ಕನ್ಯಾ ರಾಶಿ ಭವಿಷ್ಯ ಜುಲೈ 23: ಕೆಲಸದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ, ಒಂಟಿ ಜನರು ಹೊಸ ಪ್ರೀತಿಗೆ ಮುನ್ನುಡಿ ಬರೆಯಲಿದ್ದೀರಿ
Virgo Daily Horoscope July 23, 2024: ರಾಶಿಚಕ್ರದ ಆರನೇ ಚಿಹ್ನೆ ಕನ್ಯಾ. ಜನನದ ಸಮಯದಲ್ಲಿ ಚಂದ್ರನು ಕನ್ಯಾರಾಶಿಯಲ್ಲಿ ಸಾಗುತ್ತಿರುವ ಜನರು ಕನ್ಯಾರಾಶಿಯವರು. ಜುಲೈ 20 ರ ಕನ್ಯಾ ರಾಶಿ ಭವಿಷ್ಯ ಪ್ರಕಾರ, ಇಂದು ನಿಮ್ಮ ಪ್ರತಿಭೆ ಏನೆಂಬುದನ್ನು ಸಾಬೀತುಪಡಿಸಲು ಉತ್ತಮ ದಿನವಾಗಿದೆ. ಹೂಡಿಕೆ ಮಾಡುವ ಮುನ್ನ ನೂರು ಬಾರಿ ಯೋಚಿಸುವುದು ಒಳ್ಳೆಯದು.
ಕನ್ಯಾ ರಾಶಿ ಭವಿಷ್ಯ 23 ಜುಲೈ 2024: ಕನ್ಯಾ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಇಂದು ನಿಮ್ಮ ಶಕ್ತಿಯು ಸ್ಪಷ್ಟತೆ ಮತ್ತು ಬೆಳವಣಿಗೆಯನ್ನು ತರುತ್ತದೆ. ನಿಮ್ಮ ಸಂಬಂಧಗಳು ಮುಕ್ತ ಸಂವಹನದಿಂದ ಪ್ರಯೋಜನ ಪಡೆಯುತ್ತವೆ, ಆದರೆ ನಿಮ್ಮ ವೃತ್ತಿ ಮತ್ತು ಆರ್ಥಿಕ ಭವಿಷ್ಯವು ಧನಾತ್ಮಕವಾಗಿ ಕಾಣುತ್ತದೆ. ಎಲ್ಲಾ ರಾಶಿಗಳ ದಿನ ಭವಿಷ್ಯ ಹಿಂದೂಸ್ತಾನ್ ಟೈಮ್ಸ್ ಕನ್ನಡ ಜಾಲತಾಣದಲ್ಲಿದೆ. ನೀವು ಅದನ್ನೂ ಓದಬಹುದು.
ಕನ್ಯಾ ರಾಶಿ ಪ್ರೇಮ ಜಾತಕ (Virgo Love Horoscope)
ಇಂದು ಕನ್ಯಾ ರಾಶಿಯವರಿಗೆ ತಮ್ಮ ಸಂಬಂಧಗಳ ಮೇಲೆ ಕೇಂದ್ರೀಕರಿಸಲು ಉತ್ತಮ ದಿನವಾಗಿದೆ. ಮುಕ್ತವಾಗಿ ಮಾತನಾಡುವುದು ನಿಮ್ಮ ಸಂಬಂಧವನ್ನು ಗಟ್ಟಿ ಮಾಡುತ್ತದೆ. ನಿಮ್ಮ ಭಾವನೆಗಳು ಮತ್ತು ಅಗತ್ಯಗಳ ಬಗ್ಗೆ ನಿಮ್ಮ ಸಂಗಾತಿಯೊಂದಿಗೆ ಪ್ರಾಮಾಣಿಕವಾಗಿರಿ. ಒಂಟಿ ಜನರು ಇಂದು ಹೊಸ ಪ್ರೀತಿಯನ್ನು ಪಡೆಯಲಿದ್ದೀರಿ. ಇತರರ ಮಾತನ್ನು ಕೇಳಲು ಸಮಯ ತೆಗೆದುಕೊಳ್ಳಿ, ಏಕೆಂದರೆ ಇದು ನಿಮ್ಮ ಸಂಬಂಧಗಳನ್ನು ಗಾಢವಾಗಿಸುತ್ತದೆ. ಗುಣಮಟ್ಟದ ಸಮಯವನ್ನು ಒಟ್ಟಿಗೆ ಕಳೆಯುವುದರಿಂದ ನಿಮ್ಮ ಸಂಬಂಧವನ್ನು ಬಲಪಡಿಸಬಹುದು. ಒಟ್ಟಿನಲ್ಲಿ, ನಿಮ್ಮ ಮನಸ್ಸಿನಲ್ಲಿರುವುದನ್ನು ಹೇಳಿಕೊಂಡಾಗ ಮಾತ್ರ ಪ್ರೀತಿ ಮತ್ತು ಸಂಬಂಧಗಳು ಅರಳುತ್ತವೆ.
ಕನ್ಯಾರಾಶಿ ವೃತ್ತಿ ಜಾತಕ (Virgo Professional Horoscope)
ಇಂದು ಕನ್ಯಾ ರಾಶಿಯವರಿಗೆ ವೃತ್ತಿ ಭವಿಷ್ಯವು ಉತ್ತಮವಾಗಿದೆ. ನಿಮ್ಮ ಪ್ರತಿಭೆಯನ್ನು ಹೊರ ತರಲು, ನಿಮ್ಮ ಮನಸ್ಸಿನ ಆಲೋಚನೆಗಳನ್ನು ಹೊರ ತರಲು ಇದು ಉತ್ತಮ ಸಮಯ. ನೀವು ಸಹೋದ್ಯೋಗಿಗಳು ಮತ್ತು ಹಿರಿಯರನ್ನು ಮೆಚ್ಚಿಸುವಿರಿ. ಹೊಸ ಅವಕಾಶಗಳು ನಿಮ್ಮ ದಾರಿಗೆ ಬರಲಿವೆ, ಆದ್ದರಿಂದ ನಿಮ್ಮ ಕ್ಷೇತ್ರದಲ್ಲಿ ಇತರರೊಂದಿಗೆ ಸಂಪರ್ಕ ಸಾಧಿಸಲು ಹಿಂಜರಿಯಬೇಡಿ. ಒಟ್ಟಿಗೆ ಕೆಲಸ ಮಾಡುವುದರಿಂದ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ ಎಂಬುದನ್ನು ನೆನಪಿನಲ್ಲಿಡಿ, ಆದ್ದರಿಂದ ತಂಡದ ಕೆಲಸಕ್ಕಾಗಿ ಸಿದ್ಧರಾಗಿರಿ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬಹುದು.
ಕನ್ಯಾ ರಾಶಿಯ ಆರ್ಥಿಕ ಜಾತಕ (Virgo Money Horoscope)
ಇಂದು ಕನ್ಯಾ ರಾಶಿಯವರಿಗೆ ಆರ್ಥಿಕ ಅವಕಾಶಗಳು ಬರಬಹುದು. ನಿಮ್ಮ ದೀರ್ಘಕಾಲೀನ ಗುರಿಗಳಿಗೆ ಅನುಗುಣವಾಗಿ ಹೂಡಿಕೆಗಳು ಅಥವಾ ಉಳಿತಾಯ ಯೋಜನೆಗಳ ಮೇಲೆ ಗಮನ ಹರಿಸಿ. ನಿಮ್ಮ ಬಜೆಟ್ ಪರಿಶೀಲಿಸಲು ಮತ್ತು ಅನಗತ್ಯ ವೆಚ್ಚಗಳನ್ನು ಕಡಿಮೆ ಮಾಡಲು ಇದು ಉತ್ತಮ ದಿನವಾಗಿದೆ. ನೀವು ದುಬಾರಿ ವಸ್ತುವನ್ನು ಖರೀದಿಸಬೇಕು ಎಂದುಕೊಂಡಿದ್ದರೆ, ಅಥವಾ ಹೂಡಿಕೆ ಮಾಡಬೇಕು ಎಂದುಕೊಂಡಿದ್ದರೆ, ಅದರ ಬಗ್ಗೆ ಪೂರ್ವಾಪರ ವಿಚಾರಿಸಿ ಮುಂದುವರೆಯಿರಿ. ದಿಢೀರ್ ನಿರ್ಧಾರಗಳನ್ನು ತಪ್ಪಿಸಿ.
ಕನ್ಯಾ ರಾಶಿಯ ಆರೋಗ್ಯ ಜಾತಕ (Virgo Health Horoscope)
ಕನ್ಯಾ ರಾಶಿಯ ಜನರು ಇಂದು ತಮ್ಮ ಬಗ್ಗೆ ಕಾಳಜಿ ವಹಿಸುವುದು ಮುಖ್ಯ. ಒತ್ತಡ ಉಂಟಾಗಬಹುದು, ಆದ್ದರಿಂದ ನಿಮ್ಮ ದೈನಂದಿನ ಜೀವನದಲ್ಲಿ ಧ್ಯಾನ ಅಥವಾ ಯೋಗವನ್ನು ಸೇರಿಸಿಕೊಳ್ಳಿ. ದೈಹಿಕ ಚಟುವಟಿಕೆಯು ನಿಮ್ಮ ಮನಸ್ಥಿತಿ ಮತ್ತು ಶಕ್ತಿಯ ಮಟ್ಟವನ್ನು ಹೆಚ್ಚಿಸಬಹುದು. ನಿಮ್ಮ ಆಹಾರಕ್ರಮಕ್ಕೆ ಗಮನ ಕೊಡಿ.
ಕನ್ಯಾ ರಾಶಿಯವರಿಗೆ ತಿಳಿದಿರಲೇಬೇಕಾದ ಮಾಹಿತಿಯಿದು
ಕನ್ಯಾ ರಾಶಿಯ ಅಧಿಪತಿ: ಬುಧ, ಕನ್ಯಾ ರಾಶಿಯವರಿಗೆ ಶುಭ ದಿನಾಂಕಗಳು: 2, 3, 5, 6, 7, 14, 24, 31, 19. ಕನ್ಯಾ ರಾಶಿಯವರಿಗೆ ಶುಭ ದಿನಗಳು: ಭಾನುವಾರ, ಬುಧವಾರ, ಗುರುವಾರ ಮತ್ತು ಶುಕ್ರವಾರ. ಕನ್ಯಾ ರಾಶಿಯವರಿಗೆ ಶುಭ ವರ್ಣ: ಹಳದಿ, ಬಿಳಿ ಮತ್ತು ಹಸಿರು. ಕನ್ಯಾ ರಾಶಿಯವರಿಗೆ ಅಶುಭ ವರ್ಣ: ನೀಲಿ ಮತ್ತು ಕೆಂಪು. ಕನ್ಯಾ ರಾಶಿಯವರಿಗೆ ಶುಭ ದಿಕ್ಕು: ದಕ್ಷಿಣ. ಕನ್ಯಾ ರಾಶಿಯವರಿಗೆ ಶುಭ ತಿಂಗಳು: ಜೂನ್ 15ರಿಂದ ಆಗಸ್ಟ್ 14 ಮತ್ತು ಡಿಸೆಂಬರ್ 15ರಿಂದ ಜನವರಿ 14. ಕನ್ಯಾ ರಾಶಿಯವರಿಗೆ ಶುಭ ಹರಳು: ಹಸಿರು ಪಚ್ಚೆ, ಝೆರ್ಕೋನ್ ಮತ್ತು ನೀಲಮಣಿ. ಕನ್ಯಾ ರಾಶಿಯವರಿಗೆ ಶುಭ ರಾಶಿ: ಮಕರ, ವೃಷಭ ಮತ್ತು ಮಿಥುನ. ಕನ್ಯಾ ರಾಶಿಯವರಿಗೆ ಅಶುಭ ರಾಶಿ: ವೃಶ್ಚಿಕ, ಮೇಷ ಮತ್ತು ಸಿಂಹ.
ಕನ್ಯಾ ರಾಶಿಯವರಿಗೆ ಶುಭ ಫಲಕ್ಕಾಗಿ ಸರಳ ಪರಿಹಾರಗಳು
1) ವಿಷ್ಣು ಸಹಸ್ರನಾಮ: ಪ್ರತಿದಿನ ಶ್ರೀ ವಿಷ್ಣು ಸಹಸ್ರನಾಮ ಪಠಿಸುವುದರಿಂದ ಅಥವ ಕೇಳುವುದರಿಂದ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ಆತ್ಮವಿಶ್ವಾಸ ಹೆಚ್ಚುವುದರೊಂದಿಗೆ ಮಾನಸಿಕ ಒತ್ತಡವೂ ಕಡಿಮೆ ಆಗುತ್ತದೆ.
2) ಈ ದಾನಗಳಿಂದ ಶುಭ ಫಲ: ಬಿಳಿ ಬಟ್ಟೆ ಮತ್ತು ಗೋಧಿಯನ್ನು ದಾನ ನೀಡುವುದರಿಂದ ಖರ್ಚುವೆಚ್ಚಗಳು ಕಡಿಮೆ ಆಗಲಿವೆ.
3) ದೇವಸ್ಥಾನ ಮತ್ತು ದೇವರ ಪೂಜೆ: ಶ್ರೀ ಲಕ್ಷ್ಮೀದೇವಿಯ ದೇವಸ್ಥಾನಕ್ಕೆ ಅಕ್ಕಿ, ಬೆಲ್ಲ ಮತ್ತು ತೊಗರಿ ಬೇಳೆ ನೀಡುವುದರಿಂದ ಎಲ್ಲ ವಿಧದಲ್ಲಿಯೂ ಪ್ರಗತಿ ದೊರೆಯುತ್ತದೆ. ಶ್ರೀ ದುರ್ಗಾಮಾತೆಗೆ ಅಭಿಷೇಕ ಮಾಡಿಸುವುದರಿಂದ ವಾದ-ವಿವಾದಗಳು ಕಡಿಮೆಯಾಗಲಿವೆ.
4) ಈ ಬಣ್ಣದ ಕರವಸ್ತ್ರ ಉಪಯೋಗಿಸಿ: ಹಸಿರು, ನೀಲಿ ಮತ್ತು ಹಾಲಿನ ಬಣ್ಣದ ಕರವಸ್ತ್ರ ಬಳಸಿದರೆ ನಿರೀಕ್ಷಿತ ಫಲಗಳು ದೊರೆಯಲಿವೆ.
ಗಮನಿಸಿ: ಇದು ವೈದಿಕ ಜ್ಯೋತಿಷ್ಯದ ಪದ್ಧತಿಯಲ್ಲಿ ಗೋಚಾರ ಆಧರಿಸಿದ ಬರಹ. ನಿಖರ ವಿವರ ಮತ್ತು ಸಮರ್ಪಕ ಪರಿಹಾರಗಳಿಗಾಗಿ ಓದುಗರು ತಮ್ಮ ಜನ್ಮಜಾತಕವನ್ನು ಸಹ ಪರಿಗಣಿಸಬೇಕು. ನಿಮ್ಮ ಕುಲಗುರುಗಳು ಅಥವಾ ಜ್ಯೋತಿಷಿಗಳ ಸಲಹೆ ಪಡೆಯಬೇಕು. ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.