ಏಪ್ರಿಲ್ 2025 ಮಾಸ ಭವಿಷ್ಯ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ತಿಂಗಳ ಭವಿಷ್ಯ; ಅದೃಷ್ಟ ಸಂಖ್ಯೆ, ದಿಕ್ಕು, ಬಣ್ಣದ ವಿವರವೂ ಇಲ್ಲಿದೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಏಪ್ರಿಲ್ 2025 ಮಾಸ ಭವಿಷ್ಯ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ತಿಂಗಳ ಭವಿಷ್ಯ; ಅದೃಷ್ಟ ಸಂಖ್ಯೆ, ದಿಕ್ಕು, ಬಣ್ಣದ ವಿವರವೂ ಇಲ್ಲಿದೆ

ಏಪ್ರಿಲ್ 2025 ಮಾಸ ಭವಿಷ್ಯ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ತಿಂಗಳ ಭವಿಷ್ಯ; ಅದೃಷ್ಟ ಸಂಖ್ಯೆ, ದಿಕ್ಕು, ಬಣ್ಣದ ವಿವರವೂ ಇಲ್ಲಿದೆ

ಏಪ್ರಿಲ್ 2025 ಮಾಸ ಭವಿಷ್ಯ (April 2025 monthly Horoscope): ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಏಪ್ರಿಲ್‌ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.

ಏಪ್ರಿಲ್ 2025 ಮಾಸ ಭವಿಷ್ಯ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ತಿಂಗಳ ಭವಿಷ್ಯ
ಏಪ್ರಿಲ್ 2025 ಮಾಸ ಭವಿಷ್ಯ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ತಿಂಗಳ ಭವಿಷ್ಯ

ಏಪ್ರಿಲ್ 2025 ಮಾಸ ಭವಿಷ್ಯ (April 2025 monthly Horoscope): ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಏಪ್ರಿಲ್‌ ತಿಂಗಳು ಹೇಗಿರಲಿದೆ? ಭವಿಷ್ಯ ಶುಭಧಾಯಕವಾಗಿದೆಯೇ ಎಂಬ ಪ್ರಶ್ನೆ ಇರಬಹುದು. 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಏಪ್ರಿಲ್‌ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.

ಸಿಂಹ ರಾಶಿ- ಏಪ್ರಿಲ್‌ ಮಾಸ ಭವಿಷ್ಯ

ದೈಹಿಕವಾಗಿ ದುರ್ಬಲರಾದರು ಮಾನಸಿಕ ಶಕ್ತಿ ಹೆಚ್ಚಿನದಾಗಿರುತ್ತದೆ. ಆಪತ್ತಿನಲ್ಲಿ ಇರುವವರಿಗೆ ಉತ್ತಮ ಸಲಹೆಗಳನ್ನು ನೀಡುವಿರಿ. ಅಧಿಕಾರಿಗಳು ನಿಷ್ಟುರದಿಂದ ನಡೆದುಕೊಂಡರು, ನೌಕರರ ಜೊತೆ ಉತ್ತಮ ಒಡನಾಟವಿರುತ್ತದೆ. ಸ್ವಂತ ಪ್ರಯತ್ನದಿಂದ ನಿಮ್ಮ ಜೀವನವನ್ನು ರೂಪಿಸಿಕೊಳ್ಳುವಿರಿ. ಹೆಚ್ಚಿನ ಪ್ರಯತ್ನದಿಂದ ಹಣಕಾಸಿನ ಪರಿಸ್ಥಿತಿಯನ್ನು ಉತ್ತಮಗೊಳಿಸುವಿರಿ. ಕೌಟುಂಬಿಕ ವಿಚಾರಗಳಲ್ಲಿ ಮೂರನೇಯವರ ಹಸ್ತಕ್ಷೇಪ ಉಂಟಾಗುತ್ತದೆ. ಇದರಿಂದಾಗಿ ಸಹನೆಯನ್ನು ಕಳೆದುಕೊಳ್ಳುವಿರಿ. ಗುರು ಹಿರಿಯರ ಭೇಟಿಯಿಂದ ಜೀವನದ ಸಮಸ್ಯೆಗೊಂದು ಪರಿಹಾರಗೊಳ್ಳುತ್ತದೆ. ನವಜಾತ ಶಿಶುಗಳ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಕ್ರಮೇಣವಾಗಿ ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸುವಿರಿ. ಬಾಳ ಸಂಗಾತಿಗೆ ತಲೆ ನೋವಿನಂತಹ ಭಾದೆಯು ಸದಾ ಇರುತ್ತದೆ. ನಿಮ್ಮ ಪ್ರಭಾವಿ ವಲಯದಲ್ಲಿ ಹೊಸಬರ ಆಗಮನವಾಗುತ್ತದೆ. ಸಿಡುಕಿನ ಬುದ್ಧಿಯನ್ನು ಬಿಟ್ಟರೆ ಒಳ್ಳೆಯದಾಗುತ್ತದೆ.

ಪರಿಹಾರ: ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಆಕಾಶ ನೀಲಿ ಬಣ್ಣ

ಕನ್ಯಾ ರಾಶಿ- ಏಪ್ರಿಲ್‌ ಮಾಸ ಭವಿಷ್ಯ

ನಿಮ್ಮ ಪ್ರಯತ್ನಗಳಿಗೆ ಮಿಶ್ರ ರೀತಿಯ ಪ್ರತಿಕ್ರಿಯೆಗಳು ದೊರೆಯುತ್ತವೆ. ಯಾವುದೇ ವಿಚಾರವಾದರೂ ಮಾತಿನ ಬಲದಿಂದ ಗೆಲ್ಲಬಲ್ಲಿರಿ. ತಪ್ಪು ಮಾಡಿದವರನ್ನು ಶಿಕ್ಷಿಸದೆ ಅವರಿಂದ ದೂರ ಉಳಿಯುವಿರಿ. ದಾಂಪತ್ಯ ಜೀವನದಲ್ಲಿ ಬೇಸರದ ಸನ್ನಿವೇಶ ಎದುರಾಗಲಿದೆ. ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ವಿದ್ಯಾರ್ಥಿಗಳು ಸಮಾಧಾನಕರ ಫಲಿತಾಂಶಗಳನ್ನು ಪಡೆಯುತ್ತಾರೆ. ಉನ್ನತ ಶಿಕ್ಷಣದಲ್ಲಿ ಯಾವುದೇ ತೊಂದರೆ ಕಾಣದು. ಉದ್ಯೋಗದಲ್ಲಿ ಎದುರಾಗುವ ವಿವಾದಗಳನ್ನು ಮಾತುಕತೆಯಿಂದ ಪರಿಹರಿಸುವಿರಿ. ಹಣಕಾಸನ್ನು ಉಳಿಸುವ ನಿಟ್ಟಿನಲ್ಲಿ ಯಶಸ್ವಿಯಾಗುವಿರಿ. ಕುಟುಂಬದ ಆಸ್ತಿಯನ್ನುಕಾಪಾಡುವ ಹೊಣೆ ನಿಮ್ಮದಾಗುತ್ತದೆ. ಆತ್ಮೀಯರಿಂದ ನಿಮ್ಮ ವ್ಯಾಪಾರ ವ್ಯವಹಾರಗಳಲ್ಲಿ ಸಹಕಾರ ದೊರೆಯುತ್ತದೆ. ಶ್ವಾಸಕೋಶದ ತೊಂದರೆ ಇದ್ದವರು ಎಚ್ಚರಿಕೆಯಿಂದ ಇರಬೇಕು. ಪುರುಷರಿಗಿಂತ ಸ್ತ್ರೀಯರಿಗೆ ಉತ್ತಮ ಫಲಿತಾಂಶಗಳು ದೊರೆಯುತ್ತವೆ. ಅನಿವಾರ್ಯವಾಗಿ ದೂರದ ಸ್ಥಳಕ್ಕೆ ಪ್ರಯಾಣ ಬೆಳೆಸಬೇಕಾಗುತ್ತದೆ. ಬಂಧು-ಬಳಗದವರ ಕಾರಣ ಶಾಂತಿ ನೆಮ್ಮದಿ ಇರುವುದಿಲ್ಲ

ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ತುಲಾ ರಾಶಿ- ಏಪ್ರಿಲ್‌ ಮಾಸ ಭವಿಷ್ಯ

ನಿಮ್ಮ ಮನಸ್ಸಿಗೆ ಹಿತವೆನಿಸುವ ರೀತಿಯಲ್ಲಿ ದಿನಗಳು ಸಾಗಲಿವೆ. ಮನಸ್ಸಿಲ್ಲದೆ ಹೋದರು ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ. ಉದ್ಯೋಗದಲ್ಲಿ ನಿರಂತರ ಬದಲಾವಣೆಗಳು ಉಂಟಾಗುವ ಕಾರಣ ಯಾವುದೇ ಯಶಸ್ಸು ದೊರೆಯುವುದಿಲ್ಲ. ಮಾಡಿದ ಕೆಲಸ ಕಾರ್ಯಗಳನ್ನು ಪದೇಪದೇ ಪುನರಾವರ್ತಿಸುವಿರಿ. ಯಾವುದೇ ತಪ್ಪು ನಡೆಯದಂತೆ ಎಚ್ಚರಿಕೆಯಿಂದ ಮುನ್ನಡೆಯುವಿರಿ. ನೇರ ನಿಷ್ಠುರದ ನಡವಳಿಕೆ ನಿಮ್ಮದಾಗಿರುತ್ತದೆ. ಇದರಿಂದಾಗಿ ಸ್ನೇಹಿತರು ಸಹ ವಿರೋಧಿಗಳಂತೆ ವರ್ತಿಸುತ್ತಾರೆ. ಕುಟುಂಬದಲ್ಲಿ ನಿಮ್ಮ ಮಾತನ್ನು ಮೀರುವ ಧೈರ್ಯ ಯಾರಿಗೂ ಇರುವುದಿಲ್ಲ. ತಂದೆ ತಾಯಿಗಳ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುವಿರಿ. ಬಂಧು ಬಳಗದವರ ಮಂಗಳಕಾರ್ಯಗಳಿಗೆ ನೆರವಾಗುವಿರಿ. ನಿಮ್ಮಿಂದ ಸಹಾಯ ಪಡೆದವರು ನಿಮ್ಮಿಂದ ದೂರವಾಗುತ್ತಾರೆ. ಆತುರದ ಕಾರಣ ವೈಯಕ್ತಿಕ ಕೆಲಸ ಕಾರ್ಯಗಳು ಅಪೂರ್ಣಗೊಳ್ಳಲಿವೆ.

ಪರಿಹಾರ: ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ವೃಶ್ಚಿಕ ರಾಶಿ- ಏಪ್ರಿಲ್‌ ಮಾಸ ಭವಿಷ್ಯ

ಮಕ್ಕಳಲ್ಲಿ ಹಠದ ಗುಣವಿರುತ್ತದೆ. ಇದರಿಂದಾಗಿ ಕುಟುಂಬದಲ್ಲಿ ಶಾಂತಿ ನೆಮ್ಮದಿ ಇಲ್ಲದಾಗುತ್ತದೆ. ಮಾಡಿದ ತಪ್ಪನ್ನು ಒಪ್ಪದೆ ಹೋದರು ಮರೆಮಾಚುವಿರಿ. ಒಂದು ಸಂಸ್ಥೆಯ ಆಡಳಿತವು ನಿಮ್ಮ ಪಾಲಾಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳಿಗೆ ಸಹಾಯ ಮಾಡಬೇಕಾಗಿ ಬರುತ್ತದೆ. ಯಾವುದೇ ವಿಚಾರವಾದರೂ ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳು ಕಷ್ಟಪಟ್ಟು ಉನ್ನತ ಸಾಧನೆ ಮಾಡುತ್ತಾರೆ. ಹೊಸ ವ್ಯಾಪಾರ ವ್ಯವಹಾರಗಳಲ್ಲಿ ಹಣವನ್ನು ಹೂಡುವ ಮುನ್ನ ಕುಟುಂಬದವರಡನೆ ಚರ್ಚಿಸುವುದು ಒಳ್ಳೆಯದು. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ದಿಟ್ಟ ತೀರ್ಮಾನಗಳನ್ನು ತೆಗೆದುಕೊಳ್ಳುವಿರಿ. ಸಂಗಾತಿಯೊಂದಿಗೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ. ಕುಟುಂಬದ ಒಗ್ಗಟ್ಟನ್ನು ಕಾಪಾಡಲು ಕಷ್ಟ ಪಡುವಿರಿ. ಆರೋಗ್ಯದಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ಸತತ ಪ್ರಯತ್ನವಿದ್ದರೂ ಮಕ್ಕಳಿಗೆ ಸಂಬಂಧಿಸಿದ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ.

ಪರಿಹಾರ: ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

 

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ಪ್ರವೀಣ್ ಚಂದ್ರ ಪುತ್ತೂರು: 'ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ'ದಲ್ಲಿ ಸಹಾಯಕ ಸುದ್ದಿ ಸಂಪಾದಕ. ಒನ್‌ ಇಂಡಿಯಾ, ವಿಜಯ ಕರ್ನಾಟಕದಲ್ಲಿ ಒಟ್ಟು 16 ವರ್ಷಗಳ ಅನುಭವ. ಆನ್‌ಲೈನ್‌ ಪತ್ರಿಕೋದ್ಯಮದಲ್ಲಿ ಎತ್ತರದ ಸಾಧನೆ ಮಾಡುವ ಕನಸು. ಡಿಜಿಟಲ್‌ ಜಗತ್ತಿನಲ್ಲಿ ಹೊಸತನ್ನು ಕಲಿಯುವ ಆಸಕ್ತಿ. ಮನರಂಜನೆ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ, ವಾಣಿಜ್ಯ, ಕರ್ನಾಟಕ, ದೇಶ- ವಿದೇಶ, ಸಿನಿಮಾ, ಷೇರುಪೇಟೆ, ಜೀವನಶೈಲಿ... ಹಲವು ವಿಚಾರಗಳ ಬಗ್ಗೆ ತಳಸ್ಪರ್ಶಿಯಾಗಿ ಬರೆಯಬಲ್ಲರು. ಎಸ್‌ಇಒ ತಂತ್ರಗಳನ್ನು ಪತ್ರಿಕೋದ್ಯಮದ ಹದಕ್ಕೆ ಪಳಗಿಸುವ ಸಾಮರ್ಥ್ಯ ರೂಢಿಸಿಕೊಂಡವರು. ಇಮೇಲ್: praveen.chandra@htdigital.in

ವಿಭಾಗ

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.