ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ 2025; ಕೊಪ್ಪಳದಲ್ಲಿ ಜಾಗೃತಿ ಜಾಥಾ ಅಂಗವಾಗಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಆಯೋಜನೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ 2025; ಕೊಪ್ಪಳದಲ್ಲಿ ಜಾಗೃತಿ ಜಾಥಾ ಅಂಗವಾಗಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಆಯೋಜನೆ

ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ 2025; ಕೊಪ್ಪಳದಲ್ಲಿ ಜಾಗೃತಿ ಜಾಥಾ ಅಂಗವಾಗಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಆಯೋಜನೆ

2025ರ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಜಾಗೃತ ಜಾಥಾವನ್ನು ಜನವರಿ 10 ರಂದು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಜನವರಿ 4 ರಂದು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ.

2025ರ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಜಾಗೃತ ಜಾಥಾವನ್ನು ಜನವರಿ 10 ರಂದು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಜನವರಿ 4 ರಂದು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ.. (ಫೋಟೊ-ಸಂಗ್ರಹ)
2025ರ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಜಾಗೃತ ಜಾಥಾವನ್ನು ಜನವರಿ 10 ರಂದು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಜನವರಿ 4 ರಂದು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ.. (ಫೋಟೊ-ಸಂಗ್ರಹ)

ಕೊಪ್ಪಳ: ಪ್ರತಿವರ್ಷ ಪುಷ್ಯ ಮಾಸದಲ್ಲಿ ನಡೆಯುವ ದಕ್ಷಿಣದ ಮಹಾ ಕುಂಭ ಅಂತಲೇ ಜನಪ್ರಿಯವಾಗಿರುವ ಕೊಪ್ಪಳದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಗವಿಮಠದಿಂದ ಸಕಲ ರೀತಿಯಲ್ಲೂ ಸಿದ್ಧತೆಗಳು ನಡೆಯುತ್ತವೆ. ಅಜ್ಜನ ಜಾತ್ರೆ, ರೊಟ್ಟಿ ಜಾತ್ರೆ ಅಂತ ಖ್ಯಾತಿ ಪಡೆದಿರುವ ಈ ಜಾತ್ರಾ ಮಹೋತ್ಸವ 2025ರ ಜನವರಿ 15 ರಂದು ನಡೆಯಲಿದೆ. ಜಾತ್ರೆಯ ನಿಮಿತ್ತ ಜಿಲ್ಲಾ ಮಟ್ಟದ ಜಾಗೃತಿ ಜಾಥಾದ ಭಾಗವಾಗಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಗವಿಮಠದ ಜಾತ್ರಾ ಮಹೋತ್ಸವವೆಂದರೆ, ಹೊಸತನದ ಆಧುನಿಕ ಸ್ಪರ್ಶತೆಯ ಸಂಗಮ. ಪ್ರತಿ ವರ್ಷ ಒಂದಲ್ಲಾ ಒಂದು ರೀತಿಯ ಜನಜೀವನದ ಪ್ರಗತಿಗೆ ಜಾಗೃತಿ ಮೂಡಿಸಲು ಅಗತ್ಯವಾದ ಉಪಯುಕ್ತ ಜನಜಾಗೃತಿ ಕಾರ್ಯಕ್ರಮವಾಗಿದೆ. ಈ ವರ್ಷವೂ ಸಹ ವಿನೂತನವಾದ ಜಾಗೃತಿ ಮೂಡಿಸಲು ಶ್ರೀಮಠವು ಹೊಸ ಸಂಕಲ್ಪದೊಂದಿಗೆ ಸಿದ್ಧವಾಗಿದೆ.

2025ರ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಗೃತಿ ವಿಷಯವಾಗಿ ‘ಸಕಲಚೇತನ’ ಎಂಬ ಶೀರ್ಷಿಕೆಯ ಅಡಿಯಲ್ಲಿ ವಿಕಲಚೇತನರ ನಡೆ ಸಕಲಚೇತನದ ಕಡೆ ಎಂಬ ಘೋಷ ವಾಕ್ಯದೊಂದಿಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. 2025ರ ಜನವರಿ 10 ರಂದು ಶನಿವಾರ ಬೆಳಗ್ಗೆ 8 ಗಂಟೆಗೆ ಕೊಪ್ಪಳದ ಬಾಲಕಿಯರ ಸರ್ಕಾರಿ ಕಾಲೇಜಿನ ಮೈದಾನ (ತಾಲೂಕು ಕ್ರೀಡಾಂಗಣ)ದಲ್ಲಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಜಾಗೃತ ಜಾಥಾ ಅಂಗವಾಗಿ ಜನವರಿ 4 ರಂದು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕೊಪ್ಪಳದ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ನಡೆಯಲಿದೆ. 

ಇದಕ್ಕೂ ಮೊದಲು ಅಂದರೆ ಜನವರಿ 3 ರಂದು ಶಾಲಾ, ಕಾಲೇಜು ಮಟ್ಟದಲ್ಲಿ ಪ್ರೌಢಶಾಲೆ, ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ‘ವಿಕಲಚೇತನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಮಾಜದ ಸ್ಪಂದನೆ’ ಎಂಬ ವಿಷಯದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಜಾಗೃತಿ ಜಾಥಾ ನಡಿಗೆಯ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಗೌರವಿಸಲಾಗುತ್ತದೆ.

ಜನವರಿ 10ರ ಜಾಗೃತಿ ಜಾಥಾವು ಅಶೋಕ ವೃತ್ತ, ಜವಾಹರ ರಸ್ತೆ, ಗಡಿಯಾರ ಕಂಬದ ಮೂಲಕ ಶ್ರೀಗವಿಮಠದ ಜಾತ್ರಾ ಮಹಾದಾಸೋಹಕ್ಕೆ ತಲುಪಿ ಸಮಾರೋಪ ಸಮಾರಂಭದೊಂದಿಗೆ ಮುಕ್ತಾಯವಾಗಲಿದೆ. ಜಾಥಾದಲ್ಲಿ ಭಕ್ತರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಾರ್ವಜನಿಕ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಆರೋಗ್ಯ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಹಾಗೂ ಸ್ಥಳೀಯ ಶಿಕ್ಷಣ ಸಂಸ್ಥೆಗಳ ಪ್ರೋತ್ಸಾಹವನ್ನು ನೀಡಿವೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ: 9742307153, 9986591076

---

ಹೊಸ ವರ್ಷ ಹೇಗಿರುತ್ತೆ? ಇಲ್ಲಿದೆ 2025 ರ ರಾಶಿವಾರು ಮಾಹಿತಿ

2025 ನಿಮಗೆ ಏನೆಲ್ಲಾ ಶುಭಫಲಗಳನ್ನು ನೀಡಲಿದೆ? ಹೊಸ ವರ್ಷದಲ್ಲಿ ಬದಲಾವಣೆಗಳು, ಉದ್ಯೋಗ ಪ್ರಗತಿ, ವಿದ್ಯಾಭ್ಯಾಸ, ಪ್ರೀತಿ, ದಾಂಪತ್ಯ ಸೇರಿದಂತೆ ನೀವು ತಿಳಿಯಬಯಸುವ ಸಮಗ್ರ ಮಾಹಿತಿ ಇಲ್ಲಿದೆ. ಪ್ರತಿ ರಾಶಿಯ ಸಮಗ್ರ ವಿವರ ಇಲ್ಲಿ ಲಭ್ಯ. ನೀವು ಈವರೆಗೆ ನೋಡಿಲ್ಲ ಅಂತಾದ್ರೆ ಬೇಗ ನೋಡಿ. ಈಗಾಗಲೇ ನೋಡಿದ್ದರೆ ನಿಮ್ಮ ಆಪ್ತರಿಗೂ ಈ ಬಗ್ಗೆ ತಿಳಿಸಿ.

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.