Aditya Hridaya Stotra: ಪರೀಕ್ಷೆ ಬಗ್ಗೆ ಭಯ ಬೇಡ; ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚ್ಚಾಗಲು ಈ ಆದಿತ್ಯ ಹೃದಯ ಸ್ತೋತ್ರ ಪಠಿಸಿ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Aditya Hridaya Stotra: ಪರೀಕ್ಷೆ ಬಗ್ಗೆ ಭಯ ಬೇಡ; ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚ್ಚಾಗಲು ಈ ಆದಿತ್ಯ ಹೃದಯ ಸ್ತೋತ್ರ ಪಠಿಸಿ

Aditya Hridaya Stotra: ಪರೀಕ್ಷೆ ಬಗ್ಗೆ ಭಯ ಬೇಡ; ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚ್ಚಾಗಲು ಈ ಆದಿತ್ಯ ಹೃದಯ ಸ್ತೋತ್ರ ಪಠಿಸಿ

Aditya Hridaya Stotra: ರವಿ ಚಂದ್ರ ಗ್ರಹಗಳು ಪ್ರತಿಯೊಬ್ಬ ವಿದ್ಯಾರ್ಥಿಗೂ ಬಹು ಮುಖ್ಯವಾಗುತ್ತದೆ. ಆದ್ದರಿಂದ ಸೂರ್ಯ ಚಂದ್ರರ ಆರಾಧನೆ ಅತಿ ಮುಖ್ಯ. ರಾಶಿಯ ಅಧಿಪತಿ, 5 ಮನೆಯ ಅಧಿಪತಿ ಉತ್ತಮ ವಿದ್ಯಾಭ್ಯಾಸಕ್ಕೆ ಕಾರಣರಾಗುತ್ತಾರೆ. ಆದಿತ್ಯ ಹೃದಯ ಸ್ತೋತ್ರ ಪಠಿಸಿದರೆ ವಿದ್ಯಾರ್ಥಿಗಳಿಗೆ ಒಳ್ಳೆಯದು.

ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚ್ಚಾಗಲು ಈ ಆದಿತ್ಯ ಹೃದಯ ಸ್ತೋತ್ರ ಪಠಿಸಿ
ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚ್ಚಾಗಲು ಈ ಆದಿತ್ಯ ಹೃದಯ ಸ್ತೋತ್ರ ಪಠಿಸಿ

Aditya Hridaya Stotra: ವಿದ್ಯೆ ಯಾರೊಬ್ಬರ ಸ್ವತ್ತಲ್ಲ. ಮನಸ್ಸಿನ ದುಗುಡವನ್ನು ಮರೆತು ಏಕಾಗ್ರತೆಯಿಂದ ಅಭ್ಯಾಸದಲ್ಲಿ ತೊಡಗಿದರೆ ವಿದ್ಯಾರ್ಥಿಗಳು ಅತ್ಯುನ್ನತ ಮಟ್ಟವನ್ನು ತಲುಪಬಹುದು.

ಸೂರ್ಯನು ಆತ್ಮಸ್ಥೈರ್ಯ ಅಥವಾ ಆತ್ಮಶಕ್ತಿಯನ್ನು ನೀಡುತ್ತಾನೆ. ಹಾಗೆಯೇ ಚಂದ್ರನು ಸ್ತಿರವಾದ ಮನಸ್ಸನ್ನು ನೀಡುತ್ತಾನೆ. ಈ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡರೆ ಪ್ರತಿಯೊಂದು ರಾಶಿಗೂ ತನ್ನದೇ ಆದ ಪರಿಹಾರಗಳು ಇರಲಿವೆ. ಪ್ರತಿಯೊಂದು ದೇವರು, ಪ್ರತಿಯೊಂದು ಗ್ರಹಗಳು ನಮಗೆ ಒಳ್ಳೆಯದನ್ನೇ ಮಾಡುತ್ತವೆ. ಆದರೆ ನಮ್ಮ ಧರ್ಮ ಕರ್ಮಗಳು ಸರಿಯಾಗಿರಬೇಕು ಎಂಬುದನ್ನು ಮನಸ್ಸಿನಲ್ಲಿಡಬೇಕು.

ಮಾತಾ ಪಿತೃ ಗುರುಭ್ಯೋ ನಮಃ ಎಂಬ ಮಾತಿದೆ. ಆದ್ದರಿಂದ ಉತ್ತಮ ಅಂಕ ಗಳಿಸಲು ತಂದೆ, ತಾಯಿ ಮತ್ತು ಗುರುಗಳ ಆಶೀರ್ವಾದ ಇರಬೇಕು. ಮುಖ್ಯವಾಗಿ ತಾಯಿಯ ಆಶೀರ್ವಾದ ಕೋಟಿ ದೇವರ ಆಶೀರ್ವಾದಕ್ಕೆ ಸಮ ಎಂದು ಹೇಳುತ್ತಾರೆ. ಆದ್ದರಿಂದ ಹೆತ್ತವರ ಆಶೀರ್ವಾದ ಸದಾ ಕಾಪಾಡುತ್ತದೆ. ಪ್ರತಿಯೊಬ್ಬರೂ ಬೆಳಗಿನ ವೇಳೆ ಅಂದರೆ ಸೂರ್ಯೋದಯದ ಸಮಯದಲ್ಲಿ ಆದಿತ್ಯ ಹೃದಯ ಸ್ತೋತ್ರ ಪಠಿಸಬೇಕು. ಇದರಿಂದ ಆತ್ಮಸ್ಥೈರ್ಯವು ಹೆಚ್ಚುತ್ತದೆ. ಒಂದುವೇಳೆ ಪಠಿಸಲು ಅಸಾಧ್ಯವಾದಲ್ಲಿ ಮತ್ತೊಬ್ಬರಿಂದ ಕೇಳಿದರೂ ಒಳಿತಾಗುತ್ತದೆ.

ಆದಿತ್ಯ ಹೃದಯ ಸ್ತೋತ್ರ

ತತೋ ಯುದ್ಧಪರಿಶ್ರಾಂತಂ ಸಮರೇ ಚಿಂತಯಾಸ್ಥಿತಮ್

ರಾವಣಂ ಚಾಗ್ರತೋ ದೃಷ್ಟ್ವಾ ಯುದ್ಧಾಯ ಸಮುಪಸ್ಥಿತಮ್

ದೈವತೈಶ್ಚ ಸಮಾಗಮ್ಯ ದ್ರಷ್ಟುಮಭ್ಯಾಗತೋ ರಣಮ್

ಉಪಾಗಮ್ಯಾ ಬ್ರವೀದ್ರಾಮಂ ಅಗಸ್ತ್ಯೋ ಭಗಮಾನ್ ಋಷಿಃ

ರಾಮ ರಾಮ ಮಹಾಬಾಹೋ ಶೃಣುಗುಹ್ಯಂ ಸನಾತನಮ್

ಯೇನಸರ್ವಾನರೀನ್ ವತ್ಸ ಸಮರೇ ವಿಜಯಿಷ್ಯಸಿ

ಆದಿತ್ಯ ಹೃದಯಂ ಪುಣ್ಯಂ ಸರ್ವಶತ್ರು ವಿನಾಶನಮ್

ಜಯಾವಹಂ ಜಪೇನ್ನಿತ್ಯಂ ಅಕ್ಷಯಂ ಪರಮಂ ಶಿವಮ್

ಸರ್ವಮಂಗಲ ಮಾಂಗಲ್ಯಂ ಸರ್ವಪಾಪ ಪ್ರಣಾಶನಮ್

ಚಿಂತಾಶೋಕ ಪ್ರಶಮನಂ ಆಯುರ್ವರ್ಧನ ಮುತ್ತಮಮ್

ರಶ್ಮಿಮಂತಂ ಸಮುದ್ಯಂತಂ ದೇವಾಸುರ ನಮಸ್ಕೃತಮ್

ಪೂಜಯಸ್ವ ವಿವಸ್ವಂತಂ ಭಾಸ್ಕರಂ ಭುವನೇಶ್ವರಮ್

ಸರ್ವದೇವಾತ್ಮಕೋ ಹ್ಯೇಷ ತೇಜಸ್ವೀ ರಶ್ಮಿಭಾವನಃ

ಏಷ ದೇವಾಸುರ ಗಣಾನ್ ಲೋಕಾನ್ ಪಾತಿ ಗಭಸ್ತಿಭಿಃ

ಏಷ ಬ್ರಹ್ಮಾ ಚ ವಿಷ್ಣುಶ್ಚ ಶಿವಃ ಸ್ಕಂಧಃ ಪ್ರಜಾಪತಿಃ

ಮಹೇಂದ್ರೋ ಧನದಃ ಕಾಲೋ ಯಮಃ ಸೋಮೋ ಹ್ಯಪಾಂಪತಿಃ

ಪಿತರೋ ವಸವಃ ಸಾಧ್ಯಾ ಹ್ಯಶ್ವಿನೌ ಮರುತೋ ಮನುಃ

ವಾಯುರ್ವಹ್ನಿಃ ಪ್ರಜಾಪ್ರಾಣ ಋತುಕರ್ತಾ ಪ್ರಭಾಕರಃ

ಆದಿತ್ಯಃ ಸವಿತಾ ಸೂರ್ಯಃ ಖಗಃ ಪೂಷಾ ಗಭಸ್ತಿಮಾನ್

ಸುವರ್ಣಸದೃಶೋ ಭಾನುಃ ಹಿರಣ್ಯರೇತಾ ದಿವಾಕರಃ

ಹರಿದಶ್ವಃ ಸಹಸ್ರಾರ್ಚಿಃ ಸಪ್ತಸಪ್ತಿರ್ಮರೀಚಿಮಾನ್

ತಿಮಿರೋನ್ಮಥನಃ ಶಂಭುಃ ತ್ವಷ್ಟಾ ಮಾರ್ತಂಡ ಅಂಶುಮಾನ್

ಹಿರಣ್ಯಗರ್ಭಃ ಶಿಶಿರಃ ತಪನೋ ಭಾಸ್ಕರೋ ರವಿಃ

ಅಗ್ನಿಗರ್ಭೋಽದಿತೇಃ ಪುತ್ರಃ ಶಂಖಃ ಶಿಶಿರನಾಶನಃ

ವ್ಯೋಮನಾಥ ಸ್ತಮೋಭೇದೀ ಋಗ್ಯಜು:ಸಾಮಪಾರಗಃ

ಘನಾವೃಷ್ಟಿರಪಾಂ ಮಿತ್ರೋ ವಿಂಧ್ಯವೀಥೀ ಪ್ಲವಂಗಮಃ

ಆತಪೀ ಮಂಡಲೀ ಮೃತ್ಯುಃ ಪಿಂಗಲಃ ಸರ್ವತಾಪನಃ

ಕವಿರ್ವಿಶ್ವೋ ಮಹಾತೇಜಾ ರಕ್ತಃ ಸರ್ವಭವೋದ್ಭವಃ

ನಕ್ಷತ್ರಗ್ರಹ ತಾರಾಣಾಂ ಅಧಿಪೋ ವಿಶ್ವಭಾವನಃ

ತೇಜಸಾಮಪಿ ತೇಜಸ್ವೀ ದ್ವಾದಶಾತ್ಮನ್ ನಮೋಸ್ತುತೇ

ನಮಃ ಪೂರ್ವಾಯ ಗಿರಯೇ ಪಶ್ಚಿಮಾಯಾದ್ರಯೇ ನಮಃ

ಜ್ಯೋತಿರ್ಗಣಾನಾಂ ಪತಯೇ ದೀನಾಧಿಪತಯೇ ನಮಃ

ಜಯಾಯ ಜಯಭದ್ರಾಯ ಹರ್ಯಶ್ವಾಯ ನಮೋ ನಮಃ

ನಮೋ ನಮಃ ಸಹಸ್ರಾಂಶೋ ಆದಿತ್ಯಾಯ ನಮೋ ನಮಃ

ನಮಃ ಉಗ್ರಾಯ ವೀರಾಯ ಸಾರಂಗಾಯ ನಮೋ ನಮಃ

ನಮಃ ಪದ್ಮಪ್ರಬೋಧಾಯ ಮಾರ್ತಾಂಡಾಯ ನಮೋ ನಮಃ

ಬ್ರಹ್ಮೇಶಾನಾಚ್ಯುತೇಶಾಯ ಸೂರ್ಯಾಯಾದಿತ್ಯ ವರ್ಚಸೇ

ಭಾಸ್ವತೇ ಸರ್ವಭಕ್ಷಾಯ ರೌದ್ರಾಯ ವಪುಷೇ ನಮಃ

ತಮೋಘ್ನಾಯ ಹಿಮಘ್ನಾಯ ಶತ್ರುಘ್ನಾಯಾ ಮಿತಾತ್ಮನೇ

ಕೃತಘ್ನಘ್ನಾಯ ದೇವಾಯ ಜ್ಯೋತಿಷಾಂ ಪತಯೇ ನಮಃ

ತಪ್ತ ಚಾಮೀಕರಾಭಾಯ ವಹ್ನಯೇ ವಿಶ್ವಕರ್ಮಣೇ

ನಮಸ್ತಮೋಽಭಿ ನಿಘ್ನಾಯ ರುಚಯೇ ಲೋಕಸಾಕ್ಷಿಣೇ

ನಾಶಯತ್ಯೇಷ ವೈ ಭೂತಂ ತದೇವ ಸೃಜತಿ ಪ್ರಭುಃ

ಪಾಯತ್ಯೇಷ ತಪತ್ಯೇಷ ವರ್ಷತ್ಯೇಷ ಗಭಸ್ತಿಭಿಃ

ಏಷ ಸುಪ್ತೇಷು ಜಾಗರ್ತಿ ಭೂತೇಷು ಪರಿನಿಷ್ಠಿತಃ |

ಏಷ ಏವಾಗ್ನಿಹೋತ್ರಂ ಚ ಫಲಂ ಚೈವಾಗ್ನಿ ಹೋತ್ರಿಣಾಮ್

ವೇದಾಶ್ಚ ಕ್ರತವಶ್ಚೈವ ಕ್ರತೂನಾಂ ಫಲಮೇವ ಚ

ಯಾನಿ ಕೃತ್ಯಾನಿ ಲೋಕೇಷು ಸರ್ವ ಏಷ ರವಿಃ ಪ್ರಭುಃ

ಏನಮಾಪತ್ಸು ಕೃಚ್ಛ್ರೇಷು ಕಾಂತಾರೇಷು ಭಯೇಷು ಚ

ಕೀರ್ತಯನ್ ಪುರುಷಃ ಕಶ್ಚಿನ್ನಾವಶೀ ದತಿ ರಾಘವ

ಪೂಜಯಸ್ವೈನ ಮೇಕಾಗ್ರೋ ದೇವದೇವಂ ಜಗತ್ಪತಿಮ್

ಏತತ್ ತ್ರಿಗುಣಿತಂ ಜಪ್ತ್ವಾ ಯುದ್ಧೇಷು ವಿಜಯಿಷ್ಯಸಿ

ಅಸ್ಮಿನ್ ಕ್ಷಣೇ ಮಹಾಬಾಹೋ ರಾವಣಂ ತ್ವಂ ವಧಿಷ್ಯಸಿ

ಏವಮುಕ್ತ್ವಾ ತದಾಗಸ್ತ್ಯೋ ಜಗಾಮ ಚ ಯಥಾಗತಮ್

ಏತಚ್ಛ್ರುತ್ವಾ ಮಹಾತೇಜಾಃ ನಷ್ಟಶೋಕೋಽಭವತ್ತದಾ

ಧಾರಯಾಮಾಸ ಸುಪ್ರೀತೋ ರಾಘವಃ ಪ್ರಯತಾತ್ಮವಾನ್

ಆದಿತ್ಯಂ ಪ್ರೇಕ್ಷ್ಯ ಜಪ್ತ್ವಾತು ಪರಂ ಹರ್ಷಮವಾಪ್ತವಾನ್

ತ್ರಿರಾಚಮ್ಯ ಶುಚಿರ್ಭೂತ್ವಾ ಧನುರಾದಾಯ ವೀರ್ಯವಾನ್

ರಾವಣಂ ಪ್ರೇಕ್ಷ್ಯ ಹೃಷ್ಟಾತ್ಮಾ ಯುದ್ಧಾಯ ಸಮುಪಾಗಮತ್

ಸರ್ವಯತ್ನೇನ ಮಹತಾ ವಧೇ ತಸ್ಯ ಧೃತೋಭವತ್

ಅಥ ರವಿರವದನ್ನಿರೀಕ್ಷ್ಯ ರಾಮಂ ಮುದಿತಮನಾಃ ಪರಮಂ ಪ್ರಹೃಷ್ಯಮಾಣಃ

ನಿಶಿಚರಪತಿಸಂಕ್ಷಯಂ ವಿದಿತ್ವಾ ಸುರಗಣ ಮಧ್ಯಗತೋ ವಚಸ್ತ್ವರೇತಿ

ಇತಿ ಶ್ರೀ ಅಗಸ್ತ್ಯ ಮಹಾಮುನಿ ವಿರಚಿತ ಶ್ರೀಮದ್ ಆದಿತ್ಯ ಹೃದಯ ಸ್ತೋತ್ರಮ್ ಸಂಪೂರ್ಣಮ್

ಶ್ರೀ ನವದುರ್ಗಾ ಸ್ತೋತ್ರವನ್ನು ಹೇಳಿಕೊಳ್ಳುವುದರಿಂದ ಅಥವ ಕೇಳುವುದರಿಂದ ಮಾನಸಿಕ ಶಕ್ತಿ ಮತ್ತು ನೆನೆಪಿನ ಶಕ್ತಿ ಹೆಚ್ಚುತ್ತದೆ.

ವಂದೇ ವಾಂಛಿತಲಾಭಾಯ ಚಂದ್ರಾರ್ಧಕೃತಶೇಖರಾಂ

ವೃಷಾರೂಢಾಂ ಶೂಲಧರಾಂ ಶೈಲಪುತ್ರೀಂ ಯಶಸ್ವಿನೀಂ

ದಧಾನಾ ಕರಪದ್ಮಾಭ್ಯಾಂ ಅಕ್ಷಮಾಲಾ ಕಮಂಡಲೂ

ದೇವೀ ಪ್ರಸೀದತು ಮಯಿ ಬ್ರಹ್ಮಚಾರಿಣ್ಯನುತ್ತಮಾ

ಪಿಂಡಜಪ್ರವರಾರೂಢಾ ಚಂಡಕೋಪಾಸ್ತ್ರಕೈರ್ಯುತಾ

ಪ್ರಸಾದಂ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರುತಾ

ಸುರಾಸಂಪೂರ್ಣಕಲಶಂ ರುಧಿರಾಪ್ಲುತಮೇವ ಚ

ದಧಾನಾ ಹಸ್ತಪದ್ಮಾಭ್ಯಾಂ ಕೂಷ್ಮಾಂಡಾ ಶುಭದಾಸ್ತು ಮೇ

ಸಿಂಹಾಸನಗತಾ ನಿತ್ಯಂ ಪದ್ಮಾಶ್ರಿತಕರದ್ವಯಾ

ಶುಭದಾಸ್ತು ಸದಾ ದೇವೀ ಸ್ಕಂದಮಾತಾ ಯಶಸ್ವಿನೀ

ಚಂದ್ರಹಾಸೋಜ್ಜ್ವಲಕರಾ ಶಾರ್ದೂಲವರವಾಹನಾ

ಕಾತ್ಯಾಯನೀ ಶುಭಂ ದದ್ಯಾದ್ದೇವೀ ದಾನವಘಾತಿನೀ

ಏಕವೇಣೀ ಜಪಾಕರ್ಣಪೂರ ನಗ್ನಾ ಖರಾಸ್ಥಿತಾ|

ಲಂಬೋಷ್ಠೀ ಕರ್ಣಿಕಾಕರ್ಣೀ ತೈಲಾಭ್ಯಕ್ತಶರೀರಿಣೀ

ವಾಮಪಾದೋಲ್ಲಸಲ್ಲೋಹಲತಾಕಂಟಕಭೂಷಣಾ |

ವರ್ಧನಮೂರ್ಧ್ವಜಾ ಕೃಷ್ಣಾ ಕಾಳರಾತ್ರಿರ್ಭಯಂಕರೀ

ಶ್ವೇತೇ ವೃಷೇ ಸಮಾರೂಢಾ ಶ್ವೇತಾಂಬರಧರಾ ಶುಚಿಃ

ಮಹಾಗೌರೀ ಶುಭಂ ದದ್ಯಾನ್ಮಹಾದೇವಪ್ರಮೋದದಾ

ಸಿದ್ಧಗಂಧರ್ವಯಕ್ಷಾದ್ಯೈರಸುರೈರಮರೈರಪಿ

ಸೇವ್ಯಮಾನಾ ಸದಾ ಭೂಯಾತ್ಸಿದ್ಧಿದಾ ಸಿದ್ಧಿದಾಯಿನೀ|

ಈ ಕೆಳಕಂಡ ಸ್ತೋತ್ರವನ್ನು ಪಠಿಸಿದರೆ ಅಥವ ಕೇಳಿದಲ್ಲಿ ಕಷ್ಟವೆನಿಸುವ ವಿಷಯಗಳು ಸುಲಭವಾಗಿ ಅರ್ಥವಾಗುತ್ತವೆ.

ಅಜ್ಞಾನತಿಮಿರಾಂಧಸ್ಯ ಜ್ಞಾನಾಂಜನಶಲಾಕಯಾ

ಚಕ್ಷುರುನ್ಮೀಲಿತಂ ಯೇನ ತಸ್ಮೈ ಶ್ರೀಗುರವೇ ನಮಃ

ಗುರುರ್ಬ್ರಹ್ಮಾ ಗುರುರ್ವಿಷ್ಣುಃ ಗುರುರ್ದೇವೋ ಮಹೇಶ್ವರಃ

ಗುರುರೇವ ಪರಂಬ್ರಹ್ಮ ತಸ್ಮೈ ಶ್ರೀಗುರವೇ ನಮಃ

ಚೈತನ್ಯಃ ಶಾಶ್ವತಃಶಾಂತೋ ವ್ಯೋಮಾತೀತೋ ನಿರಂಜನಃ

ಬಿಂದುನಾದ ಕಲಾತೀತಃ ತಸ್ಮೈ ಶ್ರೀಗುರವೇ ನಮಃ

ಜ್ಞಾನಶಕ್ತಿಸಮಾರೂಢಃ ತತ್ತ್ವಮಾಲಾವಿಭೂಷಿತಃ

ಭುಕ್ತಿಮುಕ್ತಿಪ್ರದಾತಾ ಚ ತಸ್ಮೈ ಶ್ರೀಗುರವೇ ನಮಃ

ನ ಗುರೋರಧಿಕಂ ತತ್ತ್ವಂ ನ ಗುರೋರಧಿಕಂ ತಪಃ

ತತ್ತ್ವಜ್ಞಾನಾತ್ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.