ಪತ್ರಕರ್ತರ ಪ್ರಶ್ನೆಗೆ ಸಿಟ್ಟಿಗೆದ್ದು ಟೇಬಲ್ ಕುಟ್ಟಿ ಮಾತಾಡಿದ ಸಿಎಂ ಸಿದ್ದರಾಮಯ್ಯ, ವಿಡಿಯೋ
Nov 22, 2024 06:53 PM IST
- ರೈತರಿಗೆ ಶೇ 4.5 ಬಡ್ಡಿದರದಲ್ಲಿ ನಬಾರ್ಡ್ ರಾಜ್ಯದ ರೈತರಿಗೆ ಸಾಲ ಕೊಡುತ್ತದೆ. ಈ ಬಡ್ಡಿಯನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಆದರೆ ಈಗ ನಬಾರ್ಡ್ ಸಾಲದ ಪ್ರಮಾಣ ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕ್ಗಳ ಬಳಿ ಸಾಲಕ್ಕೆ ಹೋಗಿ ಶೇ 10 ರಷ್ಟು ಬಡ್ಡಿ ಕಟ್ಟಬೇಕು. ಇದು ರಾಜ್ಯಕ್ಕೆ ಆಗುವ ನಷ್ಟ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವೇ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿದೆ. ಈಗ ಅವರೇ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರಲ್ಲಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಆಕ್ರೋಶಗೊಂಡ ಸಿಎಂ, ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿ ಅವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ ಸುಳ್ಳೇ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.