logo
ಕನ್ನಡ ಸುದ್ದಿ  /  ಕ್ರೀಡೆ  /  Mysore Dasara Sports: ಮೈಸೂರು ದಸರಾ ಕ್ರೀಡಾ ಕೂಟ ಚಾಲನೆಗೆ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್, ಈ ಬಾರಿ ಯಾವೆಲ್ಲಾ ಆಟೋಟ ಉಂಟು

Mysore Dasara Sports: ಮೈಸೂರು ದಸರಾ ಕ್ರೀಡಾ ಕೂಟ ಚಾಲನೆಗೆ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್, ಈ ಬಾರಿ ಯಾವೆಲ್ಲಾ ಆಟೋಟ ಉಂಟು

Umesha Bhatta P H HT Kannada

Oct 03, 2024 02:57 PM IST

google News

ಮೈಸೂರು ದಸರಾ ಉದ್ಘಾಟನೆಗೆ ಭಾರತ ಹಾಕಿ ತಂಡದ ನಾಯಕ ಹರ್ಮನ್‌ ಪ್ರಿತ್‌ ಸಿಂಗ್‌ ಆಗಮಿಸಲಿದ್ದಾರೆ.

    • ದಸರಾ ಕ್ರೀಡಾಕೂಟದ ಉದ್ಘಾಟನೆಗೆ ಈ ಬಾರಿ 2024 ರ ಪ್ಯಾರಿಸ್ ಒಲಂಪಿಕ್ಸ್ ನ ಕಂಚಿನ ಪದಕದ ವಿಜೇತರಾದ ಭಾರತದ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಆಗಮಿಸುವುದು ವಿಶೇಷ.
ಮೈಸೂರು ದಸರಾ ಉದ್ಘಾಟನೆಗೆ ಭಾರತ ಹಾಕಿ ತಂಡದ ನಾಯಕ ಹರ್ಮನ್‌ ಪ್ರಿತ್‌ ಸಿಂಗ್‌ ಆಗಮಿಸಲಿದ್ದಾರೆ.
ಮೈಸೂರು ದಸರಾ ಉದ್ಘಾಟನೆಗೆ ಭಾರತ ಹಾಕಿ ತಂಡದ ನಾಯಕ ಹರ್ಮನ್‌ ಪ್ರಿತ್‌ ಸಿಂಗ್‌ ಆಗಮಿಸಲಿದ್ದಾರೆ.

ಮೈಸೂರು: ಮೈಸೂರು ದಸರಾ ಅಂಗವಾಗಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಈ ಬಾರಿ 2024 ರ ಪ್ಯಾರಿಸ್ ಒಲಂಪಿಕ್ಸ್ ನ ಕಂಚಿನ ಪದಕದ ವಿಜೇತರಾದ ಭಾರತದ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಚಾಲನೆ ನೀಡಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್‌ 3 ರಿಂದ 6 ರ ವರೆಗೆ ದಸರಾ ಸಿ ಎಂ ಕಪ್ ಕ್ರೀಡಾಕೂಟ ಆಯೋಜಿಸಲಾಗಿದ್ದು, ಅಕ್ಟೋಬರ್‌ 03 ರಂದು ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ .ಕರ್ನಾಟಕ ರಾಜ್ಯದ ಬೆಳಗಾಂ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕಲಬುರ್ಗಿ ಮತ್ತು ಮೈಸೂರು ವಿಭಾಗಗಳಿಂದ ಸುಮಾರು 3000 ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಹಾಗೂ 800 ತಾಂತ್ರಿಕ ಅಧಿಕಾರಿಗಳು ಮತ್ತು ಇತರೆ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ.

ಕ್ರೀಡಾಕೂಟವು ಮೂರು ಹಂತದಲ್ಲಿ ನಡೆಯಲಿದ್ದು, ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು, ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡ ದಸರಾ ಸಿ.ಎಂ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. 

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣ, ಡಿ.ದೇವರಾಜ ಅರಸು ಕುಸ್ತಿ ಅಖಾಡ, ಮೈಸೂರು ವಿವಿ ವಿವಿಧ ಕ್ರೀಡಾಂಗಣ ಸೇರಿದಂತೆ ನಗರದ ವಿವಿಧೆಡೆ ಅಥ್ಲೆಟಿಕ್ಸ್, ಬಾಸ್ಕೆಟ್‍ಬಾಲ್, ಜಿಮ್ನಾಸ್ಟಿಕ್ಸ್, ಹಾಕಿ, ಕಬಡ್ಡಿ, ಖೋ-ಖೋ, ಈಜು, ವಾಲಿಬಾಲ್, ಥ್ರೋಬಾಲ್, ಹ್ಯಾಂಡ್‍ಬಾಲ್, ಭಾರ ಎತ್ತುವುದು, ಚೆಸ್, ದೇಹದಾರ್ಢ್ಯ, ಬಾಕ್ಸಿಂಗ್ ಪಂದ್ಯಾವಳಿ ನಡೆಯಲಿವೆ. ಎನ್‍ಐಇ ಕಾಲೇಜು ಮೈದಾನದಲ್ಲಿ ಬಾಲ್ ಬ್ಯಾಡ್ಮಿಂಟನ್, ಕುಸ್ತಿ, ಟೆನಿಸ್, ಶೂಟಿಂಗ್, ಯೋಗಾ, ನೆಟ್‍ಬಾಲ್, ಆರ್ಚರಿ, ವುಶು, ಟೇಬಲ್ ಟೆನಿಸ್ ಸೇರಿದಂತೆ ಒಟ್ಟು 26 ಕ್ರೀಡೆಗಳು ನಡೆಯಲಿವೆ.

ದಸರಾ ಕ್ರೀಡಾಕೂಟದ ಅಂಗವಾಗಿ ಹಲವಾರು ಸ್ಪರ್ಧೆಗಳು ಶುಕ್ರವಾರದಿಂದ ಶುರುವಾಗಲಿವೆ. ಈಗಾಗಲೇ ಕ್ರೀಡಾಪಟುಗಳು ಮೈಸೂರಿಗೆ ಆಗಮಿಸಿದ್ದು, ವಿಭಾಗ ಮಟ್ಟದಲ್ಲಿ ಜಯಗಳಿಸಿದವರು ಭಾಗಿಯಾಗಲಿದ್ದಾರೆ.

ಈ ಬಾರಿಯೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಮೈಸೂರು, ಬೆಳಗಾವಿ ಎಂಬ 5 ವಿಭಾಗಗಳನ್ನು ರಚಿಸಲಾಗಿದೆ. ವಿಭಾಗ ಮಟ್ಟದದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾಗಲಿವೆ.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದು, ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಮಹದೇವಪ್ಪ ನವರು ಭಾಗವಹಿಸಲಿದ್ದಾರೆ. ನರಸಿಂಹರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎನ್ನುವುದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ದಸರಾ ಕ್ರೀಡಾಕೂಟ ಉಪಸಮಿತಿಯ ಕಾರ್ಯಧ್ಯಕ್ಷರಾದ ಡಾ. ಜಿತೇಂದ್ರ ಶೆಟ್ಟಿ ವಿವರಣೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಮತ್ತು ತಾಂತ್ರಿಕ ಅಧಿಕಾರಿಗಳಿಗೆ ಸಮವಸ್ತ್ರ ಹಾಗೂ ಕ್ರೀಡಾಕೂಟ ನಡೆಯುವ ಪ್ರಾರಂಭದಿಂದ ಕ್ರೀಡಾಕೂಟ ಮುಕ್ತಾಯದವರೆಗೆ ಬೆಳಗಿನ ಉಪಹಾರ ಮಧ್ಯಾಹ್ನದ ಭೋಜನ ಮತ್ತು ರಾತ್ರಿಯ ಊಟದ ವ್ಯವಸ್ಥೆಯನ್ನು ನಂಜರಾಜ ಬಹದ್ದೂರ್ ಛತ್ರದಲ್ಲಿ ಆಯೋಜಿಸುವುದರ ಜೊತೆಗೆ ವಾಸ್ತವ್ಯಕ್ಕಾಗಿ ನಗರದ ವಿವಿಧ ಹೋಟೆಲ್ ಗಳಲ್ಲಿ ವಿವಿಧ ದರ್ಜೆ ವಸತಿ ವ್ಯವಸ್ಥೆಯನ್ನು ಸುಮಾರು 4000 ಜನಕ್ಕೆ ಕಲ್ಪಿಸಲಾಗುತ್ತಿದೆ.

 

 

ಬ್ಯಾಡ್ಮಿಂಟನ್, ಟೆನಿಸ್, ಕಬಡ್ಡಿ, ಫುಟ್ಬಾಲ್, ಆರ್ಚರಿ, ಶೂಟಿಂಗ್, ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಅಥ್ಲೆಟಿಕ್ಸ್ ಸೇರಿದಂತೆ ಕ್ರೀಡಾ ಜಗತ್ತಿನ ಸಮಗ್ರ ವಿದ್ಯಮಾನಗಳನ್ನು ತಿಳಿಯಲು 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದ ಕ್ರೀಡಾ ವಿಭಾಗಕ್ಕೆ ಭೇಟಿ ನೀಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ