ಫೆಬ್ರವರಿ 2025 ಮಾಸ ಭವಿಷ್ಯ: ಯಾರನ್ನು ಸುಲಭವಾಗಿ ನಂಬುವುದಿಲ್ಲ, ಸಾಧನೆಯತ್ತ ಸಾಗುವ ವಿದ್ಯಾರ್ಥಿಗಳು; ಧನು, ಮಕರ,ಕುಂಭ, ಮೀನ ರಾಶಿಯವರ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಫೆಬ್ರವರಿ 2025 ಮಾಸ ಭವಿಷ್ಯ: ಯಾರನ್ನು ಸುಲಭವಾಗಿ ನಂಬುವುದಿಲ್ಲ, ಸಾಧನೆಯತ್ತ ಸಾಗುವ ವಿದ್ಯಾರ್ಥಿಗಳು; ಧನು, ಮಕರ,ಕುಂಭ, ಮೀನ ರಾಶಿಯವರ ಭವಿಷ್ಯ

ಫೆಬ್ರವರಿ 2025 ಮಾಸ ಭವಿಷ್ಯ: ಯಾರನ್ನು ಸುಲಭವಾಗಿ ನಂಬುವುದಿಲ್ಲ, ಸಾಧನೆಯತ್ತ ಸಾಗುವ ವಿದ್ಯಾರ್ಥಿಗಳು; ಧನು, ಮಕರ,ಕುಂಭ, ಮೀನ ರಾಶಿಯವರ ಭವಿಷ್ಯ

ಫೆಬ್ರವರಿ 2025 ಮಾಸ ಭವಿಷ್ಯ: ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಫೆಬ್ರವರಿ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಫೆಬ್ರವರಿ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.

ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಫೆಬ್ರವರಿ ತಿಂಗಳ ಭವಿಷ್ಯ
ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಫೆಬ್ರವರಿ ತಿಂಗಳ ಭವಿಷ್ಯ

ಫೆಬ್ರವರಿ 2025 ಮಾಸ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. 2025ರ ಫೆಬ್ರವರಿಯಲ್ಲಿ ಧನು, ಮಕರ, ಕುಂಭ ಹಾಗೂ ಮೀನ ರಾಶಿಗಳ ಮಾಸ ಭವಿಷ್ಯ ಇಲ್ಲಿದೆ.

ಧನು ರಾಶಿ

ನಿರೀಕ್ಷಿತ ಮಟ್ಟದಲ್ಲಿ ಕೆಲಸ ಕಾರ್ಯಗಳು ಸಾಗುವುದಿಲ್ಲ. ಆದಾಯ ಮತ್ತು ಖರ್ಚು ವೆಚ್ಚಗಳು ಸಮ ಪ್ರಮಾಣದಲ್ಲಿ ಇರುತ್ತವೆ. ಕುಟುಂಬ ನಿರ್ವಹಣೆಯಲ್ಲಿ ಗೃಹಿಣಿಯರ ಜವಾಬ್ದಾರಿಯು ಹೆಚ್ಚಲಿದೆ. ಕೋಪಗೊಳ್ಳದೆ ಶಾಂತಿಯಿಂದ ವರ್ತಿಸುವಿರಿ. ಕುಟುಂಬದಲ್ಲಿ ಉತ್ತಮ ಬಾಂಧವ್ಯ ಇರುತ್ತದೆ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಸೋದರೊಂದಿಗೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಉಂಟಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಗತಿಯ ಪ್ರಗತಿ ಕಂಡುಬರುತ್ತದೆ. ಚರ್ಮದೋಷ ಇದ್ದವರು ಉತ್ತಮ ಆರೋಗ್ಯ ಗಳಿಸುತ್ತಾರೆ. ಸಂಗಾತಿಯೊಂದಿಗೆ ಅನಾವಶ್ಯಕ ವಾದ ವಿವಾದವಿರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಿರಿ. ಉದ್ಯೋಗಸ್ಥರು ಉನ್ನತ ಪದವಿಗಳಿಸುತ್ತಾರೆ. ವಿದ್ಯಾರ್ಥಿಗಳು ಒತ್ತಡದ ನಡುವೆಯೂ ನಿರೀಕ್ಷಿತ ಯಶಸ್ವಿಗೆ ಪಾತ್ರರಾಗಲಿದ್ದಾರೆ.

ಮಕರ ರಾಶಿ

ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ವಹಿಸುವಿರಿ. ತಾಯಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಹಳೆಯ ಅಥವಾ ಮನೆಯನ್ನು ಅಭಿವೃದ್ಧಿಪಡಿಸುವಿರಿ. ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವ ಅವಕಾಶ ದೊರೆಯುತ್ತದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಮಕ್ಕಳಿಂದ ಸಂತೋಷದ ವರ್ತಮಾನ ಬರಲಿದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭವಿರುತ್ತದೆ. ಉದ್ಯೋಗ ಅಥವಾ ವ್ಯಾಪಾರವನ್ನು ಬದಲಿಸುವಿರಿ. ಅತಿಯಾದ ಆತ್ಮವಿಶ್ವಾಸದಿಂದ ತೊಂದರೆಗೆ ಒಳಗಾಗುವಿರಿ. ಯಾರನ್ನು ಸುಲಭವಾಗಿ ನಂಬುವುದಿಲ್ಲ. ವಿರೋಧಿಗಳು ನಿಮ್ಮ ಬುದ್ಧಿವಂತಿಕೆಗೆ ಸೋಲನ್ನು ಒಪ್ಪುತ್ತಾರೆ. ನಯವಾದ ಮಾತು ಕತೆಯಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಸೋದರಿಗೆ ವಿವಾಹ ನಿಶ್ಚಯವಾಗುತ್ತದೆ. ಬರಹಗಾರರಿಗೆ ಹೊಸ ಅವಕಾಶಗಳು ದೊರೆಯಲಿವೆ.

ಕುಂಭ ರಾಶಿ

ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭಗಳಿಸುವಿರಿ. ಹಣವನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ಮರುಕಳಿಸುತ್ತದೆ. ಸಮಾಜದಲ್ಲಿ ವಿಶೇಷ ಗೌರವ ದೊರೆಯುತ್ತದೆ. ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಬದಲಿಸುವುದಿಲ್ಲ. ಬೇರೆಯವರ ಸಲಹೆಯನ್ನು ಒಪ್ಪುವುದಿಲ್ಲ. ಸಮಾಜದಲ್ಲಿ ಪ್ರಭಾವಶಾಲಿ ವ್ಯಕ್ತಿಯಾಗಿ ಬಾಳುವಿರಿ. ಉಸಿರಾಟಕ್ಕೆ ಸಂಬಂಧಿಸಿದ ತೊಂದರೆ ಉಂಟಾಗುತ್ತದೆ. ಕುಟುಂಬದ ವಯೋವೃದ್ದರಿಗೆ ಅನಾರೋಗ್ಯವಿರುತ್ತದೆ. ವಿದ್ಯಾರ್ಥಿಗಳು ಏಕಾಂಗಿಯಾಗಿ ತಮ್ಮ ಗುರಿ ಸಾಧನೆ ಮಾಡುತ್ತಾರೆ. ಮನದ ವಿಚಾರಗಳನ್ನು ಯಾರಿಗೂ ತಿಳಿಸುವುದಿಲ್ಲ. ಸಂತಾನ ಲಾಭವಿದೆ. ಹೆಣ್ಣು ಮಕ್ಕಳಿಗೆ ತವರಿನಿಂದ ಹಣದ ಸಹಾಯ ದೊರೆಯುತ್ತದೆ. ಸೂರ್ಯನಿಗೆ ಹಣದ ಸಹಾಯ ಮಾಡುವಿರಿ. ಹೊಸ ವಾಹನವನ್ನು ಕೊಳ್ಳುವ ಯೋಜನೆ ಕಾರ್ಯಗತಗೊಳ್ಳಲಿದೆ. ಉದ್ಯೋಗದ ಕಾರಣ ಕೆಲದಿನಗಳು ಕುಟುಂಬದಿಂದ ದೂರ ಉಳಿಯುವಿರಿ.

ಮೀನ ರಾಶಿ

ವಿರೋಧಿಗಳು ಸ್ನೇಹಿತರಾಗಿ ಬದಲಾಗುತ್ತಾರೆ. ಗೃಹಿಣಿಯರಿಗೆ ಅನಾರೋಗ್ಯವು ಕಾಡುತ್ತದೆ. ಬೇಡದ ವಿಚಾರಗಳಿಗಾಗಿ ಚಿಂತೆ ಮಾಡುವಿರಿ. ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡುತ್ತಾರೆ. ಶೀತದ ತೊಂದರೆಯು ನಿಮ್ಮನ್ನು ಕಾಡಲಿದೆ. ಕಾನೂನಿನ ತೊಡಕಿನಲ್ಲಿ ಜಯವು ನಿಮ್ಮದಾಗಲಿದೆ. ಭಾವ ಮೈದುನರ ಮಧ್ಯೆ ಮನಸ್ತಾಪ ಉಂಟಾಗಲಿದೆ. ಹಣಕಾಸಿನ ವಿಚಾರದಲ್ಲಿ ಮಧ್ಯಮಗತಿಯ ಪ್ರಗತಿ ಕಾಣಲಿದೆ. ತಾಯಿಯ ಸಲುವಾಗಿ ಹೆಚ್ಚಿನ ಹಣ ಖರ್ಚಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಮಟ್ಟದ ಲಾಭ ದೊರೆಯದು. ಪಾಲುಗಾರಿಕೆಯ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ. ಮಕ್ಕಳಿಗೆ ಅನಾರೋಗ್ಯವಿರುತ್ತದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಗೃಹಿಣಿಯರು ಕೆಲಸದ ನಡುವೆ ವಿಶ್ರಾಂತಿಯನ್ನು ತೆಗೆದುಕೊಳ್ಳುವುದು ಒಳ್ಳೆಯದು.

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.