logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ದೀಪದಿಂದ ದೀಪವ ಹಚ್ಚಬೇಕು ಮಾನವ; ದೇಶಾದ್ಯಂತ ಬೆಳಕಿನ ಹಬ್ಬದ ಸಂಭ್ರಮ, ದೀಪಾವಳಿ ಶುಭಾಶಯ ವಿನಿಮಯ

ದೀಪದಿಂದ ದೀಪವ ಹಚ್ಚಬೇಕು ಮಾನವ; ದೇಶಾದ್ಯಂತ ಬೆಳಕಿನ ಹಬ್ಬದ ಸಂಭ್ರಮ, ದೀಪಾವಳಿ ಶುಭಾಶಯ ವಿನಿಮಯ

Oct 31, 2024 09:27 PM IST

ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಜನರು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ವಿದೇಶದಲ್ಲಿ ನೆಲೆಸಿರುವ ಭಾರತೀಯಯರು ಕೂಡಾ ಒಂದೆಡೆ ಸೇರಿ ಪಟಾಕಿ ಹಚ್ಚಿ ಸಂಭ್ರಮಿಸುತ್ತಿದ್ದಾರೆ. ಮನೆ ಮುಂದೆ ದೀಪಗಳನ್ನು ಬೆಳಗಿಸಲಾಗಿದೆ. ಕೆಲವೆಡೆ ಈ ಹಬ್ಬವನ್ನು 5 ದಿನಗಳ ಕಾಲ ಆಚರಿಸಲಾಗುತ್ತದೆ. ಅಮಾವಾಸ್ಯೆ ದಿನ ಲಕ್ಷ್ಮೀ ಪೂಜೆ ಮಾಡಲಾಗುತ್ತದೆ. ಮಕ್ಕಳು ದೊಡ್ಡವರೆನ್ನದೆ ಬಣ್ಣ ಬಣ್ಣದ , ಬೆಳಕು ಹರಡುವ ಪಟಾಕಿಗಳನ್ನು ಹಚ್ಚಿ ಸಂಭ್ರಮಿಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ವಸ್ತುಗಳ ಬೆಲೆ ಗಗನಕ್ಕೆ ಏರಿದ್ದರೂ ಅದನ್ನು ಲೆಕ್ಕಿಸದೆ ಜನರು ಶಾಪಿಂಗ್‌ನಲ್ಲಿ ತೊಡಗಿದ್ದಾರೆ. ಒಬ್ಬರಿಗೊಬ್ಬರು ದೀಪಾವಳಿ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಹತ್ತಿರದಲ್ಲಿರುವವರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ದೀಪಾವಳಿ ಎಲ್ಲರ ಬಾಳಲ್ಲಿ ಬೆಳಕಾಗಲಿ ಎನ್ನುವುದೇ ನಮ್ಮ ಹಾರೈಕೆ