logo
ಕನ್ನಡ ಸುದ್ದಿ  /  ಕ್ರೀಡೆ  /  Brij Bhushan Singh: ಸಾವಿರ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಲು ನಾನೇನು ಶಿಲಾಜಿತ್‌ ಸೇವಿಸಿದ್ದೇನೆಯೇ; ಬ್ರಿಜ್‌ ಭೂಷಣ್ ಪ್ರಶ್ನೆ

Brij Bhushan Singh: ಸಾವಿರ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಲು ನಾನೇನು ಶಿಲಾಜಿತ್‌ ಸೇವಿಸಿದ್ದೇನೆಯೇ; ಬ್ರಿಜ್‌ ಭೂಷಣ್ ಪ್ರಶ್ನೆ

HT Kannada Desk HT Kannada

May 01, 2023 04:04 PM IST

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್

    • “ಮೊದಲು ನಾನು 100 ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದೇನೆ ಎಂದು ಅವರು ಆರೋಪಿಸುತ್ತಿದ್ದರು. ಈಗ ಅವರು 1,000 ಮಕ್ಕಳಿಗೆ ಕಿರುಕುಳ ನೀಡಿರುವುದಾಗಿ ಹೇಳತೊಡಗಿದ್ದಾರೆ. ನಾನೇನು ಶಿಲಾಜಿತ್‌ನಿಂದ ಮಾಡಿದ ಚಪಾತಿ ತಿಂದಿದ್ದೇನಾ?” ಎಂದು ಬ್ರಿಜ್‌ ಭೂಷಣ್ ಹೇಳಿಕೆ ನೀಡಿದ್ದಾರೆ.
ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್
ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ (ANI )

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ (WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh), ಇದೀಗ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಬಿಜೆಪಿ ಸಂಸದರ ಮೇಲೆ ಭಾರತದ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುವ ವೇಳೆ ತಮ್ಮನ್ನು ಗುರಿಯಾಗಿಸಿಕೊಂಡವರಿಗೆ ಮಾತಿನೇಟು ನೀಡಿದ್ದಾರೆ. ಮಾತಿನ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ರಾಷ್ಟ್ರಮಟ್ಟದ ಪವರ್‌ಲಿಫ್ಟಿಂಗ್ ಚಾಂಪಿಯನ್​ಶಿಪ್​​; ಬೆಂಗಳೂರಿನ ದೇವಿಕಾ ದೇಸಾಯಿ, ದಿಶಾ ಮೋಹನ್ ಆಯ್ಕೆ

ಪ್ಯಾರಿಸ್ ಒಲಿಂಪಿಕ್ಸ್ ಜ್ಯೋತಿ ಹೊತ್ತು ತಂದ 19ನೇ ಶತಮಾನದ ಹಡಗು; ಜುಲೈ 26ರಂದು ಸೀನ್​ ನದಿಯಲ್ಲಿ ಉದ್ಘಾಟನಾ ಸಮಾರಂಭ

ಮಲೇಷ್ಯಾ ಫುಟ್ಬಾಲ್ ಆಟಗಾರ ಫೈಸಲ್ ಹಲೀಮ್ ಮೇಲೆ ಆ್ಯಸಿಡ್ ದಾಳಿ; ಮೈಮೇಲೆ ಸುಟ್ಟ ಗಾಯ, ಆರೋಪಿ ಅರೆಸ್ಟ್

ಮೊದಲು ರಾಯ್​ಬರೇಲಿ ಗೆಲ್ಲಿ; ತನ್ನ ನೆಚ್ಚಿನ ಚೆಸ್ ದಿಗ್ಗಜ ಆಟಗಾರನಿಂದಲೇ ಟೀಕೆಗೊಳಗಾದ ರಾಹುಲ್ ಗಾಂಧಿ

ಟಿವಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 1000 ಹೆಣ್ಣುಮಕ್ಕಳಿಗೆ ತಾನು ಲೈಂಗಿಕ ಕಿರುಕುಳ ನೀಡಿದ್ದೇನೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ನಾನೇನು ಶಿಲಾಜಿತ್‌ನಿಂದ ಮಾಡಿದ ಚಪಾತಿ ತಿಂದಿದ್ದೇನಾ ಎಂದು ಅವರು ಪ್ರಶ್ನಿಸಿದ್ದಾರೆ.

"ಮೊದ ಮೊದಲು ನಾನು 100 ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದೇನೆ ಎಂದು ಅವರು ಆರೋಪಿಸುತ್ತಿದ್ದರು. ಈಗ ಅವರು 1,000 ಮಕ್ಕಳಿಗೆ ಕಿರುಕುಳ ನೀಡಿರುವುದಾಗಿ ಹೇಳತೊಡಗಿದ್ದಾರೆ. ನಾನೇನು ಶಿಲಾಜಿತ್‌ನಿಂದ ಮಾಡಿದ ಚಪಾತಿ ತಿಂದಿದ್ದೇನಾ?” ಎಂದು ಸಿಂಗ್ ಅವರು ಎಬಿಪಿ ನ್ಯೂಸ್ ಚಾನೆಲ್‌ಗೆ ತಿಳಿಸಿದ್ದಾರೆ.

"ಕುಸ್ತಿಪಟುಗಳು ಜಂತರ್ ಮಂತರ್‌ಗೆ ಹೋದರೆ, ನಾನು ರಾಜೀನಾಮೆ ನೀಡುತ್ತೇನೆ" ಎಂದು ಸಿಂಗ್ ಹೇಳಿದ್ದಾರೆ. ಅಲ್ಲದೆ ಅವರು ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ.

ಬಿಜೆಪಿ ಸಂಸದರ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು, ಈ ಸಂಬಂಧ ದೆಹಲಿ ಪೊಲೀಸರು ಶುಕ್ರವಾರ ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಶುಕ್ರವಾರ ಪ್ರಕರಣ ದಾಖಲಿಸಲಾಗುವುದು ಎಂದು ದೆಹಲಿ ಪೊಲೀಸರನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ದ್ವಿಸದಸದ್ಯ ಪೀಠಕ್ಕೆ ತಿಳಿಸಿದ ಕೆಲವೇ ಗಂಟೆಗಳ ನಂತರ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಇದರಲ್ಲಿ ಮೊದಲ ಎಫ್‌ಐಆರ್ ಅಪ್ರಾಪ್ತ ಕುಸ್ತಿಪಟುವಿನ ಆರೋಪಗಳಿಗೆ ಸಂಬಂಧಿಸಿದೆ. ಈ ಪ್ರಕರಣವನ್ನು ಪೋಕ್ಸೊ ಕಾಯ್ದೆಯಡಿ ದಾಖಲಾಗಿದೆ.

ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆ ನಡೆಸಿದ ಮೇಲ್ವಿಚಾರಣಾ ಸಮಿತಿಯ ವರದಿಯನ್ನು ಸರ್ಕಾರವು ಬಹಿರಂಗಗೊಳಿಸಬೇಕೆಂದು ಒತ್ತಾಯಿಸಿ, ಹಲವಾರು ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇವರೆಲ್ಲ ಅಂತಾರಾಷ್ಟ್ರೀಯ ಸ್ಪರ್ಧೆಗಳಿಂದ ದೇಶಕ್ಕೆ ಹಲವು ಪ್ರಶಸ್ತಿಗಳನ್ನು ಗೆದ್ದುಕೊಟ್ಟ ಕುಸ್ತಿಪಟುಗಳು.

ಸಿಂಗ್ ಅವರನ್ನು ಬಂಧಿಸುವವರೆಗೂ ಪ್ರತಿಭಟನಾ ಸ್ಥಳದಿಂದ ಹೊರಬರುವುದಿಲ್ಲ ಎಂದು ಕುಸ್ತಿಪಟುಗಳು ಹಠಕ್ಕೆ ಬಿದ್ದಿದ್ದಾರೆ. ಕಳೆದ ವಾರ ಧರಣಿಯನ್ನು ಪುನರಾರಂಭಿಸಿದ್ದು, ಆರೋಪಗಳನ್ನು ತನಿಖೆ ಮಾಡಿದ ಸಮಿತಿಯ ಸಂಶೋಧನೆಗಳನ್ನು ಸಾರ್ವಜನಿಕಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಶಿಲಾಜಿತ್ ಎಂದರೇನು?

ಶಿಲಾಜಿತ್ ಎಂದರೆ, ಎತ್ತರದ ಪರ್ವತ ಶ್ರೇಣಿಗಳಿಂದ ಹೊರಸೂಸುವ ಕಡು ಕಂದು ಬಣ್ಣದ ಒಂದು ರೀತಿಯ ಜಿಗುಟಾದ ವಸ್ತು. ಸಸ್ಯಗಳ ನಿಧಾನವಾದ ವಿಘಟನೆ (decomposition of plants) ಅಥವಾ ಕೊಳೆಯುವಿಕೆಯಿಂದ ಇದು ಶತಮಾನಗಳ ಸಮಯ ತೆಗೆದುಕೊಂಡು ನಿಧಾನವಾಗಿ ಬೆಳವಣಿಗೆಯಾಗುತ್ತದೆ.

ಇದನ್ನು ಆಯುರ್ವೇದ ಔಷಧಿಯಾಗಿ ಬಳಕೆ ಮಾಡಲಾಗುತ್ತದೆ. ಸಾಮಾನ್ಯವಾಗಿ ಇದು ಹಿಮಾಲಯ, ಅಫ್ಘಾನಿಸ್ತಾನದ ಬಡಾಕ್ಷನ್, ಕರಕೋರಂ, ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನ್, ನೇಪಾಳ, ಭೂತಾನ್, ರಷ್ಯಾ, ಮಧ್ಯ ಏಷ್ಯಾ, ಇರಾನ್, ಮಂಗೋಲಿಯಾ ಪೆರು ಭಾಗಗಳಲ್ಲಿ ಕಂಡುಬರುತ್ತದೆ. ಇದರಲ್ಲಿ ಖನಿಜ ಲವಣಗಳು, ಅಮೈನೋ ಆಮ್ಲ ಸೇರಿದಂತೆ ವಿವಿಧ ಪೋಷಕಾಂಶಗಳಲ್ಲಿ ಹೇರಳವಾಗಿದೆ. ಆಯುರ್ವೇದ ಔಷಧದಲ್ಲಿ ಸಾಮಾನ್ಯವಾದ ಪೂರಕ ಅಂಶವಾಗಿದೆ. ಇದು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಅಲ್ಲದೆ ಕೆಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ಕೆಲವು ಸಂಶೋಧನೆಗಳು ಹೇಳಿವೆ.

    ಹಂಚಿಕೊಳ್ಳಲು ಲೇಖನಗಳು