logo
ಕನ್ನಡ ಸುದ್ದಿ  /  Sports  /  Virat Kohli On Verge Of Breaking Odi World Records Of Sachin Tendulkar

Virat Kohli Record: ತೆಂಡೂಲ್ಕರ್ ನಿರ್ಮಿಸಿದ ಎರಡು ವಿಶ್ವದಾಖಲೆ ಮುರಿಯುವ ಅಂಚಿನಲ್ಲಿ ವಿರಾಟ್; ಲಂಕಾ ಸರಣಿಯಲ್ಲಿ ಸಾಧ್ಯವಾಗುತ್ತಾ?

HT Kannada Desk HT Kannada

Jan 10, 2023 12:53 PM IST

ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ

    • ಬಾಂಗ್ಲಾದೇಶ ಪ್ರವಾಸದ ವೇಳೆ ಏಕದಿನ ಶತಕದ ಬರ ನೀಗಿಸಿದ್ದ ಕೊಹ್ಲಿ, ಈಗ 50 ಓವರ್ ಮಾದರಿಯಲ್ಲಿ ಬ್ಯಾಟಿಂಗ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ಬೃಹತ್ ದಾಖಲೆಯ ಮೇಲೆ ಕಣ್ಣಿಟ್ಟಿದ್ದಾರೆ.
ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ
ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ (AP)

ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂದಿನಿಂದ ಆರಂಭವಾಗುತ್ತಿರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ತಂಡ ಸೇರಿಕೊಳ್ಳಲಿದ್ದಾರೆ. ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರು ಪಂದ್ಯಗಳ ಸರಣಿಯ ಮೊದಲನೇ ಏಕದಿನ ಪಂದ್ಯದಲ್ಲಿ ರೋಹಿತ್‌ ಶರ್ಮಾ ನಾಯಕತ್ವದ ಟೀಂ ಇಂಡಿಯಾ ದಸುನ್ ಶನಕಾ ನೇತೃತ್ವದ ಶ್ರೀಲಂಕಾವನ್ನು ಎದುರಿಸುತ್ತಿದೆ.

ಟ್ರೆಂಡಿಂಗ್​ ಸುದ್ದಿ

ದೇಶಕ್ಕಾಗಿ ಪದಕ ಗೆಲ್ಲುವುದೇ ನನ್ನ ಗುರಿ; ಅದಕ್ಕಾಗಿ ತೂಕ ಕಾಪಾಡಿಕೊಳ್ಳಬೇಕು ಎಂದ ವಿನೇಶ್ ಫೋಗಟ್

ಪ್ಯಾರಿಸ್ ಒಲಿಂಪಿಕ್ಸ್​ಗೆ ಅರ್ಹತೆ ಗಳಿಸಿದ ಭಾರತದ 7 ಷಟ್ಲರ್​​ಗಳು; ಅರ್ಹತೆ; ಕನ್ನಡತಿ ಅಶ್ವಿನಿ ಪೊನ್ನಪ್ಪ, ಪಿವಿ ಸಿಂಧುಗೆ ಅವಕಾಶ

1900 ರಿಂದ 2020ರ ತನಕ; 120 ವರ್ಷಗಳ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಗೆದ್ದಿರುವ ಪದಕಗಳೆಷ್ಟು? ವರ್ಷವಾರು ಒಂದು ನೋಟ

ಆರ್ಚರಿ ವಿಶ್ವಕಪ್ 2024: ಭಾರತಕ್ಕೆ ಹ್ಯಾಟ್ರಿಕ್ ಚಿನ್ನ, ಪುರುಷರ-ಮಹಿಳೆಯರ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಸ್ವರ್ಣ

ಭಾರತದ ಬಾಂಗ್ಲಾದೇಶ ಪ್ರವಾಸದ ಸಮಯದಲ್ಲಿ, ಬರೋಬ್ಬರಿ 1,214 ದಿನಗಳ ನಂತರ ಕೊಹ್ಲಿ ತಮ್ಮ ಏಕದಿನ ಶತಕದ ಬರವನ್ನು ನೀಗಿಸಿದ್ದರು. ಈಗ, 50 ಓವರ್ ಮಾದರಿಯಲ್ಲಿ ಬ್ಯಾಟಿಂಗ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ಬೃಹತ್ ದಾಖಲೆಯ ಮೇಲೆ ಕೊಹ್ಲಿ ಕಣ್ಣಿಟ್ಟಿದ್ದಾರೆ.

34 ವರ್ಷದ ವಿರಾಟ್‌, ಏಕದಿನ ಕ್ರಿಕೆಟ್‌ನಲ್ಲಿ ಕೊನೆಯ ಬಾರಿ ಶತಕ ಬಾರಿಸುವ ಮೂಲಕ ಕ್ರಿಕೆಟ್‌ ದಂತಕಥೆ ರಿಕಿ ಪಾಂಟಿಂಗ್‌ ಅವರ ದಾಖಲೆಯನ್ನು ಮುರಿದಿದ್ದರು. ಇದಾದ ಬಳಿಕ, ಮಂಗಳವಾರ ಏಕದಿನ ಪಂದ್ಯದಲ್ಲಿ ತೆಂಡೂಲ್ಕರ್ ಅವರ ಐತಿಹಾಸಿಕ ಸಾಧನೆಯನ್ನು ಸರಿಗಟ್ಟಲು ಕೊಹ್ಲಿ ಪ್ರಯತ್ನಿಸಬಹುದು. ಬ್ಯಾಟಿಂಗ್ ದಿಗ್ಗಜ ತೆಂಡೂಲ್ಕರ್, ತವರಿನಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು (20) ಗಳಿಸಿದ್ದಾರೆ. ಇದೇ ವೇಳೆ ಭಾರತದ ಮಾಜಿ ನಾಯಕ ಕೊಹ್ಲಿ, ಸದ್ಯ 19 ಶತಕಗಳನ್ನು ಸಿಡಿಸಿದ್ದಾರೆ. ಲಂಕಾ ವಿರುದ್ಧದ ಮೊದಲನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಮೂರಂಕಿ ಮೊತ್ತ ಗಳಿಸಿದರೆ, ಸ್ಟಾರ್ ಬ್ಯಾಟರ್ ತೆಂಡೂಲ್ಕರ್ ಅವರ ಬೃಹತ್ ಮೈಲಿಗಲ್ಲನ್ನು ಸರಿಗಟ್ಟಬಹುದು. ಅದೇ ರೀತಿ ಲಂಕಾ ವಿರುದ್ಧದ ಮುಂದಿನ ಎರಡು ಪಂದ್ಯಗಳಲ್ಲಿ ಮತ್ತೊಂದು ಶತಕ ಗಳಿಸಿದರೆ, ಸಚಿನ್‌ ವಿಶ್ವದಾಖಲೆಯನ್ನು ಕೊಹ್ಲಿ ಬ್ರೇಕ್‌ ಮಾಡಲಿದ್ದಾರೆ.

ಸಚಿನ್ ತೆಂಡೂಲ್ಕರ್, ತವರಿನಲ್ಲಿ 164 ಪಂದ್ಯಗಳಲ್ಲಿ 20 ಏಕದಿನ ಶತಕಗಳನ್ನು ಸಿಡಿಸಿದ್ದಾರೆ. ಆದರೆ, ಕೊಹ್ಲಿ ಕೇವಲ 101 ಏಕದಿನ ಪಂದ್ಯಗಳಲ್ಲಿ 19 ಶತಕಗಳನ್ನು ದಾಖಲಿಸಿದ್ದಾರೆ. ರನ್ ಮಷಿನ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 12,471 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಸಾರ್ವಕಾಲಿಕ ಗರಿಷ್ಠ ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರ 5ರೊಳಗೆ ಪ್ರವೇಶಿಸಲು ಅವರು ಇನ್ನೂ 180 ರನ್ ಗಳಿಸಬೇಕಾಗಿದೆ. ಈ ಪಟ್ಟಿಯಲ್ಲಿ ಸಚಿನ್‌ ತೆಂಡೂಲ್ಕರ್, ಕುಮಾರ ಸಂಗಕ್ಕಾರ, ರಿಕಿ ಪಾಂಟಿಂಗ್, ಸನತ್ ಜಯಸೂರ್ಯ ಮತ್ತು ಮಹೇಲಾ ಜಯವರ್ಧನೆ ಮೊದಲ ಐದು ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಕೊಹ್ಲಿ ಇದ್ದಾರೆ. ಈ ಸರಣಿಯಲ್ಲಿ ಕೊಹ್ಲಿ ಎರಡು ಶತಕ ಸಿಡಿಸಿದರೆ, ಮೇಲಿನ ಎರಡೂ ಸಾಧನೆಗಳನ್ನು ಮಾಡಿದಂತಾಗುತ್ತದೆ.

ಕುತೂಹಲಕಾರಿಯಾಗಿ, ಏಕದಿನ ಕ್ರಿಕೆಟ್‌ನಲ್ಲಿ ಶ್ರೀಲಂಕಾ ವಿರುದ್ಧ ಕೊಹ್ಲಿ ಮತ್ತು ತೆಂಡೂಲ್ಕರ್ ತಲಾ 8 ಶತಕಗಳನ್ನು ಗಳಿಸಿದ್ದಾರೆ. 50 ಓವರ್‌ಗಳ ಮಾದರಿಯಲ್ಲಿ ಶ್ರೀಲಂಕಾ ವಿರುದ್ಧ ತೆಂಡೂಲ್ಕರ್ ಮತ್ತು ಕೊಹ್ಲಿಗಿಂತ ಹೆಚ್ಚಿನ ಶತಕಗಳನ್ನು ಬೇರೆ ಯಾವ ಆಟಗಾರನೂ ಸಿಡಿಸಿಲ್ಲ. ಬ್ಯಾಟಿಂಗ್ ದಿಗ್ಗಜ ತೆಂಡೂಲ್ಕರ್ ಶ್ರೀಲಂಕಾ ವಿರುದ್ಧ 84 ಏಕದಿನ ಪಂದ್ಯಗಳಲ್ಲಿ 3,113 ರನ್ ಗಳಿಸಿದ್ದಾರೆ. ಕೊಹ್ಲಿ ಇದುವರೆಗೆ 47 ಏಕದಿನ ಪಂದ್ಯಗಳಲ್ಲಿ 1996ರ ವಿಶ್ವಕಪ್ ವಿಜೇತರ ವಿರುದ್ಧ 2,220 ರನ್ ಗಳಿಸಿದ್ದಾರೆ. ಭಾರತದ ಮಾಜಿ ನಾಯಕ ಕೊಹ್ಲಿ ಶ್ರೀಲಂಕಾ ವಿರುದ್ಧ 19 ಬಾರಿ 50ಕ್ಕೂ ಹೆಚ್ಚು ರನ್‌ ದಾಖಲಿಸಿದ್ದಾರೆ.

ಈ ಸರಣಿಯಲ್ಲಿ ಕೊಹ್ಲಿ ಶತಕ ಬಾರಿಸಿದರೆ, ಒಂದು ತಂಡದ ವಿರುದ್ಧ ಅತಿ ಹೆಚ್ಚು ಏಕದಿನ ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಕೂಡಾ ಸರಿಗಟ್ಟಲಿದ್ದಾರೆ. ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಕ್ರಮವಾಗಿ 9 ಶತಕಗಳೊಂದಿಗೆ ಕೊಹ್ಲಿ ಮತ್ತು ತೆಂಡೂಲ್ಕರ್ ಜಂಟಿಯಾಗಿ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು