದ ಏಕದಿನ ಸರಣಿಯನ್ನು ಕೂಡಾ ಗೆಲ್ಲಲು ಸಿದ್ಧತೆ ನಡೆಸಿದೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವು ಇಂದು (ಮಂಗಳವಾರ, ಜನವರಿ 10) ಗುವಾಹಟಿಯ ಬರ್ಸಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. 2017ರ ಡಿಸೆಂಬರ್ ಬಳಿಕ ಏಷ್ಯದ ಎರಡು ಬಲಿಷ್ಠ ತಂಡಗಳು ಭಾರತದ ನೆಲದಲ್ಲಿ ಏಕದಿನ ಸ್ವರೂಪದಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು.

ಟ್ರೆಂಡಿಂಗ್​ ಸುದ್ದಿ

ಮೊದಲು ರಾಯ್​ಬರೇಲಿ ಗೆಲ್ಲಿ; ತನ್ನ ನೆಚ್ಚಿನ ಚೆಸ್ ದಿಗ್ಗಜ ಆಟಗಾರನಿಂದಲೇ ಟೀಕೆಗೊಳಗಾದ ರಾಹುಲ್ ಗಾಂಧಿ

Hamida Banu: ಭಾರತದ ಮೊದಲ ಮಹಿಳಾ ವೃತ್ತಿಪರ ಕುಸ್ತಿಪಟು ಹಮೀದಾ ಬಾನು ಅವರಿಗೆ ಇಂದು ಗೂಗಲ್ ಡೂಡಲ್ ಗೌರವ, 5 ಆಸಕ್ತಿದಾಯಕ ಅಂಶಗಳು

ಕೇಳ್ರಪ್ಪೋ ಕೇಳಿ; ನೀವೂ ಬೆಂಗಳೂರು ಬುಲ್ಸ್ ತಂಡ ಸೇರಲು ಇಲ್ಲಿದೆ ಸುವರ್ಣಾವಕಾಶ, ನಿಯಮ ಮತ್ತು ಷರತ್ತುಗಳು ಅನ್ವಯ

ನಾನು ಹೇಳಿದ್ದು ತುಂಬಾ ಕಡಿಮೆ, ಆದರೂ ನಾನು ಮೌನಿಯಾಗಿದ್ದೇನೆ; ಸಾನಿಯಾ ಮಿರ್ಜಾ ಪೋಸ್ಟ್​ನ ಅರ್ಥವೇನು?

ಈ ತಿಂಗಳ ಆರಂಭದಲ್ಲಿ ಆರಂಭವಾದ, ಭಾರತ ಮತ್ತು ಶ್ರೀಲಂಕಾ ನಡುವಣ ಮೂರು ಪಂದ್ಯಗಳ ಟಿ20 ಸರಣಿಯನ್ನು, ಹಾರ್ದಿಕ್‌ ಪಾಂಡ್ಯ ನೇತೃತ್ವದ ಟೀಂ ಇಂಡಿಯಾ 2-1ರಿಂದ ತನ್ನದಾಗಿಸಿಕೊಂಡಿದೆ. ಈ ವರ್ಷ ತವರಿನಲ್ಲೇ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನತ್ತ ಗಮನಹರಿಸಿರುವ ಬಿಸಿಸಿಐ, ಲಂಕಾ ವಿರುದ್ಧದ ಏಕದಿನ ಸರಣಿಗೆ ಸ್ಟಾರ್ ಆಟಗಾರರ ತಂಡವನ್ನು ಆಯ್ಕೆ ಮಾಡಿದೆ.

ಭಾರತ ಮತ್ತು ಲಂಕಾ ತಂಡಗಳು ಇದೇ ಮೊದಲ ಬಾರಿಗೆ ಬರ್ಸಾಪರಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. 2020ರಲ್ಲಿ ಉಭಯ ತಂಡಗಳ ನಡುವೆ ಈ ಮೈದಾನದಲ್ಲಿ ಟಿ20 ಪಂದ್ಯ ನಡೆಯಬೇಕಿತ್ತು. ಆದರೆ, ಮಳೆಯಿಂದಾಗಿ ಪಂದ್ಯ ಮುಂದೂಡಬೇಕಾಯಿತು. ಬರ್ಸಾಪರಾ ಕ್ರೀಡಾಂಗಣದಲ್ಲಿ‌ ಈವರೆಗೆ ಕೇವಲ ಒಂದು ಏಕದಿನ ಪಂದ್ಯ ಮಾತ್ರ ನಡೆದಿದೆ. 2018ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ, ಭಾರತ ಪರ ರನ್ ಚೇಸಿಂಗ್‌ ವೇಳೆ ರೋಹಿತ್ ಶರ್ಮಾ ಮತ್ತು ಕೊಹ್ಲಿ ಶತಕ ಸಿಡಿಸಿ ಮಿಂಚಿದ್ದರು. ಮತ್ತೊಂದೆಡೆ ಇಲ್ಲಿ ಮೂರು ಟಿ20 ಪಂದ್ಯಗಳು ನಡೆದಿದ್ದು, 2022ರ ಅಕ್ಟೋಬರ್ ತಿಂಗಳಲ್ಲಿ ಕೊನೆಯ ಪಂದ್ಯ ನಡೆದಿತ್ತು.

ಟಿ20 ಸರಣಿಯಿಂದ ಹೊರಗುಳಿದಿರುವ ರೋಹಿತ್ ಶರ್ಮಾ, ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಕೂಡಾ ತಂಡಕ್ಕೆ ಮರಳಿದ್ದಾರೆ. ಈ ಮೂವರನ್ನು ಟಿ20 ಸರಣಿಗೆ ಆಯ್ಕೆ ಮಾಡಲಾಗಿಲ್ಲ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯವು, ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 01:30ಕ್ಕೆ ಆರಂಭವಾಗಲಿದೆ. ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇದೇ ವೇಳೆ ಡಿಸ್ನಿ + ಹಾಟ್‌ಸ್ಟಾರ್‌ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲೂ ಲೈವ್‌ ಸ್ಟ್ರೀಮಿಂಗ್‌ ಮಾಡಲಾಗುತ್ತದೆ.

ಹವಾಮಾನ ವರದಿ

ಆಟದ ಸಮಯದಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ 17 ಡಿಗ್ರಿ ತಾಪಮಾನವಿರಲಿದೆ. ದಿನವಿಡೀ ಮಳೆಯಾಗುವ ಸಾಧ್ಯತೆ ಇಲ್ಲ. ಈ ಮೈದಾನದಲ್ಲಿ ಈ ಹಿಂದೆ ನಡೆದ ಒಂದು ಏಕದಿನ ಪಂದ್ಯದಲ್ಲಿ, ಭಾರತವು ರನ್ ಚೇಸಿಂಗ್‌ ಮಾಡಿ ಗೆದ್ದಿದೆ. ಎರಡೂ ತಂಡಗಳು 320 ಕ್ಕೂ ಹೆಚ್ಚು ರನ್ ಗಳಿಸಿದ್ದರಿಂದ, ಈ ಪಿಚ್ ಬ್ಯಾಟಿಂಗ್‌ಗೆ ಸೂಕ್ತವಾಗಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಶತಕ ದಾಖಲಿಸಿದ್ದರು.

ಸಂಭಾವ್ಯ ಆಡುವ ಬಳಗ

ಭಾರತ: ರೋಹಿತ್ ಶರ್ಮಾ (ನಾಯಕ), ಶುಬ್ಮನ್‌ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್/ಸೂರ್ಯಕುಮಾರ್‌ ಯಾದವ್, ಕೆ ಎಲ್ ರಾಹುಲ್‌ (ವಿಕೆಟ್‌ ಕೀಪರ್‌), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್/ಮೊಹಮ್ಮದ್ ಶಮಿ ಮತ್ತು ಯಜುವೇಂದ್ರ ಚಹಾಲ್‌.

ಶ್ರೀಲಂಕಾ: ಕುಸಾಲ್ ಮೆಂಡಿಸ್ (ವಿಕೆಟ್‌ ಕೀಪರ್‌), ಪಾತುಮ್ ನಿಸ್ಸಾಂಕ, ಧನಂಜಯ ಡಿ ಸಿಲ್ವಾ, ಅವಿಷ್ಕ ಫೆರ್ನಾಂಡೊ, ಚರಿತ್ ಅಸಲಂಕಾ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ/ದುನಿತ್ ವೆಲ್ಲಲಾಗೆ, ಮಹೀಶ್ ತೀಕ್ಷಣ, ದಿಲ್ಶನ್ ಮಧುಶಂಕ ಮತ್ತು ಕಸುನ್ ರಜಿತ.

    ಹಂಚಿಕೊಳ್ಳಲು ಲೇಖನಗಳು