logo
ಕನ್ನಡ ಸುದ್ದಿ  /  Sports  /  Wpl 2023 Full List Of Teams And Squad Rosters

WPL 2023 Squad rosters: ಚೊಚ್ಚಲ ವಿಮೆನ್ಸ್ ಪ್ರೀಮಿಯರ್ ಲೀಗ್‌ಗೆ ತಂಡಗಳು ಹೇಗಿವೆ? ಯಾವ ಟೀಮ್ ಬಲಿಷ್ಠ?‌

Jayaraj HT Kannada

Mar 03, 2023 07:43 PM IST

ವಿಮೆನ್ಸ್ ಪ್ರೀಮಿಯರ್ ಲೀಗ್‌ ತಂಡಗಳ ಐವರು ನಾಯಕಿಯರು

    • ಡಬ್ಲ್ಯೂಪಿಎಲ್‌ ಚೊಚ್ಚಲ ಆವೃತ್ತಿಯಲ್ಲಿ ಸ್ಪರ್ಧಿಸುತ್ತಿರುವ ತಂಡಗಳು ಮತ್ತು ಎಲ್ಲಾ ಆಟಗಾರ್ತಿಯರ ಪಟ್ಟಿ ಇಲ್ಲಿದೆ.
ವಿಮೆನ್ಸ್ ಪ್ರೀಮಿಯರ್ ಲೀಗ್‌ ತಂಡಗಳ ಐವರು ನಾಯಕಿಯರು
ವಿಮೆನ್ಸ್ ಪ್ರೀಮಿಯರ್ ಲೀಗ್‌ ತಂಡಗಳ ಐವರು ನಾಯಕಿಯರು (WPL twitter)

ವಿಮೆನ್ಸ್‌ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸುತ್ತಿರುವ ಬಹುತೇಕ ಆಟಗಾರ್ತಿಯರು, ಇತ್ತೀಚೆಗೆ ನಡೆದ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಿದ್ದರು. ಡಬ್ಲ್ಯೂಪಿಎಲ್‌ನಲ್ಲಿ ಭಾಗವಹಿಸುತ್ತಿರುವ ಎಲ್ಲಾ ಐದು ಫ್ರಾಂಚೈಸಿಗಳು ಲೀಗ್ ಹಂತದಲ್ಲಿ ಒಟ್ಟು ಎಂಟು ಪಂದ್ಯಗಳನ್ನು ಆಡುತ್ತವೆ. ಲೀಗ್ ಹಂತದ ನಂತರ, ಅಗ್ರ ಮೂರು ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಪಡೆಯುತ್ತವೆ. ಇದೇ ವೇಳೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡವು ನೇರವಾಗಿ ಫೈನಲ್‌ನಲ್ಲಿ ಪ್ರವೇಶಿಸುತ್ತದೆ. ಈ ನಡುವೆ, ಎರಡು ಮತ್ತು ಮೂರನೇ ಸ್ಥಾನದಲ್ಲಿರುವ ತಂಡಗಳು ಫೈನಲ್‌ನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಳು ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಟ್ರೆಂಡಿಂಗ್​ ಸುದ್ದಿ

ಆರ್ಚರಿ ವಿಶ್ವಕಪ್ 2024: ಭಾರತಕ್ಕೆ ಹ್ಯಾಟ್ರಿಕ್ ಚಿನ್ನ, ಪುರುಷರ-ಮಹಿಳೆಯರ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಸ್ವರ್ಣ

ಕ್ಯಾಂಡಿಡೇಟ್ಸ್ ಗೆದ್ದು ಭಾರತಕ್ಕೆ ಮರಳಿದ ಗುಕೇಶ್‌ಗೆ ಸಂಭ್ರಮದ ಸ್ವಾಗತ-ಸನ್ಮಾನ; ಅಮ್ಮನ ಅಪ್ಪುಗೆ, ಮಮತೆಯ ಮುತ್ತಿನ ಧಾರೆ

T20 World Cup 2024: ಟಿ20 ವಿಶ್ವಕಪ್ ಟೂರ್ನಿಗೆ ಒಲಿಂಪಿಕ್ ಲೆಜೆಂಡ್ ಉಸೇನ್ ಬೋಲ್ಟ್ ರಾಯಭಾರಿಯಾಗಿ ನೇಮಕ

ಕಿರಿಯ ವಿಶ್ವ ಚೆಸ್ ಚಾಂಪಿಯನ್ ಆಗುವುದೇ ನನ್ನ ಗುರಿ; ಕ್ಯಾಂಡಿಡೇಟ್ಸ್ ಗೆದ್ದ ಬೆನ್ನಲ್ಲೇ ಗುಕೇಶ್ ಹಳೆಯ ವಿಡಿಯೊ ವೈರಲ್

ಚೊಚ್ಚಲ ಸೀಸನ್‌ಗಾಗಿ ಕಳೆದ ತಿಂಗಳು ಮುಂಬೈನಲ್ಲಿ ಹರಾಜು ಪ್ರಕ್ರಿಯೆ ನಡೆದಿತ್ತು. ಭಾರತ ವನಿತೆಯರ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ್ತಿಯಾದ ಸ್ಮೃತಿ ಮಂಧನ ಬರೋಬ್ಬರಿ 3.4 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪಾಲಾದರು. ಆಸೀಸ್ ತಾರೆ ಆಶ್ಲೀಗ್ ಗಾರ್ಡ್ನರ್ ಅವರನ್ನು ಗುಜರಾತ್ ಜೈಂಟ್ಸ್ ಫ್ರಾಂಚೈಸಿಯು 3.2 ಕೋಟಿ ರೂಪಾಯಿಗೆ ಬಿಡ್‌ ಮಾಡಿತು. ಇಂಗ್ಲೆಂಡ್‌ನ ನಟಾಲಿ ಸಿವರ್(Natalie Sciver) ಅವರು ಮಹಿಳೆಯರ ಕ್ರಿಕೆಟ್‌ ಹಬ್ಬದಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಸೇರಿಕೊಂಡರು. 3.2 ಕೋಟಿ ರೂಪಾಯಿಗೆ ಅವರು ಅಂಬಾನಿ ಒಡೆತನದ ತಂಡ ಖರೀದಿಸಿತು. ಟಿ20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಜೆಮಿಮಾ ರೋಡ್ರಿಗಸ್ ಅವರನ್ನು 2.2 ಕೋಟಿ ಕೊಟ್ಟು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ ಸೇರಿಸಿಕೊಂಡಿತು.

ಡಬ್ಲ್ಯೂಪಿಎಲ್‌ (WPL) 2023ರಲ್ಲಿ ಭಾಗವಹಿಸುತ್ತಿರುವ ತಂಡಗಳು ಮತ್ತು ಆಟಗಾರ್ತಿಯರ ಪಟ್ಟಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB):

ಸ್ಮೃತಿ ಮಂಧನ(ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್ ಠಾಕೂರ್, ರಿಚಾ ಘೋಷ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಬನಾ, ಹೆದರ್ ನೈಟ್, ಡೇನ್ ವ್ಯಾನ್ ನೀಕರ್ಕ್, ಪ್ರೀತಿ ಬೋಸ್, ಕೋಮಲ್ ಜಂಜಾದ್, ಮೇಘನ್ ಶಟ್, ಸಹನಾ ಪವಾರ್

ದೆಹಲಿ ಕ್ಯಾಪಿಟಲ್ಸ್ (DC):

ಜೆಮಿಮಾ ರೋಡ್ರಿಗಸ್, ಮೆಗ್ ಲ್ಯಾನಿಂಗ್(ನಾಯಕಿ), ಶಫಾಲಿ ವರ್ಮಾ, ರಾಧಾ ಯಾದವ್, ಶಿಖಾ ಪಾಂಡೆ, ಮರಿಜಾನ್ನೆ ಕಪ್, ಟೈಟಾಸ್ ಸಾಧು, ಆಲಿಸ್ ಕ್ಯಾಪ್ಸೆ, ತಾರಾ ನಾರ್ರಿಸ್, ಲಾರಾ ಹ್ಯಾರಿಸ್, ಜಸಿಯಾ ಅಖ್ತರ್, ಮಿನ್ನು ಮನ್, ತಾನಿಯಾ ಭಾಟಿಯಾ, ಪೂನಮ್ ಯಾದವ್, ಜೆಸ್ ಜೊನಾಸ್, ಸ್ನೇಹಾ ದೀಪ್ತಿ, ಅರುಂಧತಿ ರೆಡ್ಡಿ, ಅಪರ್ಣಾ ಮಂಡಲ್

ಮುಂಬೈ ಇಂಡಿಯನ್ಸ್ (MI):

ಹರ್ಮನ್‌ಪ್ರೀತ್ ಕೌರ್(ನಾಯಕಿ), ನ್ಯಾಟ್ ಸಿವರ್, ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಯಾಸ್ತಿಕಾ ಭಾಟಿಯಾ, ಹೀದರ್ ಗ್ರಹಾಂ, ಇಸಾಬೆಲ್ಲೆ ವಾಂಗ್, ಅಮನ್‌ಜೋತ್ ಕೌರ್, ಧಾರಾ ಗುಜ್ಜರ್, ಸೈಕಾ ಇಶಾಕ್, ಹೇಯ್ಲಿ ಮ್ಯಾಥ್ಯೂಸ್, ಕ್ಲೋಯ್ ಟ್ರಯಾನ್, ಹುಮೈರಾ ಕಾಜಿ, ಪ್ರಿಯಾಂಕಾ ಬಾಲಾ, ಸೋನಮ್ ಯಾದವ್, ಜಿಂತಿಮಣಿ ಕಲಿತಾ, ನೀಲಂ ಬಿಷ್ಟ್

ಯುಪಿ ವಾರಿಯರ್ಜ್ (UP Warriorz):

ಸೋಫಿ ಎಕ್ಲೆಸ್ಟನ್, ದೀಪ್ತಿ ಶರ್ಮಾ, ತಹ್ಲಿಯಾ ಮೆಕ್‌ಗ್ರಾತ್, ಶಬ್ನಿಮ್ ಇಸ್ಮಾಯಿಲ್, ಅಲಿಸ್ಸಾ ಹೀಲಿ(ನಾಯಕಿ), ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್‌ವಾಡ್, ಪಾರ್ಶವಿ ಚೋಪ್ರಾ, ಶ್ವೇತಾ ಸೆಹ್ರಾವತ್, ಎಸ್ ಯಶಸ್ರಿ, ಕಿರಣ್ ನವಗಿರೆ, ಗ್ರೇಸ್ ಹ್ಯಾರಿಸ್, ದೇವಿಕಾ ವೈದ್ಯ, ಲಾರೆನ್ ಬೆಲ್, ಲಕ್ಷ್ಮಿ ಯಾದವ್, ಸಿಮ್ರಾನ್ ಶೇಖ್

ಗುಜರಾತ್ ಜೈಂಟ್ಸ್ (GG):

ಆಶ್ಲೀಗ್ ಗಾರ್ಡ್ನರ್, ಬೆತ್ ಮೂನಿ(ನಾಯಕಿ), ಸೋಫಿ ಡಂಕ್ಲಿ, ಅನ್ನಾ ಸದರ್ಲ್ಯಾಂಡ್, ಹರ್ಲೀನ್ ಡಿಯೋಲ್, ಡಿಯಾಂಡ್ರಾ ಡಾಟಿನ್, ಸ್ನೇಹಾ ರಾಣಾ, ಎಸ್ ಮೇಘನಾ, ಜಾರ್ಜಿಯಾ ವೇರ್ಹ್ಯಾಮ್, ಮಾನ್ಸಿ ಜೋಶಿ, ಡಿ ಹೇಮಲತಾ, ಮೋನಿಕಾ ಪಟೇಲ್, ತನುಜಾ ಕನ್ವರ್, ಸುಷ್ಮಾ ವರ್ಮಾ, ಹರ್ಲಿ ಗಾಲಾ, ಅಶ್ವನಿ ಕುಮಾರಿ, ಪರುಣಿಕಾ ಸಿಸೋಡಿಯಾ, ಶಬ್ನಮ್ ಶಕೀಲ್

    ಹಂಚಿಕೊಳ್ಳಲು ಲೇಖನಗಳು