logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Araga Jnanendra: ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ

Araga Jnanendra: ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ

Jan 17, 2023 05:49 PM IST

  • ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಲಾಧಾರಿಯಾಗಿ ಶಬರಿಮಲೆಗೆ ತೆರಳಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿದ್ದಾರೆ. ಸೋಮವಾರ ಬೆಳಗ್ಗೆ ಬೆಂಗಳೂರಿನಲ್ಲಿ ಮಾಲೆ ಧರಿಸಿದ ಅವರು ಇರುಮುಡಿ ಹೊತ್ತು ನೇರವಾಗಿ ಕೇರಳಕ್ಕೆ ತೆರಳಿದ್ದರು. "ಲಕ್ಷಾಂತರ ಹಿಂದೂಗಳ ಶ್ರದ್ಧಾ ಕೇಂದ್ರ, ಪವಿತ್ರ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡುವ ನನ್ನ ಬಹುಕಾಲದ ಸಂಕಲ್ಪ ಈಗ ಸಾಕಾರವಾಗುತ್ತಿದೆ. ನಿನ್ನೆ ನನ್ನ ಕೆಲವು ಮಿತ್ರರೊಂದಿಗೆ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಇರುಮುಡಿಯೊಂದಿಗೆ ಪ್ರಯಾಣ ಬೆಳೆಸಲಾಯಿತು" ಎಂದು ಸಚಿವರು ಟ್ವೀಟ್​ ಮಾಡಿದ್ದಾರೆ.