ಮಲ್ಲಿಕಾರ್ಜುನ್ ಖರ್ಗೆ- ಸತೀಶ್ ಜಾರಕಿಹೊಳಿ ಭೇಟಿಯಲ್ಲಿ ತಪ್ಪಿಲ್ಲ; ಜಾತಿ ಗಣತಿ ವರದಿ ಜಾರಿ ಬಗ್ಗೆ ತೀರ್ಮಾನವಾಗುತ್ತೆ VIDEO
Oct 04, 2024 10:19 PM IST
- ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ. ಇನ್ನು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡು, ಸಿದ್ದರಾಮಯ್ಯನವರ ಪರವಾಗಿ ಬ್ಯಾಟಿಂಗ್ ಮಾಡಿದ ಬಗ್ಗೆ ಕುಮಾರಸ್ವಾಮಿಯವರು ಟೀಕೆ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಜಿ.ಟಿ.ದೇವೇಗೌಡರು ಅವರು ಜೆಡೆಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾಗಿದ್ದು, ಹೇಳಿಕೆ ಸರಿಯಾಗಿಯೇ ಇರುತ್ತದೆ. ಭಾಜಪ ಮತ್ತು ಜೆಡಿಎಸ್ ನವರಿಗೆ ನಾನು ಅಧಿಕಾರದಲ್ಲಿದ್ದರೆ , ಅವರ ಪಕ್ಷಗಳು ದುರ್ಬಲವಾಗುವ ಭಯ ಅವರನ್ನು ಕಾಡುತ್ತಿದೆ ಎಂದರು