ನಟ ದರ್ಶನ್ ತೂಗುದೀಪ್‌ಗೆ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ; ಅಭಿಮಾನಿಗಳಿಗೆ ದೀಪಾವಳಿ ಡಬಲ್ ಖುಷಿ
Oct 30, 2024 01:26 PM IST
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ್‌ಗೆ ಕೊನೆಗೂ ಜಾಮೀನು ದೊರೆತಿದೆ. 131 ದಿನಗಳ ಸೆರೆವಾಸದ ನಂತರ ದರ್ಶನ್‌ಗೆ ಮಧ್ಯಂತರ ಜಾಮೀನು ದೊರೆತಿದೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಕೆಲವೊಂದು ಷರತ್ತುಗಳನ್ನು ವಿಧಿಸಿ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಮೆಚ್ಚಿನ ನಟನಿಗೆ ಜಾಮೀನು ದೊರೆತಿರುವ ಸುದ್ದಿ ಕೇಳಿ ಅಭಿಮಾನಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ದೀಪಾವಳಿಗೆ ಅಭಿಮಾನಿಗಳು ಮನೆ ಹಬ್ಬದ ಜೊತೆ ದರ್ಶನ್ ಬಿಡುಗಡೆ ಆಗುತ್ತಿರುವ ಖುಷಿಯನ್ನೂ ಸಂಭ್ರಮಿಸುತ್ತಿದ್ದಾರೆ. ಜೂನ್ 11ರಂದು ದರ್ಶನ್ ಹಾಗೂ ಸಹಚರರನ್ನು ಪೊಲೀಸರು ಬಂಧಿಸಿದ್ದರು. ಮೊದಲು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ ತೂಗುದೀಪ್ ಅವರನ್ನು ನಂತರ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್‌ಗೆ ಅನಾರೋಗ್ಯದ ಹಿನ್ನೆಲೆ ಜಾಮೀನು ನೀಡಲಾಗಿದೆ.