logo
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Cm Basavaraj Bommai: ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ಪರಿಹಾರ: ಸಿಎಂ ಬೊಮ್ಮಾಯಿ ಘೋಷಣೆ

CM Basavaraj Bommai: ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ಪರಿಹಾರ: ಸಿಎಂ ಬೊಮ್ಮಾಯಿ ಘೋಷಣೆ

Dec 03, 2022 02:34 PM IST

ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ 15 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಎಂ, ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. ಮೊದಲು ಕಾಡುಪಕ್ಕದಲ್ಲಿ ಚಿರತೆಗಳು ಪತ್ತೆಯಾಗುತ್ತಿದ್ದವು. ಈಗ ಬೆಂಗಳೂರಿನ ಆಸುಪಾಸಿನಲ್ಲಿ ಪತ್ತೆಯಾಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು ಪ್ರಯತ್ನ ಮಾಡಲಾಗುತ್ತಿದ್ದು ಅದಕ್ಕೆ ಬಲೆಯನ್ನೂ ಹಾಕಲಾಗಿದೆ. ಜೀವಂತವಾಗಿ ಹಿಡಿದು ಕಾಡಿಗೆ ಬಿಡಲು ಇಲಾಖೆಗೆ ಸೂಚನೆ ನೀಡಿರುವುದಾಗಿ ಸಿಎಂ ತಿಳಿಸಿದ್ದಾರೆ.