logo
ಕನ್ನಡ ಸುದ್ದಿ  /  ಕ್ರೀಡೆ  /  Suryakumar Yadav: ಸೂರ್ಯಕುಮಾರ್ ಯಾದವ್‌ ದಾಖಲೆ; ಈ ವರ್ಷ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್

Suryakumar Yadav: ಸೂರ್ಯಕುಮಾರ್ ಯಾದವ್‌ ದಾಖಲೆ; ಈ ವರ್ಷ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್

HT Kannada Desk HT Kannada

Sep 26, 2022 09:15 AM IST

ಸೂರ್ಯಕುಮಾರ್‌ ಯಾದವ್‌ ಬ್ಯಾಟಿಂಗ್

    • ಈ ವರ್ಷ ಸೂರ್ಯಕುಮಾರ್ ಯಾದವ್ 20 ಪಂದ್ಯಗಳಲ್ಲಿ 37.88 ಸರಾಸರಿಯಲ್ಲಿ 682 ರನ್ ಗಳಿಸಿದ್ದಾರೆ. ಅವರ ಅತ್ಯುತ್ತಮ ವೈಯಕ್ತಿಕ ಸ್ಕೋರ್ 117. 
ಸೂರ್ಯಕುಮಾರ್‌ ಯಾದವ್‌ ಬ್ಯಾಟಿಂಗ್
ಸೂರ್ಯಕುಮಾರ್‌ ಯಾದವ್‌ ಬ್ಯಾಟಿಂಗ್ (BCCI )

ಹೈದರಾಬಾದ್: ನಿನ್ನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸರಣಿ ಜಯ ಸಾಧಿಸಿದೆ. ಸೋಲಿನೊಂದಿಗೆ ಪ್ರವಾಸಿ ಆಸ್ಟ್ರೇಲಿಯಾ ತಂಡ ತವರಿಗೆ ಮರಳಿದೆ. ಗೆಲುವಿನೊಂದಿಗೆ ಭಾರತ ಹಲವು ದಾಖಲೆಗಳನ್ನು ಬರೆದಿದ್ದು, ವಿಶೇಷ ದಾಖಲೆಯೊಂದನ್ನು ಸ್ಟೈಲಿಶ್‌ ಪ್ಲೇಯರ್‌ ಸೂರ್ಯಕುಮಾರ್‌ ಯಾದವ್‌ ಬರೆದಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಮೊದಲು ರಾಯ್​ಬರೇಲಿ ಗೆಲ್ಲಿ; ತನ್ನ ನೆಚ್ಚಿನ ಚೆಸ್ ದಿಗ್ಗಜ ಆಟಗಾರನಿಂದಲೇ ಟೀಕೆಗೊಳಗಾದ ರಾಹುಲ್ ಗಾಂಧಿ

Hamida Banu: ಭಾರತದ ಮೊದಲ ಮಹಿಳಾ ವೃತ್ತಿಪರ ಕುಸ್ತಿಪಟು ಹಮೀದಾ ಬಾನು ಅವರಿಗೆ ಇಂದು ಗೂಗಲ್ ಡೂಡಲ್ ಗೌರವ, 5 ಆಸಕ್ತಿದಾಯಕ ಅಂಶಗಳು

ಕೇಳ್ರಪ್ಪೋ ಕೇಳಿ; ನೀವೂ ಬೆಂಗಳೂರು ಬುಲ್ಸ್ ತಂಡ ಸೇರಲು ಇಲ್ಲಿದೆ ಸುವರ್ಣಾವಕಾಶ, ನಿಯಮ ಮತ್ತು ಷರತ್ತುಗಳು ಅನ್ವಯ

ನಾನು ಹೇಳಿದ್ದು ತುಂಬಾ ಕಡಿಮೆ, ಆದರೂ ನಾನು ಮೌನಿಯಾಗಿದ್ದೇನೆ; ಸಾನಿಯಾ ಮಿರ್ಜಾ ಪೋಸ್ಟ್​ನ ಅರ್ಥವೇನು?

ಸೂರ್ಯಕುಮಾರ್ ಯಾದವ್, 2022ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮುತ್ತಿನ ನಗರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತದ ಸ್ಟಾರ್‌ ಆಟಗಾರ ಈ ಸಾಧನೆ ಮಾಡಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಸೂರ್ಯಕುಮಾರ್, ಕೇವಲ 36 ಎಸೆತಗಳಲ್ಲಿ 69 ರನ್‌ ಸಿಡಿಸಿದರು. ಇದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು.‌ ಮೂರನೇ ವಿಕೆಟ್‌ಗೆ ಕೊಹ್ಲಿ ಜತೆಗೂಡಿದ ಯಾದವ್‌, 104 ರನ್‌ಗಳ ಅತ್ಯಮೂಲ್ಯ ಜತೆಯಾಟ ನೀಡಿದರು. ಅವರ ಇನ್ನಿಂಗ್ಸ್‌ನಲ್ಲಿ ಐದು ಆಕರ್ಷಕ ಬೌಂಡರಿಗಳು ಮತ್ತು ಐದು ಬೃಹತ್‌ ಸಿಕ್ಸರ್ ಕೂಡಾ ಸೇರಿತ್ತು. 191.67ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್‌ ಬೀಸಿದರು.

ಈ ವರ್ಷ ಸೂರ್ಯಕುಮಾರ್ ಯಾದವ್ 20 ಪಂದ್ಯಗಳಲ್ಲಿ 37.88 ಸರಾಸರಿಯಲ್ಲಿ 682 ರನ್ ಗಳಿಸಿದ್ದಾರೆ. ಈ ವರ್ಷದ ಅವರ ಅತ್ಯುತ್ತಮ ವೈಯಕ್ತಿಕ ಸ್ಕೋರ್ 117. ಇಂಗ್ಲೆಂಡ್‌ ವಿರುದ್ಧ ಅವರು ಶತಕ ಸಿಡಿಸಿ ಮಿಂಚಿದ್ದರು. ಚೇಸಿಂಗ್‌ ವೇಳೆ ಶತಕ ಸಿಡಿಸಿದ್ದ ಸೂರ್ಯ ಗೆಲುವಿನ ಸನಿಹದಲ್ಲಿ ಔಟ್‌ ಆಗಿದ್ದರು. ಸ್ವಲ್ಪದರಲ್ಲೇ ಪಂದ್ಯವನ್ನು ಭಾರತ ಕೈಚೆಲ್ಲಿತ್ತು. ಅವರ ಬ್ಯಾಟ್‌ನಿಂದ ಈ ವರ್ಷ ಒಂದು ಶತಕ ಮತ್ತು ನಾಲ್ಕು ಅರ್ಧ ಶತಕಗಳು ಹೊರಬಂದಿವೆ. ಆಕರ್ಷಕ 182.84 ಸ್ಟ್ರೈಕ್ ರೇಟ್ ಕಾಯ್ದುಕೊಂಡಿದ್ದಾರೆ. ಈ ಮೂಲಕ ಈ ವರ್ಷ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಒಟ್ಟು 20 ಇನ್ನಿಂಗ್ಸ್‌ ಆಡಿರುವ ಅವರು 58 ಬೌಂಡರಿ ಹಾಗೂ 42 ಸಿಕ್ಸರ್‌ ಕೂಡಾ ಸಿಡಿಸಿದ್ದಾರೆ.

ನೇಪಾಳದ ದೀಪೇಂದ್ರ ಸಿಂಗ್ ಐರಿ (626), ಜೆಕ್ ಗಣರಾಜ್ಯದ ಸಬಾವೂನ್ ಡೇವಿಜಿ (612), ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ (556) ಮತ್ತು ವೆಸ್ಟ್ ಇಂಡೀಸ್ ನಾಯಕ ನಿಕೋಲಸ್ ಪೂರನ್ (553)‌ ರನ್‌ ಸಿಡಿಸಿ ನಂತರದ ಸ್ಥಾನದಲ್ಲಿದ್ದಾರೆ.

ಈ ವರ್ಷ ಸೂರ್ಯಕುಮಾರ್‌ ಯಾದವ್‌ ಬ್ಯಾಟಿಂಗ್‌ನಲ್ಲಿ ಸ್ಥಿರತೆ ಪ್ರದರ್ಶಿಸಿದ್ದಾರೆ. ಇದೇ ಕಾರಣದಿಂದ ಅವರು ಐಸಿಸಿ ಪುರುಷರ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಬ್ಯಾಟರ್‌ಗಳ ವಿಭಾಗದಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಾಮ್ ಮತ್ತು ಪಾಕಿಸ್ತಾನದ ರಿಜ್ವಾನ್ ಮೊದಲೆರಡು ಸ್ಥಾನದಲ್ಲಿದ್ದಾರೆ.

ನಿನ್ನೆ ನಡೆದ ಕೊನೆಯ ಪಂದ್ಯದಲ್ಲಿ ಭಾರತದ ಗೆಲುವಿಗೆ ಸೂರ್ಯಕುಮಾರ್‌ ಯಾದವ್‌ ಪಾತ್ರ ನಿರ್ಣಾಯಕವಾಗಿತ್ತು. ಸೂರ್ಯ 36 ಎಸೆತಗಳಲ್ಲಿ 69 ರನ್ ಸಿಡಿಸಿದರು. ಇನ್ನೊಂದೆಡೆ ವಿರಾಟ್ ಕೊಹ್ಲಿ 48 ಎಸೆತಗಳ 63 ರನ್‌ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾಲು ಪಡೆದರು. ಇವರಿಬ್ಬರು ಮೂರನೇ ವಿಕೆಟ್‌ಗೆ ಶತಕದ ಜತೆಯಾಟ ನೀಡಿದರು. ಅಂತಿಮವಾಗಿ ಆರು ವಿಕೆಟ್‌ಗಳ ಜಯದ ಮೂಲಕ ಭಾರತ 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿತು.

    ಹಂಚಿಕೊಳ್ಳಲು ಲೇಖನಗಳು