logo
ಕನ್ನಡ ಸುದ್ದಿ  /  ಕ್ರೀಡೆ  /  2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ತುದಿಗಾಲಿನಲ್ಲಿ ನಿಂತ ಭಾರತ; ಬಿಡ್‌ ಖಚಿತಪಡಿಸಿದ ಪ್ರಧಾನಿ ಮೋದಿ

2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ತುದಿಗಾಲಿನಲ್ಲಿ ನಿಂತ ಭಾರತ; ಬಿಡ್‌ ಖಚಿತಪಡಿಸಿದ ಪ್ರಧಾನಿ ಮೋದಿ

Jayaraj HT Kannada

Oct 14, 2023 11:50 PM IST

ಮುಂಬೈನಲ್ಲಿ ನಡೆದ 141ನೇ ಐಒಸಿ ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.

    • 2036 Olympics: 2036ರ ಒಲಂಪಿಕ್ಸ್‌ಗೆ ಆತಿಥ್ಯ ವಹಿಸಲು ಭಾರತವು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಬೈನಲ್ಲಿ ನಡೆದ 141ನೇ ಐಒಸಿ ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಮುಂಬೈನಲ್ಲಿ ನಡೆದ 141ನೇ ಐಒಸಿ ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. (PTI)

ವಿಶ್ವದಲ್ಲೇ ಅತಿದೊಡ್ಡ ಮತ್ತು ಅದ್ಧೂರಿ ಕ್ರೀಡಾಕೂಟ ಒಲಿಂಪಿಕ್ಸ್ (Olympics).‌ ಈ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸುವುದೆಂದರೆ ಅದೊಂದು ಪ್ರತಿಷ್ಠೆ. ಅಲ್ಲದೆ ಒಲಿಂಪಿಕ್ಸ್‌ ಕೂಟಕ್ಕೆ ಆತಿಥ್ಯ ನೀಡಲು ಕೋಟಿ ಕೋಟಿ ಲೆಕ್ಕದಲ್ಲಿ ಹಣ ಬೇಕಾಗುತ್ತದೆ. ಹೀಗಾಗಿ ಅಮೆರಿಕ, ಜಪಾನ್‌, ಫ್ರಾನ್ಸ್, ಇಂಗ್ಲೆಂಡ್‌ನಂಥ ಶ್ರೀಮಂತ ರಾಷ್ಟ್ರಗಳು ಮಾತ್ರ ಈವರೆಗೆ ಅದ್ಧೂರಿ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸಿವೆ. ಇದೀಗ ಭಾರತ ಕೂಡಾ ದೊಡ್ಡ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲು ಮುಂದಾಗಿದೆ.

ಟ್ರೆಂಡಿಂಗ್​ ಸುದ್ದಿ

Bengaluru Weather: ಆರ್‌ಸಿಬಿ ಅಭಿಮಾನಿಗಳು ಚಿಂತಿಸಬೇಕಾದ್ದಿಲ್ಲ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿದೆ ಸಬ್‌ಏರ್‌ ಸಿಸ್ಟಮ್‌, ಏನದು

42 ವರ್ಷದ ಎಂಎಸ್‌ ಧೋನಿ ಫಿಟ್ನೆಸ್ ಸೀಕ್ರೆಟ್ ಏನು; ಕೂಲ್ ಕ್ಯಾಪ್ಟನ್ ಡಯಟ್, ವರ್ಕೌಟ್ ಪ್ಲಾನ್ ಹೀಗಿರುತ್ತೆ

RCB vs CSK IPL 2024: ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಸಿಎಸ್‌ಕೆ ರಣತಂತ್ರ; ಚೆನ್ನೈ ಸೂಪರ್ ಕಿಂಗ್ಸ್ ಆಡುವ ಸಂಭಾವ್ಯ 11ರ ಬಳಗ ಹೀಗಿದೆ

ತಂದೆ-ತಾಯಿಯೂ ಕ್ರೀಡಾಪಟುಗಳು, ಕೋಚ್​ ಮಗಳನ್ನೇ ಪಟಾಯಿಸಿದ್ರು; ಇದು ನಿವೃತ್ತಿ ಘೋಷಿಸಿದ ಸುನಿಲ್ ಛೆಟ್ರಿ ಲೈಫ್​ಸ್ಟೋರಿ

ಸದ್ಯ ಮುಂದಿನ ವರ್ಷದ ಕ್ರೀಡಾಕೂಟವು 2024ರಲ್ಲಿ ಪ್ಯಾರಿಸ್‌ನಲ್ಲಿ ನಡೆಯುತ್ತಿದೆ. ಆ ಬಳಿಕ 2028ರಲ್ಲಿ ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯಲಿದೆ. ಇದೇ ರೀತಿ 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸಲು ಭಾರತ ಮುಂದಾಗಿದೆ. ಹೀಗಾಗಿ ಇದಕ್ಕಾಗಿ ನಡೆಯುವ ಬಿಡ್‌ನಲ್ಲಿ ಭಾರತ ಭಾಗವಹಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದ್ದಾರೆ.

ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆದ 141ನೇ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ (ಐಒಸಿ) ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಈ ಘೋಷಣೆ ಮಾಡಿದ್ದಾರೆ. 2036ರ ಒಲಿಂಪಿಕ್ಸ್‌ ಆತಿಥ್ಯಕ್ಕೆ ಭಾರತ ಕೂಡಾ ಬಿಡ್‌ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ

ಒಲಿಂಪಿಕ್ಸ್ ಆಯೋಜಿಸಲು ಭಾರತ ಉತ್ಸುಕವಾಗಿದೆ ಎಂದು ಮೋದಿ ಹೇಳಿದರು. “2036ರ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸುವ ನಮ್ಮ ಪ್ರಯತ್ನದಲ್ಲಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ಇದು 140 ಕೋಟಿ ಭಾರತೀಯರ ಕನಸು. ಐಒಸಿ ಬೆಂಬಲದೊಂದಿಗೆ, ನಾವು ಈ ಕನಸನ್ನು ನನಸಾಗಿಸಲು ಬಯಸುತ್ತೇವೆ. ಕ್ರೀಡೆಯೆಂದರೆ ಕೇವಲ ಪದಕಗಳನ್ನು ಗೆಲ್ಲುವುದಲ್ಲ. ಇದು ಜನರ ಹೃದಯಗಳನ್ನು ಗೆಲ್ಲುವ ಅತ್ಯುತ್ತಮ ಮಾರ್ಗ. ಇದು ಚಾಂಪಿಯನ್‌ಗಳನ್ನು ಮಾತ್ರ ಹುಟ್ಟುಹಾಕುವುದಲ್ಲದೆ ಶಾಂತಿಯನ್ನು ಉತ್ತೇಜಿಸುತ್ತದೆ” ಎಂದು ಮೋದಿ ತಿಳಿಸಿದ್ದಾರೆ.

2029ರಲ್ಲಿ ಯೂತ್ ಒಲಿಂಪಿಕ್ಸ್ ಆಯೋಜಿಸಲು ಭಾರತವು ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. “ನಾವು 2029ರ ಯೂತ್ ಒಲಿಂಪಿಕ್ಸ್ ಅನ್ನು ಆಯೋಜಿಸಲು ಸಿದ್ಧರಿದ್ದೇವೆ. ಇದಕ್ಕಾಗಿ ಭಾರತಕ್ಕೆ ಐಒಸಿಯಿಂದ ನಿರಂತರ ಬೆಂಬಲ ಸಿಗುವ ಭರವಸೆ ಇದೆ” ಎಂದು ಅವರು ಐಒಸಿ ಅಧ್ಯಕ್ಷ ಥಾಮಸ್ ಬಾಚ್ ಸಮ್ಮುಖದಲ್ಲಿ ಹೇಳಿದ್ದಾರೆ.

ಸುಮಾರು 40 ವರ್ಷಗಳ ಬಳಿಕ ಭಾರತವು ಎರಡನೇ ಬಾರಿಗೆ ಐಒಸಿ ಅಧಿವೇಶನವನ್ನು ಆಯೋಜಿಸುತ್ತಿದೆ. IOCಯ 86ನೇ ಸಭೆಯು 1983ರಲ್ಲಿ ನವದೆಹಲಿಯಲ್ಲಿ ನಡೆದಿತ್ತು.

2028ರ ಒಲಿಂಪಿಕ್ಸ್‌ಗೆ ಕ್ರಿಕೆಟ್ ಅಧಿಕೃತ ಸೇರ್ಪಡೆ; ಒಲಿಂಪಿಕ್ ಸಮಿತಿಯಿಂದ ಅಸ್ತು

ಕೊನೆಗೂ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಕ್ರಿಕೆಟ್‌ ಸವಿಯುವ ಭಾಗ್ಯ ಅಭಿಮಾನಿಗಳಿಗೆ ಸಿಕ್ಕಿದೆ. 2028ರಲ್ಲಿ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ (2028 Los Angeles Games) ನಡೆಯಲಿರುವ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಜಂಟಲ್‌ಮೆನ್‌ ಗೇಮ್‌ ಕ್ರಿಕೆಟ್‌ ಅಧಿಕೃತವಾಗಿ ಸೇರ್ಪಡೆಯಾಗಿದೆ. ಈ ಕುರಿತ ಪ್ರಸ್ತಾವನೆಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ. ಹೀಗಾಗಿ ಶುಕ್ರವಾರ ಒಲಿಂಪಿಕ್ಸ್‌ಗೆ ಕ್ರಿಕೆಟ್‌ ಸೇರ್ಪಡೆಯನ್ನು ಇದನ್ನು ಅಧಿಕೃತವಾಗಿ ಘೋಷಿಸಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ