logo
ಕನ್ನಡ ಸುದ್ದಿ  /  Sports  /  Mumbai Indians Vs Gujarat Giants Wpl 2023 Match Preview

Women's Premier League: ಅಜೇಯ ಮುಂಬೈಗೆ ಮೊದಲ ಸೋಲುಣಿಸಲು ಗುಜರಾತ್ ಜೈಂಟ್ಸ್ ಸಿದ್ಧ

HT Kannada Desk HT Kannada

Mar 14, 2023 04:22 PM IST

ಅಜೇಯ ಓಟ ಮುಂದುವರೆಸಲು ಮುಂಬೈ ಪ್ಲಾನ್

    • ವಿಮೆನ್ಸ್‌ ಪ್ರೀಮಿಯರ್‌ ಲೀಗ್‌ನ ಎಲ್ಲಾ ಪಂದ್ಯಗಳು ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದೆ. ಕನ್ನಡ ಕಾಮೆಂಟರಿಯೊಂದಿಗೆ ಕಲರ್ಸ್‌ ಕನ್ನಡ ಸಿನಿಮಾ ವಾಹಿನಿಯಲ್ಲಿ ನೇರಪ್ರಸಾರ ಇರಲಿದೆ.
ಅಜೇಯ ಓಟ ಮುಂದುವರೆಸಲು ಮುಂಬೈ ಪ್ಲಾನ್
ಅಜೇಯ ಓಟ ಮುಂದುವರೆಸಲು ಮುಂಬೈ ಪ್ಲಾನ್

ವಿಮೆನ್ಸ್‌ ಪ್ರೀಮಿಯರ್‌ ಲೀಗ್‌ನಲ್ಲಿ ಈವರೆಗೆ ಒಂದೇ ಒಂದು ಪಂದ್ಯವನ್ನೂ ಸೋಲದೆ ಅಜೇಯವಾಗಿ ಮುನ್ನುಗ್ಗುತ್ತಿರುವ ಮುಂಬೈ ಇಂಡಿಯನ್ಸ್, ಇಂದು ಗುಜರಾತ್ ಜೈಂಟ್ಸ್‌ ತಂಡವನ್ನು ಎದುರಿಸುತ್ತಿದೆ. ಐದು ತಂಡಗಳ ಲೀಗ್‌ ಅಂಕಪಟ್ಟಿಯಲ್ಲಿ ಸದ್ಯ ನಾಲ್ಕನೇ ಸ್ಥಾನದಲ್ಲಿರುವ ಗುಜರಾತ್‌ ಅನ್ನು ಸುಲಭವಾಗಿ ಮಣಿಸುವ ವಿಶ್ವಾಸದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಪಡೆ ಮೈದಾನಕ್ಕಿಳಿಯಲು ಸಜ್ಜಾಗಿದೆ.

ಟ್ರೆಂಡಿಂಗ್​ ಸುದ್ದಿ

ದೇಶಕ್ಕಾಗಿ ಪದಕ ಗೆಲ್ಲುವುದೇ ನನ್ನ ಗುರಿ; ಅದಕ್ಕಾಗಿ ತೂಕ ಕಾಪಾಡಿಕೊಳ್ಳಬೇಕು ಎಂದ ವಿನೇಶ್ ಫೋಗಟ್

ಪ್ಯಾರಿಸ್ ಒಲಿಂಪಿಕ್ಸ್​ಗೆ ಅರ್ಹತೆ ಗಳಿಸಿದ ಭಾರತದ 7 ಷಟ್ಲರ್​​ಗಳು; ಅರ್ಹತೆ; ಕನ್ನಡತಿ ಅಶ್ವಿನಿ ಪೊನ್ನಪ್ಪ, ಪಿವಿ ಸಿಂಧುಗೆ ಅವಕಾಶ

1900 ರಿಂದ 2020ರ ತನಕ; 120 ವರ್ಷಗಳ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಗೆದ್ದಿರುವ ಪದಕಗಳೆಷ್ಟು? ವರ್ಷವಾರು ಒಂದು ನೋಟ

ಆರ್ಚರಿ ವಿಶ್ವಕಪ್ 2024: ಭಾರತಕ್ಕೆ ಹ್ಯಾಟ್ರಿಕ್ ಚಿನ್ನ, ಪುರುಷರ-ಮಹಿಳೆಯರ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಸ್ವರ್ಣ

ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ಅಜೇಯ ಅರ್ಧಶತಕ ಮತ್ತು ಯಾಸ್ತಿಕಾ ಭಾಟಿಯಾ ಮತ್ತು ನ್ಯಾಟ್-ಸಿವರ್ ಬ್ರಂಟ್ ಅವರ ಭರ್ಜರಿ ಆಟದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ತಮ್ಮ ಕೊನೆಯ ಡಬ್ಲ್ಯುಪಿಎಲ್ ಪಂದ್ಯದಲ್ಲಿ ಯುಪಿ ವಾರಿಯರ್ಜ್ ವಿರುದ್ಧ ಸುಲಭವಾಗಿ ಎಂಟು ವಿಕೆಟ್‌ಗಳಿಂದ ಗೆದ್ದಿತ್ತು. ಆ ಮೂಲಕ ಟೂರ್ನಿಯಲ್ಲಿ ಸತತ ನಾಲ್ಕನೇ ಗೆಲುವು ಸಾಧಿಸಿತು. ಗೆಲುವಿನೊಂದಿಗೆ, ಎಂಐ ಒಟ್ಟು ಎಂಟು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿತು.

ಮತ್ತೊಂದೆಡೆ, ಗುಜರಾತ್ ತಂಡವು ತಮ್ಮ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 10 ವಿಕೆಟ್‌ಗಳಿಂದ ಹೀನಾಯವಾಗಿ ಸೋತಿತು. ಮರಿಜಾನ್ನೆ ಕಾಪ್‌ ಬೌಲಿಂಗ್ ದಾಳಿ ಮತ್ತು ಶಫಾಲಿ ವರ್ಮಾ ಪವರ್ ಹಿಟ್ಟಿಂಗ್‌ಗೆ ತತ್ತರಿಸಿದ ಗುಜರಾತ್‌, ಪಂದ್ಯವನ್ನು ಕಳೆದುಕೊಂಡಿತು. ಸದ್ಯ ಸ್ನೇಹಾ ರಾಣಾ ಬಳಗವು ನಾಲ್ಕು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿದೆ. ಹೀಗಾಗಿ ಎರಡು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವಿನ WPL 2023 ಪಂದ್ಯ ಯಾವಾಗ ನಡೆಯುತ್ತದೆ?

ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಜೈಂಟ್ಸ್ ನಡುವಿನ ಪಂದ್ಯವು ಮಂಗಳವಾರ, ಮಾರ್ಚ್ 14 ರಂದು ನಡೆಯಲಿದೆ. ಪಂದ್ಯವು ಸಂಜೆ 7:30ಕ್ಕೆ ಪ್ರಾರಂಭವಾಗುತ್ತದೆ. ಟಾಸ್ ಪ್ರಕ್ರಿಯೆ ಸಂಜೆ 07:00ಕ್ಕೆ ನಡೆಯಲಿದೆ.

ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ಪಂದ್ಯವನ್ನು ಎಲ್ಲಿ ನಡೆಯುತ್ತದೆ?

ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಜೈಂಟ್ಸ್ ಪಂದ್ಯವು ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ಪಂದ್ಯವನ್ನು ಟಿವಿಯಲ್ಲಿ ಹೇಗೆ ವೀಕ್ಷಿಸಬಹುದು?

ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ಪಂದ್ಯವು ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದೆ. ವಿಮೆನ್ಸ್‌ ಪ್ರೀಮಿಯರ್‌ ಲೀಗ್‌ನ ಎಲ್ಲಾ ಪಂದ್ಯಗಳು ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದೆ. ಕನ್ನಡ ಕಾಮೆಂಟರಿಯೊಂದಿಗೆ ಕಲರ್ಸ್‌ ಕನ್ನಡ ಸಿನಿಮಾ ವಾಹಿನಿಯಲ್ಲಿ ನೇರಪ್ರಸಾರ ಇರಲಿದೆ.

ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?

WPL 2023ರ ಎಲ್ಲಾ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾ ಅಪ್ಲಿಕೇಶನ್‌ಲ್ಲಿ ಲಭ್ಯವಿರುತ್ತದೆ. ಇದು ಸಂಪೂರ್ಣ ಉಚಿತ.

ಮುಂಬೈ ಇಂಡಿಯನ್ಸ್‌ ಸಂಭಾವ್ಯ ಆಡುವ ಬಳಗ: ಯಾಸ್ತಿಕಾ ಭಾಟಿಯಾ (ವಿಕೆಟ್‌ ಕೀಪರ್), ಹೇಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಧಾರಾ ಗುಜ್ಜರ್/ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಅಮಂಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್

ಗುಜರಾತ್‌ ಜೈಂಟ್ಸ್‌ ಸಂಭಾವ್ಯ ಆಡುವ ಬಳಗ: ಸಬ್ಬಿನೇನಿ ಮೇಘನಾ, ಲಾರಾ ವೊಲ್ವಾರ್ಡ್ಟ್/ಸೋಫಿಯಾ ಡಂಕ್ಲಿ, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್, ಜಾರ್ಜಿಯಾ ವೇರ್ಹ್ಯಾಮ್/ಅನ್ನಾಬೆಲ್ ಸದರ್ಲ್ಯಾಂಡ್, ಸುಷ್ಮಾ ವರ್ಮಾ (ವಿಕೆಟ್‌ ಕೀಪರ್), ದಯಾಲನ್ ಹೇಮಲತಾ, ಸ್ನೇಹ ರಾಣಾ (ನಾಯಕಿ), ಕಿಮ್ ಗಾರ್ತ್, ಮಾನ್ಸಿ ಜೋಶಿ, ತನುಜಾ ಕನ್ವರ್

    ಹಂಚಿಕೊಳ್ಳಲು ಲೇಖನಗಳು