ಫೆಬ್ರವರಿ ಮಾಸ ಭವಿಷ್ಯ: ಖರ್ಚುಗಳ ನಿಯಂತ್ರಣ, ಕುಟುಂಬದಲ್ಲಿ ಸಾಮರಸ್ಯದ ಕೊರತೆ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ತಿಂಗಳ ಭವಿಷ್ಯ
ಫೆಬ್ರವರಿ 2025 ಮಾಸ ಭವಿಷ್ಯ: ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025 ರ ಫೆಬ್ರವರಿ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರಿಗೆ ಫೆಬ್ರವರಿ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.

ಫೆಬ್ರವರಿ 2025 ಮಾಸ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. 2025ರ ಫೆಬ್ರವರಿಯಲ್ಲಿ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಗಳ ಮಾಸ ಭವಿಷ್ಯ ಇಲ್ಲಿದೆ.
ಸಿಂಹ ರಾಶಿ
ನಿರೀಕ್ಷಿತ ಹಾದಿಯಲ್ಲಿ ಹಣ ಗಳಿಸುವಿರಿ. ದುಬಾರಿ ಪದಾರ್ಥಗಳನ್ನು ಕೊಳ್ಳುವಿರಿ. ಕುಟುಂಬದ ಹೆಚ್ಚಿನ ಜವಾಬ್ದಾರಿಯು ನಿಮ್ಮದಾಗುತ್ತದೆ. ವಿಶ್ರಾಂತಿ ಇಲ್ಲದ ದುಡಿಮೆಯ ಕಾರಣ ದೈಹಿಕವಾಗಿ ಬಳಲುವಿರಿ. ಮನಸ್ಸಿನ ಮೇಲೆ ಹತೋಟಿ ಸಾಧಿಸಲು ವಿಫಲರಾಗುವಿರಿ. ಖರ್ಚು ವೆಚ್ಚಗಳ ಮೇಲೆ ನಿಯಂತ್ರಣ ಸಾಧಿಸುವಲ್ಲಿ ವಿಫಲರಾಗುವಿರಿ. ಕುಟುಂಬದಲ್ಲಿ ಉತ್ತಮ ಸಾಮರಸ್ಯ ಇರುವುದಿಲ್ಲ. ನಡೆಯಬೇಕಿದ್ದ ಮಂಗಳ ಕಾರ್ಯವನ್ನು ಮುಂದೂಡುವಿರಿ. ತಂದೆಯವರಿಂದ ಹಣದ ಸಹಾಯ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಭವಿಷ್ಯದ ಜೀವನಕ್ಕಾಗಿ ಹಣವನ್ನು ಉಳಿಸುವಿರಿ. ವಿದ್ಯಾರ್ಥಿಗಳು ಕಷ್ಟದ ಪರಿಸ್ಥಿತಿಯಲ್ಲಿ ಸಿಲುಕಬಹುದು. ದುಡುಕಿನ ಮಾತಿನಿಂದ ವಿರೋಧಿಗಳು ಹೆಚ್ಚುತ್ತಾರೆ. ಕ್ರಮೇಣವಾಗಿ ಕುಟುಂಬದಲ್ಲಿ ಸಂತಸದ ವಾತಾವರಣ ನೆಲೆಸುತ್ತದೆ. ಮಕ್ಕಳೊಂದಿಗೆ ಸಂತೋಷದಿಂದ ದಿನ ಕಳೆಯುವಿರಿ.
ಕನ್ಯಾ ರಾಶಿ
ಖರ್ಚು ವೆಚ್ಚಗಳು ಅಧಿಕವಾಗಿರುತ್ತವೆ. ಬುದ್ಧಿವಂತಿಕೆಯಿಂದ ಹಣಕಾಸಿನ ಮೇಲೆ ನಿಯಂತ್ರಣ ಗಳಿಸುವಿರಿ. ವಿರೋಧಿಗಳಿಗೆ ಹಣಕಾಸಿನ ನೆರವನ್ನು ನೀಡಬೇಕಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಲಾಭವಿರುತ್ತದೆ. ದಾನ ಧರ್ಮದ ಕಾರ್ಯಗಳಲ್ಲಿ ತೊಡಗುವಿರಿ. ನೂತನ ದಂಪತಿಗೆ ವಿಶೇಷ ಲಾಭವಿರುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ವಿಶೇಷ ಸಾಧನೆ ಮಾಡುತ್ತಾರೆ. ಕುಟುಂಬದ ಹೆಣ್ಣು ಮಕ್ಕಳು ವೈಭವದ ಜೀವನ ನಡೆಸುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಲಾಭದ ಕೊರತೆ ಇದ್ದರೂ ತೊಂದರೆ ಇರುವುದಿಲ್ಲ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಕುಟುಂಬದ ಸದಸ್ಯರ ಜೊತೆಯಲ್ಲಿ ವಿದೇಶ ಪ್ರಯಾಣ ಮಾಡುವಿರಿ. ಬಹುದಿನದ ಭೂ ವಿವಾದವು ಮಾತುಕತೆಯಿಂದ ಬಗೆಹರಿಯುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದೆ.
ತುಲಾ ರಾಶಿ
ಕುಟುಂಬದ ಹಿರಿಯರ ಸಲಹೆಯಂತೆ ನಡೆದರೆ ಯಾವುದೇ ತೊಂದರೆ ಇರುವುದಿಲ್ಲ. ಸಮಾಜದಲ್ಲಿ ಗೌರವಾನ್ವಿತ ಸ್ಥಾನವನ್ನು ಅಲಂಕರಿಸುವಿರಿ. ತಾಯಿಯ ಜೊತೆ ಭಿನ್ನಾಭಿಪ್ರಾಯವಿರುತ್ತದೆ. ಭವಿಷ್ಯದ ಗುರಿಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಸ್ವಂತ ಉದ್ದಿಮೆ ಇದ್ದಲ್ಲಿ ಉನ್ನತ ಮಟ್ಟದ ಅವಕಾಶವನ್ನು ನಿಮ್ಮದಾಗಲಿದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಲು ಕಾರಣರಾಗುವಿರಿ. ಉದ್ಯೋಗಸ್ಥರಿಗೆ ಉನ್ನತ ಪದವಿ ದೊರೆಯುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಾಣುವಿರಿ. ಸಂಗಾತಿಗೆ ವಿಶೇಷವಾದ ಧನಪ್ರಾಪ್ತಿ ಯೋಗವಿದೆ. ಆತಂಕದ ಸನ್ನಿವೇಶದಲ್ಲಿ ಬುದ್ಧಿವಂತಿಕೆಯಿಂದ ವರ್ತಿಸುವಿರಿ. ವಿನಯದ ಮಾತಿನಿಂದ ಎಲ್ಲರ ಗಮನ ಸೆಳೆಯುವಿರಿ. ವಿರೋಧಿಗಳು ನಿಮ್ಮ ಪ್ರಭಾವಕ್ಕೆ ಮಣಿಯುತ್ತಾರೆ. ಆರೋಗ್ಯದ ಬಗ್ಗೆ ಗಮನವಹಿಸುವುದು ಒಳ್ಳೆಯದು. ರಹಸ್ಯವಾಗಿ ಹಣವನ್ನು ಉಳಿಸುವಲ್ಲಿ ಯಶಸ್ವಿಯಾಗುವಿರಿ.
ವೃಶ್ಚಿಕ ರಾಶಿ
ತಂದೆಯವರ ಆರೋಗ್ಯದ ಬಗ್ಗೆ ಗಮನವಿರಲಿ. ಅನಿವಾರ್ಯವಾಗಿ ನೌಕರಿಯನ್ನು ಬದಲಿಸುವಿರಿ. ಆಮದು ರಫ್ತು ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದೆ. ನಿಮ್ಮ ಮನಸ್ಸಿಗೆ ಬೇಸರವೆನಿಸುವ ಘಟನೆಯೊಂದು ನಡೆಯಲಿದೆ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ದೊರೆಯುವ ಅವಕಾಶವನ್ನು ಅನುಕೂಲಕರ ರೀತಿಯಲ್ಲಿ ಬಳಸಿಕೊಳ್ಳುವಿರಿ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ಬೇಸರಗೊಳ್ಳುವಿರಿ. ಹಣಕಾಸಿನ ಕೊರತೆ ಇರುತ್ತದೆ. ವಿಶೇಷವಾದ ಗೌರವ ದೊರೆಯುತ್ತದೆ. ಮಕ್ಕಳ ಸಲುವಾಗಿ ಹೆಚ್ಚಿನ ಖರ್ಚುವೆಚ್ಚವಿರುತ್ತದೆ. ಕುಟುಂಬದಲ್ಲಿ ಯಾವುದೇ ವಿಚಾರದಲ್ಲೂ ಒಮ್ಮತದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ಸಫಲತೆ ಕಾಣುತ್ತಾರೆ. ಆತ್ಮೀಯರ ಜೊತೆಯಲ್ಲಿ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ಲೋಹದ ವಸ್ತುಗಳಿಂದ ತೊಂದರೆಯಾಗಬಹುದು ಎಚ್ಚರಿಕೆ ಇರಲಿ.
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ